Bengaluru: ರಾತ್ರಿ ವೇಳೆ ಬಾಗಿಲು, ಕಿಟಕಿ ತೆರೆದಿರುವ ಮನೆಗಳೇ ಈತನ ಟಾರ್ಗೆಟ್..!
* ಎಲೆಕ್ಟ್ರಾನಿಕ್ ವಸ್ತುಗಳನ್ನು ಮಾತ್ರ ಕದಿಯುತ್ತಿದ್ದ ಕಿಡಿಗೇಡಿ ಬಂಧನ
* 8 ಲಕ್ಷದ ವಸ್ತುಗಳು ಜಪ್ತಿ
* ಹಣ, ಒಡವೆ ಮುಟ್ಟುತ್ತಿರಲಿಲ್ಲ
ಬೆಂಗಳೂರು(ಮಾ.08): ಪಿ.ಜಿ., ಮನೆಗಳಲ್ಲಿ ಮೊಬೈಲ್(Mobile) ಹಾಗೂ ಲ್ಯಾಪ್‌ಟಾಪ್(Laptop) ಕಳವು ಮಾಡುತ್ತಿದ್ದ ನ್ಯಾಗಲ್ಯಾಂಡ್(Nagaland) ಮೂಲದ ಕಳ್ಳನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹದೇವಪುರ ಕೃಷ್ಣ ಲೇಔಟ್ ನಿವಾಸಿ ತಾಂಗ್ ಸೈನ್(41) ಬಂಧಿತ(Accused) . ಈತ ನೀಡಿದ ಮಾಹಿತಿ ಮೇರೆಗೆ 8.05 ಲಕ್ಷ ರು. ಮೌಲ್ಯದ 9 ಲ್ಯಾಪ್‌ಟಾಪ್, 5 ಮೊಬೈಲ್ ಫೋನ್ ಹಾಗೂ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ.
ಕಗ್ಗದಾಸನಪುರ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ವಿಲೆಂದರ್ ಕರಕರೆ ಎಂಬುವರ ಮನೆಯಲ್ಲಿ ಫೆ.6ರಂದು ಮೂರು ಲ್ಯಾಪ್‌ಟಾಪ್, ಎರಡು ಮೊಬೈಲ್ ಫೋನ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಕೆಲ ದಾಖಲೆಗಳು ಕಳವಾಗಿತ್ತು(Theft). ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Crime News: ಬಾಡಿಗೆ ನೆಪದಲ್ಲಿ ಕ್ಯಾಮರಾ ಎಗರಿಸುತ್ತಿದ್ದ ಕಿಡಿಗೇರಿ ಸೆರೆ
ಆರೋಪಿ ತಾಂಗ್ ಸೈನ್ ನ್ಯಾಗಲ್ಯಾಂಡ್ ಮೂಲದವನಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದ. ವೃತ್ತಿಪರ ಕಳ್ಳನಾಗಿರುವ ಈತ ಹಲವು ವರ್ಷಗಳಿಂದ ನಗರದ ವಿವಿಧೆಡೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಕದ್ದು ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ. ರಾತ್ರಿ ವೇಳೆ ಬಾಗಿಲು ತೆರೆದಿರುವ ಮನೆಗಳು, ಕಿಟಕಿ ತೆಗೆದಿರುವ ಮನೆಗಳನ್ನು ಗುರುತಿಸಿ ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ. ಬಳಿಕ ಗಿರಾಕಿಗಳನ್ನು ಹುಡುಕಿ ಮಾರಾಟ ಮಾಡುತ್ತಿದ್ದ. ಈತನ ವಿರುದ್ಧ ಈ ಹಿಂದೆ ಸಿಟಿ ಮಾರ್ಕೆಟ್, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ದಾಖಲು ದಾಖಲಾಗಿದ್ದು, ಜೈಲು ಸೇರಿದ್ದ. ಜಾಮೀನು ಪಡೆದು ಹೊರಬಂದ ಬಳಿಕವೂ ದುಷ್ಕೃತ್ಯಗಳನ್ನು ಮುಂದುವರಿಸಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.
ಹಣ, ಒಡವೆ ಮುಟ್ಟುತ್ತಿರಲಿಲ್ಲ!
