ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿ ಹತ್ತು ತಿಂಗಳಲ್ಲೇ ಕುಸಿದು ಬಿದ್ದ ಶಾಲಾ ಕಟ್ಟಡ; ಓರ್ವ ವಿದ್ಯಾರ್ಥಿನಿ ಗಂಭೀರ ಗಾಯ!
ತರಗತಿ ನಡೆಯುತ್ತಿದ್ದ ವೇಳೆ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ತಾಲೂಕಿನ ಅರಸಿಗೇರಾ ಗ್ರಾಮದ ಸರ್ಕಾರ ಶಾಲೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಬಾಲಕಿ ಗಂಭೀರ ಗಾಯಗೊಂಡಿದ್ದು, ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ.
ರಾಯಚೂರು (ಡಿ.28): ತರಗತಿ ನಡೆಯುತ್ತಿದ್ದ ವೇಳೆ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ತಾಲೂಕಿನ ಅರಸಿಗೇರಾ ಗ್ರಾಮದ ಸರ್ಕಾರ ಶಾಲೆಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಓರ್ವ ಬಾಲಕಿ ಗಂಭೀರ ಗಾಯಗೊಂಡಿದ್ದು, ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. ಗಾಯಾಳು ವಿದ್ಯಾರ್ಥಿಗಳನ್ನು ಕೂಡಲೇ ರಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ನೇಹಿತನ ಜೊತೆ ಚಾರಣಕ್ಕೆ ಬಂದು ನಾಪತ್ತೆ ಪ್ರಕರಣ; 4 ದಿನಗಳ ಬಳಿಕ ಶವವಾಗಿ ಪತ್ತೆ!
ಇನ್ನೂ ಶಾಲೆ ಕಟ್ಟಡ ನಿರ್ಮಾಣವಾಗಿ ಕೇವಲ ಒಂದು ವರ್ಷವಷ್ಟೇ ಕಳೆದಿದೆ. ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿ ಹತ್ತು ತಿಂಗಳು ಕಳೆಯುವ ಮೊದಲೇ ದುರಂತ ನಡೆದಿದೆ. ನಿರ್ಮಿತಿ ಕೇಂದ್ರದ ವತಿಯಿಂದ ಈ ಒಂದು ಶಾಲಾ ಕಟ್ಟಡ ಕಾಮಗಾರಿ ನಿರ್ಮಾಣವಾಗಿತ್ತು. ಶಾಲಾ ಕಟ್ಟಡ ಸಂಪೂರ್ಣ ಕಳಪೆಯಾಗಿದೆ. ಕಳಪೆ ವಸ್ತುಗಳಿಂದ ಬೇಕಾಬಿಟ್ಟಿಯಾಗಿ ಕಟ್ಟಡ ನಿರ್ಮಾಣ ಮಾಡಿದ್ದರಿಂದಲೇ ದುರಂತ ಸಂಭವಿಸಿದೆ. ಕಟ್ಟಡ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಯಚೂರು: ಮಂತ್ರಮಾಂಗಲ್ಯ ಪದ್ಧತಿಯಂತೆ ಮದುವೆಯಾದ ಸರ್ಕಾರಿ ನೌಕರರು..!