Mangaluru crime: ಸೌದಿಯಲ್ಲಿ ಅಪಘಾತ: ಮಂಗಳೂರಿನ ಯುವಕ ಮೃತ

ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಅಪಘಾತಕ್ಕೆ ಸುರತ್ಕಲ್‌ನ ಯುವಕ ಸಾವಿಗೀಡಾದ ಘಟನೆ ನಡೆದಿದೆ. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್‌ನ ತಡಂಬೈಲ್‌ ನಿವಾಸಿ ಫಾಝಿಲ್‌ ಮೃತಪಟ್ಟಿದ್ದಾರೆ. ಫಾಝಿಲ್‌ಗೆ ಕಳೆದ ವರ್ಷ ವಿವಾಹವಾಗಿತ್ತು.

Accident in Saudi Mangaluru youth dies crime rav

ಮಂಗಳೂರು (ಡಿ.30): ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಅಪಘಾತಕ್ಕೆ ಸುರತ್ಕಲ್‌ನ ಯುವಕ ಸಾವಿಗೀಡಾದ ಘಟನೆ ನಡೆದಿದೆ. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್‌ನ ತಡಂಬೈಲ್‌ ನಿವಾಸಿ ಫಾಝಿಲ್‌ ಮೃತಪಟ್ಟಿದ್ದಾರೆ. ಫಾಝಿಲ್‌ಗೆ ಕಳೆದ ವರ್ಷ ವಿವಾಹವಾಗಿತ್ತು.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಫಾಝಿಲ್‌ ಕಳೆದ ಐದು ವರ್ಷಗಳಿಂದ ಸೌದಿಯ ಜುಬೈಲಿನ ಅಲ್‌ ಬತೀನಿ ಸ್ಕಫೋಲ್ಡಿಂಗ್‌ ಕೊಂಟ್ರಾಕ್ಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅಲ್‌ ಹಸ್ಸದ ಅಲ್‌ ಜೂಫ್ರಾನ್‌ ಪ್ರಾಜೆಕ್ಟ್ಗೆ ಸೈಟಿಗೆ ಭೇಟಿ ನೀಡಿ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ರಿಯಾದ್‌ನಿಂದ ಸುಮಾರು 260 ಕಿ.ಮೀ. ದೂರದಲ್ಲಿ ಈ ಅಪಘಾತ ನಡೆದಿದೆ. ಫಾಝಿಲ್‌ ಮೃತದೇಹವನ್ನು ಹತ್ತಿರದ ಅಬೈಕ್‌ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪಾರ್ಥೀವ ಶರೀರವನ್ನು ಶೀಘ್ರವೇ ತವರಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ.

ಹಿಂದೂಗಳು ನಮ್ಮ ಏರಿಯಾಗೆ ಬರಬೇಡಿ: ಅಯ್ಯಪ್ಪ ಮಾಲಾಧಾರಿಗೆ ಬೆದರಿಕೆ!

 ಅಡಕೆ ಮರದಿಂದ ಬಿದ್ದು ಸಾವು :

ಪುತ್ತೂರು: ಅಡಕೆ ಕೀಳುತ್ತಿದ್ದ ವೇಳೆ ಅಡಕೆ ಮರ ತುಂಡಾದ ಕಾರಣ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವರು ಸ್ಥಳದಲ್ಲಿಯೇ ಮೃತಪಟ್ಟಘಟನೆ ಗುರುವಾರ ಬೆಳಗ್ಗೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕೊರ್ಬಂಡ್ಕ ಎಂಬಲ್ಲಿ ನಡೆದಿದೆ. ಕೊಂರ್ಬಡ್ಕ ದೊಡ್ಡಮನೆ ನಿವಾಸಿ ಚಂದ್ರಶೇಖರ ಗೌಡ (56) ಮೃತಪಟ್ಟವ್ಯಕ್ತಿ. ಅವರು ತನ್ನ ತೋಟದಲ್ಲಿ ಅಡಕೆ ಮರಕ್ಕೆ ಹತ್ತಿ ಅಡಕೆ ಕೀಳುತ್ತಿದ್ದ ವೇಳೆ ಮರ ತುಂಡಾದ ಪರಿಣಾಮ ಕೆಳಕ್ಕೆ ಬಿದ್ದಿದ್ದರು. ಈ ಸಂದರ್ಭ ಗಂಭೀರ ಗಾಗಯೊಂಡಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗಾಂಧಿನಗರದಲ್ಲಿ ಶನಿವಾರ ನಡೆದಿದೆ. ನಲ್ಲೂರು ಗ್ರಾಮದ ಗಾಂಧಿನಗರ ನಿವಾಸಿ ಗೋಪಾಲ (57) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನಾರೋಗ್ಯದಿಂದ ವಿದ್ಯಾರ್ಥಿ ಸಾವು: ಮೆದುಳು ಜ್ವರ ಶಂಕೆ

ಉಳ್ಳಾಲ: ಕಳೆದೆರಡು ದಿನಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್‌ ಗುರುವಾರ ಸಾವನ್ನಪ್ಪಿದ್ದು, ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Mangaluru Crime: ಮಂಗಳೂರಿನ ಕಾಟಿಪಳ್ಳದ ಜಲೀಲ್ ಹತ್ಯೆ: ಮೂವರು ಆರೋಪಿಗಳ ಬಂಧನ

ಕಳೆದ ಎರಡು ದಿನಗಳಿಂದ ಜ್ವರ, ತಲೆನೋವು ಎನ್ನುತ್ತಿದ್ದ ಅಶ್ವಿತ್‌, ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್‌ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದ. ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಶಾಲಾ ಆಡಳಿತ ಮಂಡಳಿ, ಕುಟುಂಬ ಹಾಗೂ ಸ್ಥಳೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಎರಡು ವರ್ಷಗಳ ಹಿಂದೆ ಅಶ್ವಿತ್‌ನ ತಂದೆ ಅವಘಡವೊಂದರಲ್ಲಿ ಸಾವನ್ನಪ್ಪಿದ್ದರು. ಕೊಲ್ಯ ಸಾರಸ್ವತ ಕಾಲನಿಯ ಮನೆಯಲ್ಲಿ ಅಶ್ವಿತ್‌ ತಾಯಿಯೊಂದಿಗೆ ವಾಸವಿದ್ದ. ಅಶ್ವಿತ್‌ ಶಾಲೆಯಲ್ಲೂ ಪ್ರತಿಭಾನ್ವಿತನಾಗಿದ್ದು, ಶಿಕ್ಷಕರ ಪ್ರೀತಿ ಪಾತ್ರನಾಗಿದ್ದ. ಮೃತ ಬಾಲಕನ ಅಂತ್ಯ ಸಂಸ್ಕಾರ ಗುರುವಾರ ಮಧ್ಯಾಹ್ನ ನಡೆಯಿತು.

Latest Videos
Follow Us:
Download App:
  • android
  • ios