ಸಚಿವ ಪರಮೇಶ್ವರ್‌, ರಾಜ್ಯಪಾಲರ ಹೆಸರಲ್ಲಿ ವಂಚಿಸಿದವನ ಬಂಧನ

ಕೊರಟಗೆರೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮದ್ ಝಬೇರ್, ಗೃಹ ಸಚಿವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದು, ಅವರ ಜೊತೆಗಿದ್ದ ಪೋಟೋ ತೋರಿಸಿ ಬೆಂಗಳೂರು ಸೇರಿ ಹಲವು ಕಡೆ ಕೆಲವರಿಗೆ ವಂಚಿಸಿರುವುದಾಗಿ ತಿಳಿದು ಬಂದಿದೆ. 

Accused Arrest For who cheated in the name of Minister G Parameshwar Governor grg

ಕೊರಟಗೆರೆ(ಮೇ.18): ತುಮಕೂರು ಜಿಲ್ಲೆ ಕೊರಟಗೆರೆ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮದ್ ಝಬೇರ್‌ ಎಂಬಾತ ರಾಜ್ಯಪಾಲರ ಲೆಟರ್ ಹೆಡ್ ಹಾಗೂ ಸಹಿಯನ್ನೇ ಫೋರ್ಜರಿ ಮಾಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರಿಗೆ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಗೃಹ ಸಚಿವರ ಸೂಚನೆ ಮೇರೆಗೆ ಆತನನ್ನು ಬಂಧಿಸಲಾಗಿದ್ದು, ಪಕ್ಷದಿಂದ ಉಚ್ಚಾಟಿಸಲಾಗಿದೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಈ ಬಗ್ಗೆ ಮಾಹಿತಿ ನೀಡಿದರು. 

 ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ದಕ್ಷವಾಗಿದೆ: ಸಚಿವ ಡಿ ಸುಧಾಕರ್

ಕೊರಟಗೆರೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮದ್ ಝಬೇರ್, ಗೃಹ ಸಚಿವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದು, ಅವರ ಜೊತೆಗಿದ್ದ ಪೋಟೋ ತೋರಿಸಿ ಬೆಂಗಳೂರು ಸೇರಿ ಹಲವು ಕಡೆ ಕೆಲವರಿಗೆ ವಂಚಿಸಿರುವುದಾಗಿ ತಿಳಿದು ಬಂದಿದೆ. ಅಲ್ಲದೆ, ರಾಜ್ಯಪಾಲರ ಲೆಟರ್ ಹೆಡ್ ಹಾಗೂ ಸಹಿಯನ್ನೇ ಫೋರ್ಜರಿ ಮಾಡಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಗೃಹ ಸಚಿವರ ಸೂಚನೆಯಂತೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೆ, ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios