ಭಾರತ ವಿಶ್ವಕಪ್‌ ಗೆದ್ದ ಖುಷಿಯಲ್ಲಿ ವೇಗದ ಬೈಕ್ ರೈ ಡ್‌ಗೆ ಯುವಕ ಬಲಿ!

ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

A young man died in road accident after T20 world cup final match watch rav

ಬೆಂಗಳೂರು (ಜು.1) : ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುರುಬರಹಳ್ಳಿ ನಿವಾಸಿ ಕುಮಾರಸ್ವಾಮಿ(28) ಮೃತ ಸವಾರ. ಬೊಮ್ಮನಹಳ್ಳಿ ನಿವಾಸಿ ನವೀನ್‌ ಕುಮಾರ್‌ ಗಾಯಗೊಂಡಿರುವ ಹಿಂಬದಿ ಸವಾರ. ಭಾನುವಾರ ಮುಂಜಾನೆ ಸುಮಾರು 1.30ಕ್ಕೆ ಬೊಮ್ಮನಹಳ್ಳಿ ಆಕ್ಸ್‌ಫರ್ಡ್‌ ಕಾಲೇಜು ಸಮೀಪದ ಸರ್ವಿಸ್‌ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಮೈಸೂರು: ಕ್ರೆಡಿಟ್ ಕಾರ್ಡ್ ಸಾಲಕ್ಕೆ ಹೆದರಿ ಯುವಕ ಆತ್ಮಹತ್ಯೆ

ಸವಾರ ಕುಮಾರಸ್ವಾಮಿ ಪೀಣ್ಯದ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಈತನ ಸ್ನೇಹಿತ ಶಿವಮೊಗ್ಗ ಮೂಲದ ನವೀನ್‌ ಕುಮಾರ್‌ ಬೊಮ್ಮನಹಳ್ಳಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಶನಿವಾರ ರಾತ್ರಿ ಟಿ-20 ವಲ್ಡ್‌ ಕಪ್‌(T20 world cup final match) ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯ ಇದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ, ಕೆಲಸ ಮುಗಿಸಿಕೊಂಡು ರಾತ್ರಿ ಬೊಮ್ಮನಹಳ್ಳಿಯ ಸ್ನೇಹಿತ ನವೀನ್‌ ಕುಮಾರ್‌ ರೂಮ್‌ಗೆ ತೆರಳಿದ್ದ. ಇಬ್ಬರು ಟಿವಿಯಲ್ಲಿ ಪಂದ್ಯ ವೀಕ್ಷಿಸಿದ್ದು, ಫೈನಲ್‌ನಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ.

ಭಾರತ ಗೆದ್ದ ಖುಷಿಯಲ್ಲಿ ಸ್ನೇಹಿತರಿಬ್ಬರು ದ್ವಿಚಕ್ರ ವಾಹನದಲ್ಲಿ ಮುಂಜಾನೆ ಬೊಮ್ಮನಹಳ್ಳಿಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದರು. ಮಾರ್ಗ ಮಧ್ಯೆ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್‌ ಕಾಲೇಜು ಸಮೀಪದ ಸರ್ವಿಸ್‌ ರಸ್ತೆಯಲ್ಲಿ ಹೋಗುವಾಗ ಕುಮಾರಸ್ವಾಮಿ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರರಿಬ್ಬರೂ ದ್ವಿಚಕ್ರ ವಾಹನ ಸಹಿತ ರಸ್ತೆ ವಿಭಜಕದ ಮೇಲೆ ಬಿದ್ದಿದ್ದಾರೆ.

ಹೆಲ್ಮೆಟ್‌ ಹಾಕದ್ದಕ್ಕೆ ದುರಂತ

ಇಬ್ಬರೂ ಹೆಲ್ಮೆಟ್‌ ಧರಿಸದ ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ಇಬ್ಬರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಸವಾರ ಕುಮಾರಸ್ವಾಮಿ ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಹಿಂಬದಿ ಸವಾರ ನವೀನ್‌ ಕುಮಾರ್‌ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತ ಸವಾರ ಕುಮಾರಸ್ವಾಮಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಚಲಿಸುತ್ತಿರುವ ರೈಲಿನಲ್ಲಿ ಕುಸಿದು ಬಿದ್ದ ಮಿಡಲ್‌ ಬರ್ತ್‌, ಪ್ರಯಾಣಿಕನ ದಾರುಣ ಸಾವು!

ಅತಿವೇಗವೇ ಅಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಹೆಲ್ಮೆಟ್‌ ಧರಿಸಿದ್ದರೆ ಸವಾರ ಕುಮಾರಸ್ವಾಮಿ ಬದುಕುಳಿಯುವ ಸಾಧ್ಯತೆ ಇತ್ತು. ಈ ಅಪಘಾತ ಸಂಬಂಧ ಮಡಿವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Latest Videos
Follow Us:
Download App:
  • android
  • ios