* 18 ಲಕ್ಷ ಮೌಲ್ಯದ ಚಿನ್ನಾಭರಣ ವಶ* 18 ವರ್ಷದ ಹಿಂದೆಯೇ ಪೋಷಕರು ಮೃತ* ದುಶ್ಚಟಗಳಿಗೆ ದಾಸಾಗಿದ್ದ ಕಳ್ಳ ಸಾದಿಕ್
ಬೆಂಗಳೂರು(ಮೇ.31): ಹಗಲು ಹೊತ್ತಿನಲ್ಲಿ ಹೋಟೆಲ್‌ಗಳಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡು ರಾತ್ರಿ ವೇಳೆ ಮನೆಗಳವು ಮಾಡುತ್ತಿದ್ದ ಕಳ್ಳನನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿದ್ದಾರೆ.
ಸಿಟಿ ಮಾರ್ಕೆಟ್‌ನ ನಂದಿನಿ ಹೋಟೆಲ್ ನಿವಾಸಿ ಮೊಹಮದ್ ಸಾದಿಕ್ (31) ಬಂಧಿತ. ಈತನಿಂದ 330 ಗ್ರಾಂ ತೂಕದ ಚಿನ್ನಾಭರಣಗಳು, 2 ಕೆ.ಜಿ. 619 ಗ್ರಾಂ ತೂಕದ ಬೆಳ್ಳಿ ಸಾಮಾಗ್ರಿಗಳು, ಎರಡು ಮೊಬೈಲ್ ಫೋನ್‌ಗಳು ಸೇರಿದಂತೆ ಸುಮಾರು .18 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ಶುಕ್ರವಾರ ಟಾಟಾ ಸಿಲ್‌್ಕ ಫಾರಂ, 1ನೇ ಅಡ್ಡರಸ್ತೆಯ ದಿವ್ಯ ರಿಜೆನ್ಸಿ ಅಪಾರ್ಚ್‌ಮೆಂಟ್‌ನ ರಾಮಚಂದ್ರ ಕೌಲಗಿ ಎಂಬುವವರ ಫ್ಲ್ಯಾಟ್‌ನಲ್ಲಿ ದುಷ್ಕರ್ಮಿಗಳು ಕಿಟಕಿ ಮೂಲಕ ಕೈ ಹಾಕಿ ಬಾಗಿಲ ಲಾಕ್ ತೆಗೆದು ಒಳ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣಗಳು ಹಾಗೂ ಮೊಬೈಲ್ ಕಳವು ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bengaluru Crime: ಹೋಟೆಲಲ್ಲಿ ತರಕಾರಿ ಹಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ..!
ಬೆಳಗ್ಗೆ ಹೋಟೆಲ್‌ನಲ್ಲಿ ಕೆಲಸ
ಮಂಗಳೂರಿನ ಕಂಕನಾಡಿ ಮೂಲದ ಆರೋಪಿ ಸಾದಿಕ್ ಅವಿದ್ಯಾವಂತ. 18 ವರ್ಷದ ಹಿಂದೆ ಪೋಷಕರು ಮೃತರಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಕೆಲಸ ಅರಸಿ ಬೆಂಗಳೂರಿಗೆ ಬಂದು ಸಿಟಿ ಮಾರುಕಟ್ಟೆಯ ನಂದಿನಿ ಹೋಟೆಲ್‌ನಲ್ಲಿ ಕ್ಲೀನಿಂಗ್ ಕೆಲಸಕ್ಕೆ ಸೇರಿಕೊಂಡಿದ್ದ. ದುಶ್ಚಟಗಳ ದಾಸನಾಗಿದ್ದು, ರಾತ್ರಿ ವೇಳೆ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಎಂದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಸಾದಿಕ್ ಈ ಹಿಂದೆ ಕುಮಾರಸ್ವಾಮಿ ಲೇಔಟ್, ಕೆ.ಆರ್.ಮಾರುಕಟ್ಟೆ, ಬನಶಂಕರಿ ಹಾಗೂ ಬಸವನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಹೊರಬಂದ ಬಳಿಕ ಮನೆಗಳವು ಕೃತ್ಯಗಳನ್ನು ಮುಂದುವರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
