ಸಾತನೂರು ರಸ್ತೆಯಲ್ಲಿ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಆತನನ್ನು ಬಂಧಿಸಿದರು. ಘಟನೆ ನಡೆದ 12 ಗಂಟೆಯಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. 

ಕನಕಪುರ(ಫೆ.19): ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿ ಮೇಲೆ ಆ್ಯಸಿಡ್‌ ಎರಚಿ ಪರಾರಿಯಾಗಿದ್ದ ಯುವಕನನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ನಗರದ ಕುರುಪೇಟೆ ನಿವಾಸಿ, ಸಾತುನೂರು ರಸ್ತೆ ಹೆಂಚಿನ ಫ್ಯಾಕ್ಟರಿ ಮುಂಭಾಗ ಗ್ಯಾರೇಜ್‌ನಲ್ಲಿ ಮೆಕ್ಯಾನಿಕ್‌ ಆಗಿ ಕೆಲಸ ಮಾಡು​ತ್ತಿದ್ದ ಸುಮಂತ್‌ ಅಲಿಯಾಸ್‌ ಅಪ್ಪು (22) ಬಂಧಿತ ಆರೋಪಿ. ನಗರದ ಹೊರವಲಯದ ಸಾತನೂರು ರಸ್ತೆಯಲ್ಲಿ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಆತನನ್ನು ಬಂಧಿಸಿದರು. ಘಟನೆ ನಡೆದ 12 ಗಂಟೆಯಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

Ramanagara: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಆ್ಯಸಿಡ್‌ ದಾಳಿ ಮಾಡಿದ ಪಾಗಲ್ ಪ್ರೇಮಿ

ಶುಕ್ರವಾರ ಸಂಜೆ ಕನಕಪುರ ಬೈಪಾಸ್‌ ಬಳಿ ಯುವತಿಯನ್ನು ಕರೆಸಿಕೊಂಡಿದ್ದ ಈತ, ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದ. ಪ್ರೀತಿಸಲು ನಿರಾಕರಿಸಿದ್ದಕ್ಕಾಗಿ ಕೋಪಗೊಂಡು ಆಕೆಯ ಮುಖಕ್ಕೆ ಆ್ಯಸಿಡ್‌ ಎರಚಿ, ಪರಾರಿಯಾಗಿದ್ದ. ಯುವತಿಯನ್ನು ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.