ಮೈಸೂರಿನಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಭೀಕರ ಹತ್ಯೆ: ಆರೋಪಿ ಪರಾರಿ
ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಮಮತಾ (32) ಕೊಲೆಯಾದ ರ್ದುದೈವಿ.
ಮೈಸೂರು (ಮೇ.25): ಕಬ್ಬಿಣದ ರಾಡ್‌ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಮಮತಾ (32) ಕೊಲೆಯಾದ ರ್ದುದೈವಿ. 26 ವರ್ಷದ ಯುವಕ ಮೋಹನನಿಂದ ಕೃತ್ಯ ನಡೆದಿದ್ದು, ಸಿದ್ದಲಿಂಗಪುರ ಗ್ರಾಮದಲ್ಲಿ ಆರೋಪಿ ಮೋಹನ ಬೇಕರಿ ಇಟ್ಟುಕೊಂಡಿದ್ದ. ಗಂಡನಿಂದ ದೂರ ಇದ್ದ ಮಮತಾಳ ಜೊತೆ ಮೋಹನ ಸಂಬಂಧ ಬೆಳೆಸಿದ್ದು, ಇಬ್ಬರು ಒಟ್ಟಾಗಿ ಬೇಕರಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಇನ್ನು ನಿನ್ನೆ (ಮೇ.24) ಸಂಜೆ ಇಬ್ಬರ ನಡುವೆ ಏಕಾಏಕಿ ಮಾತಿಗೆ ಮಾತು ಬೆಳೆದು ಕೊಲೆ ಮಮತಾಳನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮೇಟಗಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯಿಂದ ಕೊಲೆಗೆ ನಿಖರ ಕಾರಣ ತಿಳಿಯಲಿದೆ.
ಶಿಕ್ಷಕನಿಂದ ಪತ್ನಿಯ ಕೊಲೆ: ಶಿಕ್ಷಕನೊಬ್ಬ ಪತ್ನಿಯ ಮೇಲಿನ ದ್ವೇಷದ ಹಿನ್ನೆಲೆಯಲ್ಲಿ ಮನೆಯಲ್ಲಿ ಮಕ್ಕಳು ಇಲ್ಲದ ಸಮಯದಲ್ಲಿ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆನಡೆಸಿ ಪತಿಯೇ ಕೊಲೆ ಮಾಡಿರುವ ಘಟನೆ ಗೌರಿಬಿದನೂರು ನಗರದ ಗಂಗಾನಗರದಲ್ಲಿ ನಡೆದಿದೆ. ಮೃತಳನ್ನು ಲಕ್ಷ್ಮೀದೇವಿ(40) ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಪತಿ ಕೃಷ್ಣಪ್ಪ ತನ್ನ ಪತ್ನಿ ಲಕ್ಷ್ಮೀದೇವಿಯ ಜೊತೆ ಜಗಳವಾಡಿ ಕೊಲೆ ಮಾಡಿ ಆಕೆಯ ಶವವನ್ನು ಮನೆಯಲ್ಲಿಯೇ ಇರಿಸಿ ಬೀಗ ಹಾಕಿ ಪರಾರಿಯಾಗಿದ್ದಾನೆ.
ರಾಜಧಾನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ: ಕೊಲೆಗೂ ಮುನ್ನ ಫ್ಲೆಕ್ಸ್ ಹರಿದ ಹಂತಕರು
ಶವ ಕೊಳೆತು ವಾಸನೆ ಬರುತ್ತಿದ್ದುದ್ದನ್ನು ಸೋಮವಾರ ಗಮನಿಸಿದ ಅಕ್ಕಪಕ್ಕದ ಮನೆಯವರು ಪೋಲಿಸರಿಗೆ ತಿಳಿಸಿದ್ದಾರೆ. ಮೃತಳ ಮಗಳು ಲಿಖಿತ ಎಂಬುವರನ್ನು ಕರೆಸಿ ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೃತಳ ಮಗಳು ಲಿಖಿತ ನೀಡಿದ ದೂರಿನನ್ವಯ ಗೌರಿಬಿದನೂರು ನಗರ ಠಾಣೆ ಪೋಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಮೊದಲ ಮಗಳು ಲಿಖಿತಳಿಗೆ ಮದುವೆ ಸಹಾ ಮಾಡಿದ್ದರು. ಎರಡನೇ ಮಗಳು ಇನ್ನು ವಿಧ್ಯಾಬ್ಯಾಸ ಮಾಡುತ್ತಿದ್ದಾಳೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಭೇಟಿ ನೀಡಿದ್ದರು.
ಚುನಾವಣೆಯಲ್ಲಿ ಸತತ ಸೋಲು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ
ಕಲ್ಲಿನಿಂದ ಜಜ್ಜಿ ಮಹಿಳೆಯ ಕೊಲೆ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರ ಕೋಲಾರ ರಸ್ತೆಯ ಶ್ರೀ ಸಾಯಿವಿದ್ಯಾನಿಕೇತನ್ ಶಾಲೆಯ ಸಮೀಪದಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯನ್ನು ಅಪರಿಚಿತರು ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಹಿಳೆ ಚಿಂದಿ ಆಯ್ದು ಜೀವನ ಮಾಡುತ್ತಿದ್ದರೆಂದು ಹೇಳಲಾಗಿದ್ದು ಘಟನ ಸ್ಥಳಕ್ಕೆ ಎಎಸ್‌ಪಿ ಭಾಸ್ಕರ್. ಡಿವೈಎಸ್‌ಪಿ ಟಿ.ಆರ್.ಜ್ಯೆಶಂಕರ್ ನಗರಠಾಣಿ ಸಬ್‌ಇನ್ಸ್‌ಪೆಕ್ಟರ್ ಆರ್.ಸುರೇಶ್ ಭೇಟಿ ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ.