ಬಾಗಲಕೋಟೆ: ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ, ಕಾಮುಕನ ಬಂಧನ

*  ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕು ವ್ಯಾಪ್ತಿಯಲ್ಲಿ ನಡೆದ ಘಟನೆ
*  ಬಾಲಕಿಯ ಮೆಲೆ ಅತ್ಯಾಚಾರ ಮಾಡಿದ ವ್ಯಕ್ತಿಯ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಕೇಸ್‌ ದಾಖಲು 
*  ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಪೊಲೀಸ್‌ ಇಲಾಖೆ 
 

Accused Arrested For Rape on Minor Girl at Ilkal in Bagalkot grg

ಇಳಕಲ್ಲ(ಜೂ.18):  ಏಳು ವರ್ಷದ ಅಪ್ರಾಪ್ತೆ ಮೇಲೆ 32 ವರ್ಷದ ವ್ಯಕ್ತಿಯ ಎರಡು ಬಾರಿ ಲೈಂಗಿಕ ಅತ್ಯಾಚಾರ ನಡೆಸಿದ ಘಟನೆ ಇಳಕಲ್ಲ ತಾಲೂಕು ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಲವಂತವಾಗಿ ಬಾಲಕಿಯ ಮೆಲೆ ಅತ್ಯಾಚಾರ ಮಾಡಿದ ವ್ಯಕ್ತಿಯ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಕೇಸ್‌ ದಾಖಲಿಸಿ ಸದ್ಯ 3 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುನಗುಂದ ಸಿಪಿಐ ಹೊಸಕೇರಪ್ಪ ಹಾಗೂ ಇಳಕಲ್ಲ ಗ್ರಾಮೀಣ ಪೊಲೀಸ್‌ ಠಾಣೆ ಪಿಎಎಸ್‌ ಎಸ್‌ .ಬಿ.ಪಾಟೀಲ್‌ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದು ಆರೋಪಿಗಳನ್ನು ಗ್ರಾಮಕ್ಕೆ ಕರೆದೊಯ್ದು, ಘಟನೆ ನಡೆದ ಬಗ್ಗೆ ವಿವರ ಪಡೆದರು.

Crime News: ಮಗಳ ಮೇಲೆ 32 ವರ್ಷದ ತಂದೆಯಿಂದಲೇ ರೇಪ್:‌ ವಿಕೃತಕಾಮಿ ಬಂಧನ

ಹುನಗುಂದ ಹಾಗೂ ಇಳಕಲ್ಲ ತಾಲೂಕಿನಲ್ಲೇ ಈ ಹಿಂದೆ ಅಪ್ರಾಪ್ತೆ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್‌ ಇಲಾಖೆ ತಿಳಿಸಿದೆ.

ಬಾಲಕಿ ಮೇಲಿನ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮಾಜಿ ಅದ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ, ಸಮಾಜ ಸೇವಕಿ ಜಯಶ್ರೀ ಸಾಲಿಮಠ ಹಾಗೂ ನಗರಸಭೆ ಸದಸ್ಯೆ ಮಾರನಬಸರಿ ಆಗ್ರಹಿಸಿದ್ದಾರೆ.
 

Latest Videos
Follow Us:
Download App:
  • android
  • ios