Asianet Suvarna News Asianet Suvarna News

ಎಮ್ಮೆ ಮಾರಾಟ ವಿಚಾರಕ್ಕೆ ಯುವಕನ ಮೇಲೆ ಹಲ್ಲೆ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಎಮ್ಮೆ ಮಾರಾಟದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮುಸ್ಲಿಂ ಯುವಕನೋರ್ವ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಘಟನೆ ಖಂಡಿಸಿ ಇಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮುಧೋಳದಲ್ಲಿ ಪ್ರತಿಭಟನೆ ನಡೆಸಿದರು.

A young man assault by muslim youth case pro hindu activists protest at mudhol bagalkote district rav
Author
First Published May 25, 2024, 3:04 PM IST

ಬಾಗಲಕೋಟೆ (ಮೇ.25): ಎಮ್ಮೆ ಮಾರಾಟದ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮುಸ್ಲಿಂ ಯುವಕನೋರ್ವ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ.

ನಿನ್ನೆ ಸಂಜೆ ನಡೆದಿರುವ ಗಲಾಟೆಯಲ್ಲಿ ಅವಿನಾಶ್ ಎಂಬಾತನ ಮೇಲೆ ಸೈಫನ್ ಸಾಬ್ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಎಮ್ಮೆ ಮಾರಾಟ ಮಾಡಿದ ಯುವಕ ಬಾಕಿ ಹಣ ಕೇಳಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಸೈಫನ್. ಘಟನೆ ಮಾಹಿತಿ ತಿಳಿದು ಹಿಂದೂ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮುಧೋಳದ ರನ್ನ ಸರ್ಕಲ್‌ನಲ್ಲಿ ಜಮಾಯಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪಿಯನ್ನ ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು.

ಭಕ್ತರು ನೀಡಿದ್ದ ಹಸುಗಳು ಕಸಾಯಿಖಾನೆಗೆ! ನೀರಮಾನ್ವಿ ಯಲ್ಲಮ್ಮ ದೇವಸ್ಥಾನದ ಅರ್ಚಕರ ವಿರುದ್ಧ ಭಕ್ತರು ಆಕ್ರೋಶ!

ಸದ್ಯ ಘಟನೆ ಸಂಬಂಧ ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Latest Videos
Follow Us:
Download App:
  • android
  • ios