ರಾಯಚೂರು ಮೂಲದ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ನಗರದ ಕೋಣನಕುಂಟೆ 80 ಅಡಿ ರಸ್ತೆಯ ಹೋಟೆಲ್ ಒಂದರ ಪಕ್ಕದ ಖಾಲಿ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು (ಏ.7): ರಾಯಚೂರು ಮೂಲದ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ನಗರದ ಕೋಣನಕುಂಟೆ 80 ಅಡಿ ರಸ್ತೆಯ ಹೋಟೆಲ್ ಒಂದರ ಪಕ್ಕದ ಖಾಲಿ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೃತ ಯುವಕ ವೀರೇಶ್(27) ಎಂದು ಗುರುತಿಸಲಾಗಿದೆ. ಯುವಕ ರಾಯಚೂರು ಮೂಲದನಾಗಿದ್ದು, ಬೆಂಗಳೂರಿನ ಕೋಣನಕುಂಟೆಯಲ್ಲಿ 80 ಅಡಿ ರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಯುವಕ. ಅದೇ ಕಟ್ಟದಲ್ಲಿ ಉಳಿದುಕೊಂಡಿದ್ದ. ಆದರೆ ಇಂದು ಬೆಳಗ್ಗೆ ಅನುಮಾನಸ್ಪಾದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ವೀರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನಾ? ಅಥವಾ ಕೊಲೆಯಾಗಿದ್ದಾನಾ ಎಂಬ ಬಗ್ಗೆ ಪೊಲೀಸರಿಗೆ ಅನುಮಾನ ಹುಟ್ಟಿಸಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆಯ ಶವ..!ಅತ್ಯಾಚಾರ ಮಾಡಿದವನು ಕೊಲೆಯನ್ನೂ ಮಾಡಿದ್ನಾ ?

ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಆದರೆ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲ. ಸ್ಥಳಕ್ಕೆ ಎಫ್‌ಎಸ್‌ಎಲ್ ಟೀಂ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸದ್ಯ ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಕೋಣನಕುಂಟೆ ಪೊಲೀಸರಿಂದ Crpc 174Cರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿರುವ ಪೊಲೀಸರು.