ಆದಾಯ ಮೀರಿ ಶೇ.216ರಷ್ಟು ಆಸ್ತಿ: ರಾಮನಗರ ಉಪವಿಭಾಗಾಧಿಕಾರಿ ಮಂಜುನಾಥ್ ಅಮಾನತು
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ರಾಮನಗರ ಉಪವಿಭಾಗಾಧಿಕಾರಿ ಸಿ.ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ರಾಮನಗರ (ಮಾ.20): ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ರಾಮನಗರ ಉಪವಿಭಾಗಾಧಿಕಾರಿ ಸಿ.ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು, 1957ರ ನಿಯಮ 10(1)(ಎಎ)ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಸಿ.ಮಂಜುನಾಥ್ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ಬಾಕಿ ಇಟ್ಟು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
ಉಪವಿಭಾಗಾಧಿಕಾರಿ ಮಂಜುನಾಥ್ 8,32,77,750 ರು.ಗಳಷ್ಟುಸ್ಥಿರಾಸ್ತಿ ಮತ್ತು 1,11,00,000 ರು.ಗಳಷ್ಟುಚರಾಸ್ತಿ, 9,43,77,750 ರು.ಗಳಷ್ಟುವೆಚ್ಚ ಸೇರಿ ಒಟ್ಟು ಆಸ್ತಿ ಮತ್ತು ಖರ್ಚುಗಳ ಮೌಲ್ಯ 2,98,42,000 ರು.ಗಳಷ್ಟುಆದಾಯ ಹೊಂದಿರುವುದು ಅಂದಾಜಿಸಿದ್ದು, ಆರೋಪಿ ಆದಾಯಕ್ಕಿಂತ 6,45,35,750 ರು.ಗಳಷ್ಟುಹೆಚ್ಚುವರಿ ಅಕ್ರಮ ಆಸ್ತಿ ಹೊಂದಿದ್ದಾರೆ. ಇದು ಅವರ ಆದಾಯಕ್ಕಿಂತ ಶೇಕಡ 216.25ರಷ್ಟು ಹೆಚ್ಚುವರಿಯಾಗಿರುವುದು ಎಸಿಬಿ ಪ್ರಾಥಮಿಕ ತನಿಖೆಯಿಂದ ಕಂಡು ಬಂದಿದೆ.
ಕೆಆರ್‌ಪಿಪಿ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ: ಜನಾರ್ದನ ರೆಡ್ಡಿ
ಏನಿದು ಪ್ರಕರಣ: 2022ರ ಮಾ.16ರಂದು ರಾಮನಗರ ಉಪವಿಭಾಗಾಧಿಕಾರಿ ಸಿ.ಮಂಜುನಾಥ್ ಕಚೇರಿ, ಬೆಂಗಳೂರಿನ ಮನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇವರಿಗೆ ಸಂಬಂಧಿಸಿದ ಸ್ಥಿರಾಸ್ತಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಗಳ ತಂಡ ದಾಳಿ ನಡೆಸಿತ್ತು. ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಮಂಜುನಾಥ್ ಮತ್ತು ಅವರ ಮಾವನ ಮನೆ, ರಾಮನಗರದ ಮಿನಿ ವಿಧಾನಸೌದದಲ್ಲಿನ ಉಪವಿಭಾಗಾಧಿಕಾರಿ ಕಚೇರಿ, ಹೆಸರಘಟ್ಟದ ಕುಕ್ಕೇನಹಳ್ಳಿ ಬಳಿಯ ಸರ್ವೇ ನಂಬರ್‌ನಲ್ಲಿರುವ ಫಾರಂ ಹೌಸ್, ಅವರ ತಾಯಿ ಹಾಗೂ ಸಹೋದರನ ಮನೆ, ಜಕ್ಕೂರು ಬಳಿಯ ಅಪಾರ್ಚ್‌ಮೆಂಟ್ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು.
ಆಪಾದಿತರು ಅವರ ಆದಾಯಕ್ಕಿಂತ 6,45,35,750 ರು.ಗಳಷ್ಟು ಅಕ್ರಮ ಆಸ್ತಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಕೇಂದ್ರ ವಲಯದ ಅಧೀಕ್ಷರರು 19 ಮಾಚ್‌ರ್ 2022ರಂದು ಮಂಜುನಾಥ್ ಆದಾಯಕ್ಕಿಂತ ಶೇ.216.25ನಷ್ಟು ಹೆಚ್ಚು ಆಸ್ತಿ ಹೊಂದಿರುವುದಾಗಿ ವರದಿ ಸಲ್ಲಿಸಿದ್ದರು. ಇನ್ನು ಹೆಚ್ಚಿನ ಆಸ್ತಿ ವಿವರಗಳು ಲಭ್ಯವಾಗಿದ್ದು, ಶೇಕಡವಾರು ಅಕ್ರಮ ಸಂಪತ್ತಿನ ಮೌಲ್ಯ ಹೆಚ್ಚಾಗುವ ಸಾಧ್ಯತೆ ಇದೆ. ಆರೋಪಿಯನ್ನು ಪ್ರಸ್ತುತ ಇರುವ ಹುದ್ದೆಯಲ್ಲೇ ಮುಂದುವರಿಸಿದಲ್ಲಿ ಅವರು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ, ಸಾಕ್ಷ್ಯಾಧಾರಗಳನ್ನು ನಾಶಪಡಿಸುವ, ತಿದ್ದುವ, ತಿರುಚುವ ಸಾಧ್ಯತೆ ಇರುವುದರಿಂದ ಆರೋಪಿಯನ್ನು ಅಮಾನತುಗೊಳಿಸಿ, ಲೀನ್ ಬದಲಾವಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದರು.
ಫಾಕ್ಸ್‌ಕಾನ್ ಸೇರಿದಂತೆ 18 ಹೂಡಿಕೆ ಪ್ರಸ್ತಾವನೆಗಳಿಗೆ ಎಸ್‌ಎಚ್‌ಎಲ್‌ಸಿಸಿ ಸಭೆಯಲ್ಲಿ ಅನುಮೋದನೆ: ಸಿಎಂ ಬೊಮ್ಮಾಯಿ
ಈ ಹಿನ್ನೆಲೆಯಲ್ಲಿ ಮಂಜುನಾಥ್ ಅವರು ತಮ್ಮ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯಲ್ಲಿ ಕಾಯ್ದಿರಿಸಿ ಮುಂದಿನ ಆದೇಶ ಜಾರಿಗೆ ಬರುವವರರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಸಕ್ಷಮ್ಯ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ ಎಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶದಲ್ಲಿ ತಿಳಿಸಿದ್ದಾರೆ.