ಕಲಬುರಗಿ; 70 ವರ್ಷದ ವೃದ್ದೆಯನ್ನು ಅತ್ಯಾಚಾರ ಮಾಡಿದ ಯುವಕ!
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ 70 ವರ್ಷದ ವೃದ್ದೆ ಮೇಲೆ ಯುವಕನೋರ್ವ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಕಳೆದ ಕೆಲ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದಾಗಿ ವೃದ್ದೆ ಮನೆಯಲ್ಲಿಯೇ ಇದ್ದರು.
ಕಲಬುರಗಿ (ನ.7): ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ 70 ವರ್ಷದ ವೃದ್ದೆ ಮೇಲೆ ಯುವಕನೋರ್ವ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. ಕಳೆದ ಕೆಲ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದಾಗಿ ವೃದ್ದೆ ಮನೆಯಲ್ಲಿಯೇ ಇದ್ದರು. ಮೊಮ್ಮಗಳ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲ ವೇಳೆ ಯುವಕ ವೃದ್ಧೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಅಣ್ಣೂರು ಗ್ರಾಮದ ಸಂತೋಷ್ ಅನ್ನೋ 28 ವರ್ಷದ ಯುವಕನ ವಿರುದ್ಧ ಕೇಸು ದಾಖಲಾಗಿದೆ. ನಿನ್ನೆ ಮಧ್ಯಾಹ್ನ ಮನೆಯ ಬಾಗಿಲು ಹಾಕಿಕೊಂಡು ಮೊಮ್ಮಗಳು ಹೊರಹೋಗಿದ್ದಳು. ಇದೇ ಸಮಯದಲ್ಲಿ ಮನೆಗೆ ಬಂದು ಯುವಕ ವೃದ್ದೆಯನ್ನು ಅತ್ಯಾಚಾರ ಮಾಡಿದ್ದಾನೆ. ಅಸ್ವಸ್ಥವಾಗಿರುವ ವೃದ್ದೆಯನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು
ಅತ್ಯಾಚಾರಿಗಳ ಆಸ್ತಿ ಮುಟ್ಟುಗೋಲಿಗೆ ಒತ್ತಾಯ
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಹಾಗೂ ಅವರ ಆಸ್ತಿಪಾಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿ ಶನಿವಾರ ನವ ಕರ್ನಾಟಕ ಸ್ವಾಭಿಮಾನ ವೇದಿಕೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಸುಮಾ ಎಸ್. ಕವಾಲ್ದಾರ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನ ಮಾಡಿದರು.
ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಬಡ ಕುಟುಂಬಗಳ ಮೇಲೆ ಅನ್ಯಾಯ ಮತ್ತು ದೌರ್ಜನ್ಯಗಳು ನಡೆಯುತ್ತಿದ್ದರೂ ಸಹ ಭ್ರಷ್ಟರಾಜಕಾರಣಿಗಳು ಕಣ್ಣು ಮುಚ್ಚಿ ಕುಳಿತುಕೊಂಡಿದ್ದಾರೆ. ಅದೇ ಅವರ ಮಕ್ಕಳಿಗೆ ಇಂತಹ ಅನ್ಯಾಯ ಆದರೆ ವಾರಗಂಟಲೇ ಸುದ್ದಿ ವಾಹಿನಿಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಆದಾಗ್ಯೂ, ಬಡ ಕುಟುಂಬಗಳಿಗೆ ನ್ಯಾಯ ದೊರಕುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಕೂಡಲೇ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವುದರೊಂದಿಗೆ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿನ ಕನ್ನಡಪರ ಸಂಘಟನೆಗಳು ಒಟ್ಟುಗೂಡಿ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
2012 ಅತ್ಯಾಚಾರ, ಕೊಲೆ ಕೇಸ್: ಮೂವರ ಗಲ್ಲುಶಿಕ್ಷೆ ಖುಲಾಸೆಗೊಳಿಸಿದ Supreme
ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
ಕಲಬುರಗಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ಇಲ್ಲಿನ ಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೋ) ನ್ಯಾಯಾಲಯ -ಎಸ್.ಟಿ.ಎಸ್.ಸಿ-1 ನ್ಯಾಯಾಧೀಶ ಯಮನಮಪ್ಪ ಬಮ್ಮಣಗಿ ಅವರು 20 ವರ್ಷ ಜೈಲು ಶಿಕ್ಷೆ, 20 ಸಾವಿರ ರು. ದಂಡ ವಿಧಿಸಿದ್ದಾರೆ. ಅಫಜಲಪುರ ತಾಲೂಕಿನ ಅತನೂರ ಗ್ರಾಮದ ಮಹ್ಮದ್ ರಫಿ ಅಲಿಯಾಸ್ ಮಹ್ಮದ್ ರಫೀಕ್ ನದಾಫ್ ತಂದೆ ಸಫನಸಾಬ ನದಾಫ್ ಎಂಬಾತನೆ ಜೈಲು ಶಿಕ್ಷೆಗೆ ಗುರಿಯಾದ ಆರೋಪಿ. ಈತ ಫೆ.28, 2020ರಂದು ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಎಲ್ಲಾದರು ಓಡಿ ಹೋಗಿ ಮದುವೆ ಮಾಡಿಕೊಳ್ಳೋಣ ಎಂದು ಹೇಳಿದ್ದಾನೆ. ಇದಕ್ಕೆ ಬಾಲಕಿ ಒಪ್ಪದೇ ಇದ್ದಾಗ ಕೊಲೆ ಮಾಡುವ ಬೆದರಿಕೆ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಈ ಸಂಬಂಧ ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಫಜಲಪುರದ ಆಗಿನ ಸಿಪಿಐ ಮಹಾದೇವ ಪಂಚಮುಖಿ ಅವರು ಪ್ರಕರಣದ ತನಿಖೆ ನಡೆಸಿ ಪೋಕ್ಸೋ ಕಾಯ್ದೆ ಪ್ರಕಾರ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ತುಪ್ಪದ ಅವರು ವಾದ ಮಂಡಿಸಿದ್ದರು.