*  ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತ್ನಿಯ ಹತ್ಯೆ ಮಾಡಿದ್ದ ಕ್ಯಾಬ್‌ ಚಾಲಕ*  17 ವರ್ಷದ ಹಿಂದೆ ಮದುವೆಯಾಗಿದ್ದ ರಾಯಚೂರು ಮೂಲದ ದಂಪತಿ *  ಈ ಸಂಬಂಧ ಆರೋಪಿ ಬಂಧನ 

ಬೆಂಗಳೂರು(ಮಾ.10): ಶೀಲ ಶಂಕಿಸಿ ಬೆಲ್ಟ್‌ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಲೆ(Murder) ಮಾಡಿದ್ದ ಪತಿಯನ್ನು ಎಚ್‌ಎಎಲ್‌ ಠಾಣೆ ಪೊಲೀಸರು(Police) ಬಂಧಿಸಿದ್ದಾರೆ. ನಗರದ ಎಚ್‌ಎಎಲ್‌ ಕಾಳಪ್ಪ ಲೇಔಟ್‌ ನಿವಾಸಿ ನಾಗಮ್ಮ (35) ಕೊಲೆಯಾದವರು. ಈಕೆಯ ಪತಿ ನೀಲಕಂಠ (42) ಬಂಧಿತ. ಮಂಗಳವಾರ ರಾತ್ರಿ ಪತ್ನಿಯ ಶೀಲ ಶಂಕಿಸಿ ಆರೋಪಿ ಕೊಲೆ ಮಾಡಿದ್ದ. ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ(Arrest) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಯಚೂರು(Raichur) ಮೂಲದ ಈ ದಂಪತಿ 17 ವರ್ಷದ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕ್ಯಾಬ್‌ ಚಾಲಕನಾಗಿರುವ ನೀಲಕಂಠ ಪತ್ನಿ ಮತ್ತು ಮಕ್ಕಳೊಂದಿಗೆ ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದ. ಈತ ಕ್ಯಾಬ್‌ ಚಾಲಕನಾಗಿದ್ದರೆ, ಪತ್ನಿ ನಾಗಮ್ಮ ಮನೆಗೆಲಸ ಮಾಡಿಕೊಂಡಿದ್ದರು. ಆರೋಪಿಯು ಶೀಲಶಂಕಿಸಿ ಪತ್ನಿ ನಾಗಮ್ಮ ಜತೆ ಜಗಳವಾಡುತ್ತಿದ್ದ. ಕೆಲ ದಿನಗಳ ಹಿಂದೆ ಇದೇ ವಿಚಾರವಾಗಿ ಜಗಳವಾಗಿತ್ತು. ಈತನ ಹಿಂಸೆ ತಾಳಲಾರದೆ, ನಾಗಮ್ಮ ವಿಚ್ಛೇದನ ನೀಡಲು ನಿರ್ಧರಿಸಿದ್ದರು.

Bengaluru: ರಾತ್ರಿ ವೇಳೆ ಬಾಗಿಲು, ಕಿಟಕಿ ತೆರೆದಿರುವ ಮನೆಗಳೇ ಈತನ ಟಾರ್ಗೆಟ್‌..!

ಮಂಗಳವಾರ ರಾತ್ರಿ ಸಹ ದಂಪತಿ ನಡುವೆ ಜಗಳವಾಗಿದೆ. ಈ ವೇಳೆ ಪತ್ನಿ ವಿಚ್ಛೇದನದ(Divorce) ವಿಚಾರ ಮತ್ತೆ ಪ್ರಸ್ತಾಪಿಸಿದಾಗ ಆಕ್ರೊಶಗೊಂಡ ಆರೋಪಿಯು ಬೆಲ್ಟ್‌ನಿಂದ ನಾಗಮ್ಮನ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಇದನ್ನು ನೋಡಿದ ಮಕ್ಕಳು ಕೂಡಲೇ ಓಡಿ ಹೋಗಿ ಮನೆ ಮಾಲಿಕರಿಗೆ ವಿಷಯ ತಿಳಿಸಿದ್ದರು. ಮನೆ ಮಾಲಿಕರು ತಕ್ಷಣ ಪೊಲೀಸರಿಗೆ ಕರೆ ಮಾಡಿ ಕೊಲೆ ವಿಚಾರದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಎಚ್‌ಎಎಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೀತಿಸಿ ಮದ್ವೆಯಾದ ಹೆಂಡ್ತಿ ಮೇಲೆ ಅನುಮಾನ, ಅದೇ ಅನುಮಾನದಿಂದಲೇ ಪತಿ ಅಂದರ್

