ಬಂಧಿತ ಆರೋಪಿಯಿಂದ 300 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, ಮೂರು ಕಾರು ವಶ

ಬೆಂಗಳೂರು(ಸೆ.18):  ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಕಳ್ಳನನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿ ಚಿನ್ನಾಭರಣ ಸೇರಿದಂತೆ ಮೂರು ಕಾರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಬನ್ನೇರುಘಟ್ಟ ರಸ್ತೆಯ ಬಸವನಪುರದದ ತೌಹಿದ್‌(20) ಎಂಬಾತನಿಂದ 300 ಗ್ರಾಂ ಚಿನ್ನಾಭರಣ, 100 ಗ್ರಾಂ ತೂಕದ ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಮೂರು ಕಾರು ಹಾಗೂ ಕಬ್ಬಿಣದ ರಾಡ್‌ಗಳನ್ನು ಜಪ್ತಿ ಮಾಡಲಾಗಿದೆ.

ಕಳೆದ ಜೂನ್‌ 10ರಂದು ವಿಶ್ವೇಶ್ವರಯ್ಯ ಲೇಔಟ್‌ನ 9ನೇ ಬ್ಲಾಕ್‌ನ ಮನೆಯೊಂದರ ಮನೆಯ ಬಾಗಿಲಿನ ಬೀಗ ಮೀಟಿ ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bengaluru Crime News: ಮೋಜು ಮಸ್ತಿಗಾಗಿ ಬೈಕ್ ಕದಿಯುತ್ತಿದ್ದ ಗ್ಯಾಂಗ್ ಬಂಧನ

ಈತನ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್‌ ಠಾಣೆಗಳಲ್ಲಿ ಮನೆಗಳವು ಪ್ರಕರಣ ದಾಖಲಾಗಿವೆ. ಹಲವು ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿ ಜಾಮೀನು ಪಡೆದು ಹೊರಬಂದ ಬಳಿಕವೂ ಮನೆಗಳವು ಚಾಳಿ ಮುಂದುವರಿಸಿದ್ದ. ಆರೋಪಿ ಸ್ನೇಹಿತರಿಂದ ಕಾರನ್ನು ಬಾಡಿಗೆಗೆ ಪಡೆದು ಸುತ್ತಾಡಿ ಬೀಗ ಹಾಕಿದ ಮನೆಗಳನ್ನು ಗುರುತಿಸಿ ನಂತರ ಕಬ್ಬಿಣದ ರಾಡ್‌ ಬಳಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.