ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಕುಟುಂಬ ಕಾರಿಗೆ ಟ್ರಕ್ ಡಿಕ್ಕಿ; ಯುವತಿ ಸಾವು, 9 ಮಂದಿ ಗಂಭೀರ!
ನಿಶ್ಚಿತಾರ್ಥ ಸಮಾರಂಭಕ್ಕೆ ತೆರಳುತಿದ್ದ ವೇಳೆ ಅಪಘಾತ ಸಂಭವಿಸಿ ಒಂದೇ ಕುಟುಂಬ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದರೆ, ಓರ್ವ ಯುವತಿ ಮೃತಪಟ್ಟ ಫಟನೆ ಹೆದ್ದಾರಿಯಲ್ಲಿ ನಡೆದಿದೆ.
ಜೈಪುರ(ಜೂ.11): ನಿಶ್ಚಿತಾರ್ಥಕ್ಕೆ ತೆರಳಿದ 10 ಕುಟುಂಬ ಸದಸ್ಯರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಜೈಪುರ-ಬಿಕಾನೆರ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮಕ್ಕಳು ಸೇರಿದಂತೆ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಫತೇಪುರದಲ್ಲಿನ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಸಿಕಾರದಲ್ಲಿರುವ ಕಲ್ಯಾಣ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಕ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಅತೀ ವೇಗವಾಗಿ ಬಂದ ಟ್ರಕ್ ನಿಯಂತ್ರಣಕ್ಕೆ ಸಿಗದೆ ವ್ಯಾನ್‌ಗೆ ಡಿಕ್ಕಿಯಾಗಿದೆ. ಕುಟುಂಬದ 10 ಸದಸ್ಯರು ಎಂಗೇಜ್‌ಮೆಂಟ್ ಕಾರ್ಯಕ್ರಮಕ್ಕಾಗಿ ಫತೇಪುರದಿಂದ ಸಿಕಾರ್‌ಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಆಪ್ತರ ನಿಶ್ಚಿತಾರ್ಥ ಸಮಾರಂಭ ಇಂದು(ಜೂ.11) ಆಯೋಜಿಸಲಾಗಿತ್ತು. ಇದಕ್ಕಾಗಿ ಫತೇಪುರದಿಂದ 9 ಮಂದಿ ಕುಟುಂಬ ಸದಸ್ಯರು ವ್ಯಾನ್ ಮೂಲಕ ತೆರಳಿದ್ದರು. ಜೈಪುರ್ ಬಿಕಾನೆರ್ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್ ಅತೀವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ವ್ಯಾನ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ 10 ಸದಸ್ಯರ ಪೈಕಿ 9 ಮಂದಿ ಗಾಯಗೊಂಡಿದ್ದರೆ, ಓರ್ವ ಯುವತಿ ಮೃತಪಟ್ಟಿದ್ದಾರೆ.
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಭೀಕರ ಕಾರು ಅಪಘಾತ: ಚಾಲಕ ಸಾವು, ಮೂವರ ಸ್ಥಿತಿ ಗಂಭೀರ
ಡಿಕ್ಕಿಯಾದ ಬೆನ್ನಲ್ಲೇ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇತ್ತ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ. ಹೆದ್ದಾರಿಯಲ್ಲಿ ಟ್ರಕ್ ಚಾಲಕರು ಅತೀವೇಗವಾಗಿ ವಾಹನ ಚಾಲನೆ ಮಾಡುತ್ತಿರುವುದರಿಂದ ಹಲವು ಅಪಘಾತಗಳು ಸಂಭವಿಸುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ.
ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಎಂಗೇಜ್‌ಮೆಂಟ್‌ಗೆ ಆಗಮಿಸಿದ್ದ ಕುಟುಂಬಸ್ಥರು ಆಸ್ಪತ್ರೆ ದೌಡಾಯಿಸಿದ್ದಾರೆ. ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅತೀ ವೇಗವಾಗಿ ಚಾಲನೆ ಮಾಡಲು ಅವಕಾಶ ನೀಡಿದ್ದು ಯಾಕೆ? ಆರೋಪಿ ಪತ್ತೆ ಹಚ್ಚಿ ತಕ್ಕ ಶಿಕ್ಷೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಶಿರಾಡಿ: ಟ್ಯಾಂಕರ್ ಚಾಲಕನಿಗೆ ಹಲ್ಲೆಗೈದು ನಗದು ದರೋಡೆ
ನಂಬೂರು ಅಪಘಾತದಲ್ಲಿ ಕಾಪು ನಿವಾಸಿ ಸಾವು
ಆಂಧ್ರಪ್ರದೇಶದ ನಂಬೂರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಉಚ್ಚಿಲದ ಭಾಸ್ಕರನಗರದ ನಿವಾಸಿ ಬಶೀರ್ ಎಂಬವರು ಮೃತಪಟ್ಟಿದ್ದಾರೆ. ಗೋವಾದಲ್ಲಿ ಮೀನಿನ ಲಾರಿಯ ಚಾಲಕನಾಗಿ ದುಡಿಯುತ್ತಿದ್ದ ಬಶೀರ್ ಎಂದಿನಂತೆ, ಮೀನು ತುಂಬಿದ ಲಾರಿಯೊಂದಿಗೆ ಒರಿಸ್ಸಾಕ್ಕೆ ಹೋಗುತ್ತಿದ್ದಾಗ, ನಂಬೂರು ಎಂಬಲ್ಲಿ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ಎರಡೂ ಲಾರಿಗಳ ಚಾಲಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಉತ್ತಮ ಕ್ರಿಕೆಟ್ ಆಟಗಾರನೂ ಆಗಿದ್ದ ಬಶೀರ್ ತಂದೆ, ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.