ಹಾಸನ(Hassan): ಪ್ರೀತಿಸಿ ಮದುವೆಯಾದವಳಿಗೆ(Love Marriage) ಪತಿಯೇ ಸೀಮೆ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ಮಾ.08 ರಂದು ನಡೆದಿತ್ತು. 
ಮರಡಿಕೆರಿ ಗ್ರಾಮದ ಸತೀಶ್ ಎಂಬಾತ ಪತ್ನಿ ಭವ್ಯ(22) ಮೇಲೆ ಅಮಾನವೀಯವಾಗಿ ದಾಳಿ ನಡೆಸಿದ್ದಾನೆ. ಪ್ರೀತಿಸಿ ಮದುವೆಯಾಗಿದ್ದ ಮಡದಿ ಮೇಲಿನ ಅನುಮಾನದಿಂದ ಆಕೆ ಮಲಗಿದ್ದ ವೇಳೆ ಮೈ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಮಹಿಳೆ ದೇಹ ಶೇಕಡಾ 70 ರಷ್ಟು ಸುಟ್ಟು ಹೋಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾಳೆ.

ತನಿಖೆ ವೇಳೆ ಬಯಲಾಯ್ತು ಪತಿ ನೀಚ ಕೃತ

ಹೌದು...ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿಕೆ ಕೊಡಿಸಿದ್ದ. ಇದರಿಂದ ಪೊಲೀಸರು ಅನುಮಾನ ಬಂದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆಗ ಮಹಿಳೆಗೆ ಬೆಂಕಿ ಹಚ್ಚಿವುದಕ್ಕೆ ಕಾರಣ ಬಟಾಬಯಲಾಗಿದೆ.

Bengaluru Crime; ಅಡವಿಟ್ಟ ಒಡವೆ ಕಡಿಮೆ ಬೆಲೆಗೆ ಬಿಡಿಸಿಕೊಡುವುದಾಗಿ ಧೋಖಾ..!

ಐದು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಸತೀಶ್ ಮತ್ತು ಭವ್ಯ ಇಬ್ಬರೂ ಮದುವೆಯಾಗಿದ್ದರು. ಮದುವೆಯಾದ ಕೆಲವೇ ವರ್ಷದಲ್ಲಿ ಪತ್ನಿ ಮೇಲೆ ಪತಿಗೆ ಅನುಮಾನ ಹುಟ್ಟುಕೊಂಡಿದೆ. ಇದೇ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿ ಮಾರ್ಚ್ 5 ರ ಶನಿವಾರ ಪತ್ನಿ ಹತ್ಯೆಗೆ ಸತೀಶ್ ಸಂಚು ರೂಪಿಸಿದ್ದಾನೆ. ಪತ್ನಿ ಮಲಗಿದ್ದಾಗ ಬೆಂಕಿ ಹಚ್ಚಿ ಕೊಲೆ ಮಾಡಲು ಮುಂದಾಗಿದ್ದಾನೆ. ಅದೃಷ್ಟವಶಾತ್ ಆಕೆ ಉಸಿರಾಡುತ್ತಿದ್ದು ಆಕೆ ಬದುಕುಳಿದಾಗ ಗ್ಯಾಸ್ ಲೀಕ್ ಆಗಿ ಬೆಂಕಿ ಬಿದ್ದಿದ್ದಾಗಿ ಹೇಳಿಕೆ ನೀಡುವಂತೆ ಪತ್ನಿಯನ್ನು ಬೆದರಿಸಿ ಹೇಳಿಕೆ ಕೊಡಿಸಿದ್ದಾನೆ.

ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಬಗ್ಗೆ ಭವ್ಯ ಹೇಳಿಕೆ ನೀಡಿದ್ದರು. ಆದ್ರೆ ಘಟನೆ ಬಗ್ಗೆ ಅನುಮಾನದಿಂದ ತನಿಖೆ ನಡೆಸಿದಾಗ ಪೊಲೀಸರಿಗೆ ಘಟನೆ ಹಿಂದಿನ ಮರ್ಮದ ಸತ್ಯ ತಿಳಿದಿದೆ. ಅನುಮಾನದ ಪತಿಯ ರಹಸ್ಯ ಬಯಲಾಗಿದೆ. ಸದ್ಯ ಆರೋಪಿ ಪತಿ ಸತೀಶ್ನನ್ನ ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.