TVS Excelಗೆ ಹಿಂದಿನಿಂದ ಬಸ್ ಡಿಕ್ಕಿ: ಬಸ್ ಚಕ್ರ ಹರಿದು ಮಹಿಳೆ ಸಾವು
ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್‌ನ ಚಕ್ರ ಉರುಳಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು (ನ.17): ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್‌ನ ಚಕ್ರ ಉರುಳಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ವಿ(48) ಮೃತ ದುರ್ದೈವಿ. ಈಕೆಯ ಪತಿ ಜೈಶಂಕರ್ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬನ್ನೇರುಘಟ್ಟ ಮುಖ್ಯರಸ್ತೆಯ ಮೀನಾಕ್ಷಿ ಮಾಲ್ ಬಳಿ ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಜೈಶಂಕರ್ ಮಾರತ್ತಹಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗುರುವಾರ ಬೆಳಗ್ಗೆ ಬಸವನಹಳ್ಳಿ ಕಡೆಯಿಂದ ಮಾರತ್ತಹಳ್ಳಿಯಲ್ಲಿರುವ ಪುತ್ರಿಯ ಮನೆಗೆ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಹಿಂದಿನಿಂದ ಅತೀವೇಗವಾಗಿ ಬಂದ ಖಾಸಗಿ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ದಂಪತಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಸೆಲ್ವಿ ಮೇಲೆಯೇ ಬಸ್‌ನ ಚಕ್ರ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೈಶಂಕರ್ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನನ್ನ ಪಕ್ಷಾಂತರ ಪ್ರಭಾವ ಪಂಚರಾಜ್ಯ ಚುನಾವಣೆ ಮೇಲೂ ಆಗಿದೆ: ಜಗದೀಶ್ ಶೆಟ್ಟರ್
ಅಪಘಾತಕ್ಕೆ ಖಾಸಗಿ ಬಸ್ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಖಾಸಗಿ ಬಸ್ ಜಪ್ತಿ ಮಾಡಿದ್ದು, ಅದರ ಚಾಲಕ ಕುಮಾರ್ ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಈ ಸಂಬಂಧ ಹುಳಿಮಾವು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಗನ ಸಾವು: ತಾಯಿ, ಸಹೋದರಿ ಆತ್ಮಹತ್ಯೆ: ಒಂದೆಡೆ ಅನಾರೋಗ್ಯಪೀಡಿತ ಮಗ ಸಾವಿಗೀಡಾಗಿದ್ದರೆ ಇನ್ನೊಂದೆಡೆ ಸಹೋದರಿ, ತಾಯಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ತಾಲೂಕಿನ ಸದಾಶಿವಳ್ಳಿ ಗ್ರಾಮ ಪಂಚಾಯಿತಿ ತಾರಗೋಡ ಮಾತ್ನಳ್ಳಿಯಲ್ಲಿ ನಡೆದಿದೆ. ನಾಡೆಲ್ಲ ದೀಪಾವಳಿಯಲ್ಲಿ ಮುಳುಗಿದ್ದರೆ ಈ ಕುಟುಂಬದ, ಊರಿನವರ ಶೋಕ ಮುಗಿಲು ಮುಟ್ಟಿತ್ತು. ಉದಯ ಬಾಲಚಂದ್ರ ಹೆಗಡೆ (27) ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾದ್ದರು.
ಆಪರೇಷನ್ ಕಮಲ ಮಾಡುವುದಿಲ್ಲ, ಭಯ ಬೇಡ: ಬಿ.ವೈ.ವಿಜಯೇಂದ್ರ
ಆರ್ಥಿಕವಾಗಿ ಸಾಧಾರಣವಾಗಿದ್ದ ಈ ಕುಟುಂಬ ಕೈಲಿದ್ದದ್ದೆಲ್ಲ ಖರ್ಚು ಮಾಡಿ ಆತನಿಗೆ ಶುಶ್ರೂಷೆಯನ್ನೂ ಕೊಡಿಸಿದ್ದರು. ಚಿಕಿತ್ಸೆಯ ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಸೋಮವಾರ ರಾತ್ರಿ ಆರೋಗ್ಯ ಸಮಸ್ಯೆ ತೀವ್ರಗೊಂಡು ಬುಧವಾರ ಬೆಳಗ್ಗೆ ಆರು ಗಂಟೆಗೆ ಉದಯ ಹೆಗಡೆ ಮೃತಪಟ್ಟಿದ್ದನು. ಮಗನ ಸಾವಿನಿಂದ ನೊಂದ ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಆತನ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (30) ಮನೆಯ ಜಂತಿಗೆ ವೇಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರ ಅಂತ್ಯಕ್ರಿಯೆಯನ್ನು ನೆಮ್ಮದಿ ರುದ್ರಭೂಮಿಯಲ್ಲಿ ಏಕಕಾಲದಲ್ಲಿ ನೆರವೇರಿಸಲಾಯಿತು.