ಆರೋಪಿ ಸೈನ್ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಟಿವಿ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಮಾತ್ರ ಕಳವು ಮಾಡುತ್ತಿದ್ದ. ಹಣ, ಚಿನ್ನಾಭರಣ ಯಾವುದನ್ನೂ ಮುಟ್ಟುತ್ತಿರಲಿಲ್ಲ. ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಾನಿಕ್ ವಸ್ತುಗಳನ್ನು ಸುಲಭವಾಗಿ ಮಾರಾಟ ಮಾಡಬಹುದು ಎಂಬ ಕಾರಣಕ್ಕೆ ಕಳವು ಮಾಡುತ್ತಿದ್ದ. ಆರೋಪಿಯ ಬಂಧನದಿಂದ ಮಹದೇವಪುರ, ಬೈಯಪ್ಪನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಲ್ಯಾಪ್‌ಟಾಪ್, ಮೊಬೈಲ್ ಕಳವು ಪ್ರಕರಣಗಳು ಪತ್ತೆಯಾಗಿವೆ. ಆರೋಪಿಯು ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮತ್ತಷ್ಟುಕಳವು ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Theft Cases in Bengaluru: ಬೀಗ ಹಾಕಿದ್ದ ಮನೆಗಳಿಗೆ ಕನ್ನ ಹಾಕ್ತಿದ್ದ ಗ್ಯಾಂಗ್ ಅರೆಸ್ಟ್
ಆರೋಪಿ ಸಿಕ್ಕಿದ್ದು ಹೇಗೆ?
ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು(Police) ಕಗ್ಗದಾಸನಪುರ, ಬೈಯಪ್ಪನಹಳ್ಳಿ ರೈಲು ನಿಲ್ದಾಣ ಸೇರಿದಂತೆ ಸುತ್ತಮುತ್ತಲ ಮನೆಗಳ ಸುಮಾರು 70 ಸಿಸಿ ಟಿವಿ ಕ್ಯಾಮರಾಗಳ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲಿಸಿದರು. ಈ ವೇಳೆ ಬೈಯಪ್ಪನಹಳ್ಳಿ ರೈಲ್ವೆ ಗೇಟ್ ಸಮೀಪ ಅನುಮಾನಾಸ್ಪದವಾಗಿ ಒಡಾಡುತ್ತಿದ್ದ ಆರೋಪಿ ತಾಂಗ್ ಸೈನ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಕೃತ್ಯಗಳ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯುವ ಜೋಡಿ ಸೇರಿ ಮೂವರ ಬಂಧನ: 7.76 ಕೋಟಿ ರು. ಡ್ರಗ್ಸ್ ವಶ
ಬೆಂಗಳೂರು ನಗರದಲ್ಲಿ ಮಾದಕವಸ್ತು ಹಾಶೀಶ್ ಆಯಿಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಯುವ ಜೋಡಿ ಸೇರಿದಂತೆ ಮೂವರು ಡ್ರಗ್ಸ್ ಪೆಡ್ಲರ್‌ಗಳನ್ನು(Drugs Peddlers) ಹುಳಿಮಾವು ಠಾಣೆ ಪೊಲೀಸರು(Police) ಬಂಧಿಸಿದ್ದಾರೆ. ಮಡಿವಾಳದ ವಿಕ್ರಂ ಅಲಿಯಾಸ್ ವಿಕ್ಕಿ(23), ಕೇರಳದ(Kerala) ಕೊಟ್ಟಾಯಂನ ಸಿಗಿಲ್ ವರ್ಗಿಸ್ ಮಂಪರಾಂಪಿಲ್(23) ಹಾಗೂ ಕೊಯಮತ್ತೂರಿನ ವಿಷ್ಣುಪ್ರಿಯ(22) ಬಂಧಿತರು(Arrest). ಆರೋಪಿಗಳಿಂದ(Accused) ಸುಮಾರು 7.76 ಕೋಟಿ ರು. ಮೌಲ್ಯದ 12 ಕೆ.ಜಿ. 940 ಗ್ರಾಂ ತೂಕದ ಹಾಶೀಶ್ ಆಯಿಲ್ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.