ಬೆಂಗಳೂರು ನಗರದಲ್ಲಿ ಸಂಜೆ, ರಾತ್ರಿ ಹೊತ್ತಿನಲ್ಲೇ ಹೆಚ್ಚು ಅಪಘಾತ ಸಂಭವಿಸುತ್ತಿದ್ದು, ರಾತ್ರಿ ಸಮಯದಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳಲ್ಲಿ ಬಹುತೇಕ ಮದ್ಯಸೇವಿಸಿ ವಾಹನ ಚಾಲನೆ ಮಾಡಿರುವ ಘಟನೆಗಳೇ ಹೆಚ್ಚಾಗಿವೆ.
ಬೆಂಗಳೂರು (ಅ.11) :ನಗರದಲ್ಲಿಸಂಜೆ, ರಾತ್ರಿ ಹೊತ್ತಿನಲ್ಲೇ ಹೆಚ್ಚು ಅಪಘಾತ ಸಂಭವಿಸುತ್ತಿದ್ದು, ರಾತ್ರಿ ಸಮಯದಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳಲ್ಲಿ ಬಹುತೇಕ ಮದ್ಯಸೇವಿಸಿ ವಾಹನ ಚಾಲನೆ ಮಾಡಿರುವ ಘಟನೆಗಳೇ ಹೆಚ್ಚಾಗಿವೆ.
ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ಇಂಥದೇ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಏರ್ಪೋರ್ಟ್ ರಸ್ತೆ ಸಮೀಪದ ಕೊಡಿಗೇಹಳ್ಳಿ ಮುಖ್ಯರಸ್ತೆಯಲ್ಲಿ ತಡರಾತ್ರಿ ನಡೆದಿರುವ ಈ ಅಪಘಾತದಲ್ಲಿ ನಿವೃತ್ತ ಯೋಧ ರವಿಶಂಕರ್(59) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹ ಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೋಟೆಲ್ ಸಿಬ್ಬಂದಿ ರಾಘವೇಂದ್ರ ಸೇರಿ ಫುಟ್‌ಪಾತ್ ಮೇಲೆ ನಿಂತಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಚಾಲಕ ಮದ್ಯಸೇವನೆ ಮಾಡಿ ಕಾರು ಚಲಾಯಿಸಿರುವುದೇ ಅಪಘಾತಕ್ಕೆ ಕಾರಣವಾಗಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
