Asianet Suvarna News Asianet Suvarna News

ಮಂಗಳೂರು: ನರ್ಸಿಂಗ್‌ ಕೋರ್ಸ್‌ಗೆ ಸೇರಿದ ವಾರದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ!

ಕೇರಳ ಮೂಲದ ನರ್ಸಿಂಗ್‌ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಳಚ್ಚಿಲ್‌ನ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಡಿ.8ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

A student committed suicide within a week of joining the nursing course at mangaluru rav
Author
First Published Dec 12, 2023, 8:17 AM IST

 ಮಂಗಳೂರು (ಡಿ.12): ಕೇರಳ ಮೂಲದ ನರ್ಸಿಂಗ್‌ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಳಚ್ಚಿಲ್‌ನ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಡಿ.8ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೇರಳದ ಅಲೆಪ್ಪಿ ನಿವಾಸಿ ಸಚಿನ್ ಸಾಜು (19) ಮೃತ ವಿದ್ಯಾರ್ಥಿ. ಶ್ರೀನಿವಾಸ್ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಅವರು ಕಳೆದ ನ.30ರಂದು ಕಾಲೇಜು ಪ್ರವೇಶ ಪಡೆದಿದ್ದರು. ಡಿ.8ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ನಡುವೆ ಹಾಸ್ಟೆಲ್ ಕೋಣೆಯಲ್ಲಿ ಬೆಡ್‌ಶೀಟ್ ಬಳಸಿ ನೇಣು ಹಾಕಿಕೊಂಡಿದ್ದಾರೆ.

ಆತ್ಮಹತ್ಯೆಗೆ ಖಿನ್ನತೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗಿಂತ ಹಿಂದಿನ ಎರಡು ದಿನ ಅವರು ತರಗತಿಗೆ ಹಾಜರಾಗಿರಲಿಲ್ಲ. ಹಾಸ್ಟೆಲ್‌ನಲ್ಲಿ ರೂಮ್‌ಮೇಟ್‌ಗಳು ಇಲ್ಲದಿರುವ ಸಮಯ ನೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

 

ಎರಡು ತಿಂಗಳಿಂದ ವೇತನ ನೀಡದೆ ಕಿರುಕುಳ; ಪೌರಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಖಿನ್ನತೆ ನಿರ್ವಹಣೆಗೆ ಟೆಲಿಮನಸ್ ಸಹಾಯವಾಣಿ

ಪ್ರತಿಯೊಬ್ಬ ವ್ಯಕ್ತಿಗೂ ಜೀವನದ ಯಾವುದಾದಾರೂ ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಕಂಡುಬರುವ ಸಾಧ್ಯತೆ ಇದ್ದು, ಅಂತಹ ಸಂದರ್ಭದಲ್ಲಿ ಇನ್ನೊಬ್ಬರ ಜತೆ ವಿಷಯ ಹಂಚಿಕೊಳ್ಳುವ ಅಥವಾ ಸಮಸ್ಯೆಯ ತೀವ್ರತೆ ಹೆಚ್ಚಾದಾಗ ಮಾನಸಿಕ ತಜ್ಞರೊಂದಿಗೆ ತಪ್ಪದೇ ಸಮಾಲೋಚಿಸಿ ಅಥವಾ ಟೆಲಿಮನಸ್ ಸಹಾಯವಾಣಿ 14416ಗೆ ಕರೆ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೈ. ರಮೇಶಬಾಬು ಮನವಿ ಮಾಡಿದರು.

ಬೆಂಗಳೂರು ಹೆಂಡ್ತಿ ಹಳ್ಳಿ ಮನೆಗೆ ಬರ್ತಿಲ್ಲಾಂತ ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ಗಂಡ

ರಾಜ್ಯ ಸರ್ಕಾರವು ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಟೆಲಿಮನಸ್ ಎಂಬ 14416 ಉಚಿತ ಸಹಾಯವಾಣಿ ಆರಂಭಿಸಿದ್ದು, ಯಾರಾದರೂ ವ್ಯಥೆಗೆ ಒಳಪಟ್ಟವರು, ಪರೀಕ್ಷಾ ಒತ್ತಡಕೊಳ್ಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆ ಮಾಡುವರು, ಮಾದಕ ವಸ್ತು ವ್ಯಸನಿಗಳು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕಶಕ್ತಿ ತೊಂದರೆ ಉಳ್ಳವರು, ಆರ್ಥಿಕ ಒತ್ತಡದಲ್ಲಿ ಇರುವವರು ಅಥವಾ ಇತರೆ ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಸಹಾಯವಾಣಿಗೆ ಕರೆ ಮಾಡುವುದರ ಮೂಲಕ ಸೌಲಭ್ಯ ಪಡೆಯಬಹುದು. ಕರೆ ಮಾಡಿದವರ ವಿವರ ಗೌಪ್ಯವಾಗಿ ಇಡಲಾಗುವುದು. ಧ್ವನಿಮುದ್ರಣ ಮಾಡುವುದಿಲ್ಲ 
 

Follow Us:
Download App:
  • android
  • ios