ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ 14 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು  ಮಾಡಿಕೊಂಡಿದ್ದಾನೆ. ಮೃತ ಬಾಲಕನನ್ನು ಮಿಥುನ್ ಎಂದು ಗುರುತಿಸಲಾಗಿದ್ದು,  ನಿಖರ ಕಾರಣ ತಿಳಿದುಬಂದಿಲ್ಲ.

ಕೊಡಗು (ಜು.3): ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಾಲಿಬೆಟ್ಟ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಕವಿರತ್ನ ದಂಪತಿಗಳ ಪುತ್ರ ಮಿಥುನ್ (14) ಎಂಬತಾನೇ ಮೃತ ಬಾಲಕ. ಮೃತ ಮಿಥುನ್ ಅಮ್ಮತ್ತಿ ನೇತಾಜಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ. ತೀವ್ರ ಮಳೆ ಇದ್ದ ಹಿನ್ನೆಲೆಯಲ್ಲಿ ಇಂದು ಶಾಲೆಗೆ ರಜೆ ಇತ್ತು. ಹೀಗಾಗಿ ವಿದ್ಯಾರ್ಥಿ ಮಿಥುನ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕನ ಆತ್ಮಹತ್ಯೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ.

ನೇಣು ಬಿಗಿದುಕೊಂಡು ಆಟೋ ಚಾಲಕನೂ ದುರ್ಮರಣ:

ಇತ್ತ ವಿರಾಜಪೇಟೆ ಕೆ.ಬೋಯಿಕೇರಿ ನಿವಾಸಿ ಆಟೋ ಚಾಲಕ ಸಾಗರ್ (30) ನೇಣುಬಿಗಿದು ದುರಂತ ಸಾವು ತಂದುಕೊಂಡಿದ್ದಾನೆ. ವಿರಾಜಪೇಟೆ ಗಾಂಧಿನಗರದಲ್ಲಿ ವಾಸವಿದ್ದ ಸಾಗರ್. ತಾನು ವಾಸವಿದ್ದ ಮನೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.