ಬೆಂಗಳೂರು: ನಾಯಿ ಜತೆಗೆ ಅಸಹಜ ಲೈಂಗಿಕ ಕ್ರಿಯೆ, ಕಾಮುಕ ಜೈಲಿಗೆ
ಮಂಡ್ಯ ಮೂಲದ ಮರೀಗೌಡ ಬಂಧಿತ. ಪ್ರಾಣಿಪ್ರಿಯ ತೇಜೇಶ್ವರ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು(ಸೆ.25): ಬೀದಿ ನಾಯಿ ಜತೆಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಮೂಲದ ಮರೀಗೌಡ (32) ಬಂಧಿತ. ಪ್ರಾಣಿಪ್ರಿಯ ತೇಜೇಶ್ವರ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಕ್ಷಿಣೆ ಕಿರುಕುಳ: ಮದುವೆಯಾಗಿ ನಾಲ್ಕೇ ತಿಂಗಳಿಗೆ ಮಸಣ ಸೇರಿದ ಯುವತಿ!
ಆರೋಪಿ ಮರೀಗೌಡ ಕೌಟುಂಬಿಕ ಕಲಹದಿಂದ ಕುಟುಂಬದ ಸದಸ್ಯರಿಂದ ದೂರವಾಗಿದ್ದಾನೆ. ಆರಂಭದಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದ. ಬಳಿಕ ತಿಲಕನಗರ ವ್ಯಾಪ್ತಿಯಲ್ಲಿ ಭಿಕ್ಷಾಟನೆ ಮಾಡಿಕೊಂಡು ದಿನ ಕಳೆಯುತ್ತಿದ್ದ. ಇತ್ತೀಚೆಗೆ ಬೀದಿ ನಾಯಿ ಜತೆಗೆ ಮರೀಗೌಡ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ. ಇದನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ನೋಡಿ ತೇಜೇಶ್ವರ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.