Asianet Suvarna News Asianet Suvarna News

ಬೆಂಗಳೂರು: ಅನ್ನ ಕೊಟ್ಟವಳನ್ನೇ ಚಿನ್ನಕ್ಕಾಗಿ ಕೊಂದ ದುರುಳನ ಬಂಧನ

ಜ.4ರಂದು ಪೆಂಟಿಂಗ್ ಗುತ್ತಿಗೆದಾರ ಪ್ರದ್ಯುಮ್ನ ಎಂಬುವರ ಪತ್ನಿ ನೀಲು ಅವರನ್ನು ಕೊಲೆ ಮಾಡಲಾಗಿತ್ತು. ಮನೆಗೆ ಬಂದು ಹಸಿವು ಎಂದ ಹಂತಕನಿಗೆ ಅನ್ನವಿಕ್ಕಲು ಹೋದ ವೇಳೆ ಆರೋಪಿ ಆಕೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ದೊಡ್ಡ ನಾಗಮಂಗಲದ ನಿವಾಸಿ ರಜನೀಶ್ ಕುಮಾರ್‌ನಿಂದ ದೋಚಿದ್ದ ಚಿನ್ನದ ಒಲೆಗಳು ಹಾಗೂ ಹಣ ಜಪ್ತಿ ಮಾಡಲಾಗಿದೆ. 

Accused Arrested on Murder Case in Bengaluru grg
Author
First Published Jan 12, 2024, 7:59 AM IST | Last Updated Jan 12, 2024, 7:59 AM IST

ಬೆಂಗಳೂರು(ಜ.12):  ಇತ್ತೀಚೆಗೆ ನಗರದ ಪ್ರಭಾಕರ ಲೇಔಟ್‌ನಲ್ಲಿ ನಡೆದ ಪೇಟಿಂಗ್ ಗುತ್ತಿಗೆದಾರನ ಪತ್ನಿಯ End ಮಾಡಿದ ಆರೋಪಿಯನ್ನು ಎಲೆಕ್ಟ್ರಾನಿಕ್‌ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದು, ಪರಿಚಿತ ವ್ಯಕ್ತಿಯೇ ಹಣ, ಚಿನ್ನಾಭರಣಕ್ಕೆ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಜ.4ರಂದು ಪೆಂಟಿಂಗ್ ಗುತ್ತಿಗೆದಾರ ಪ್ರದ್ಯುಮ್ನ ಎಂಬುವರ ಪತ್ನಿ ನೀಲು ಅವರನ್ನು ಕೊಲೆ ಮಾಡಲಾಗಿತ್ತು. ಮನೆಗೆ ಬಂದು ಹಸಿವು ಎಂದ ಹಂತಕನಿಗೆ ಅನ್ನವಿಕ್ಕಲು ಹೋದ ವೇಳೆ ಆರೋಪಿ ಆಕೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ದೊಡ್ಡ ನಾಗಮಂಗಲದ ನಿವಾಸಿ ರಜನೀಶ್ ಕುಮಾರ್‌ನಿಂದ ದೋಚಿದ್ದ ಚಿನ್ನದ ಒಲೆಗಳು ಹಾಗೂ ಹಣ ಜಪ್ತಿ ಮಾಡಲಾಗಿದೆ. ಪ್ರಕರಣದ ತನಿಖೆಗಿಳಿದ ಇನ್‌ಸ್ಪೆಕ್ಟರ್ ಜಿ.ಆರ್. ನವೀನ್ ನೇತೃತ್ವದ ತಂಡ, ತಾಂತ್ರಿಕ ಮಾಹಿತಿ ಆಧರಿಸಿ ಹಂತಕನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

'ನಿಮ್ಮ ಬ್ಯಾಗ್‌ ಯಾಕಿಷ್ಟು ಭಾರವಿದೆ..' ಸುಚನಾ ಸೇಠ್‌ಗೆ ಕೇಳಿದ್ದ ಡ್ರೈವರ್‌ ರೇಜಾನ್ ಡಿಸೋಜಾ

ಗುರುತು ಮರೆಮಾಚಲು ಟೀಶರ್ಟ್ ಬದಲಿಸಿದ

ಹತ್ಯೆ ಬಳಿಕ ತನಗೆ ಗುರುತು ಸಿಗದೆ ಮರೆ ಮಾಚಲು ನೀಲಂ ಅವರ ಮನೆಗೆ ಬರುವಾಗ ಟಿ ಶರ್ಟ್ ಮೇಲೆ ಶರ್ಟ್ ಧರಿಸಿ ಹಾಗೂ ಮುಖ ಕಾಣದಂತೆ ಟವರ್ ಸುತ್ತಿಕೊಂಡು ಬಂದಿದ್ದ. ಅಲ್ಲದೆ ಮೊಬೈಲ್ ಅನ್ನು ತನ್ನ ಮನೆಯಲ್ಲೇ ಇಟ್ಟು ಬಂದಿದ್ದೆ. ಕೊಲೆ ಮಾಡಿದ ಬಳಿಕ ಮೃತರ ಮನೆಯಿಂದ 500 ಮೀ ದೂರ ಹೋದ ಬಳಿಕ ಶರ್ಟ್ ಬದಲಿಸಿ ಆತ ಪರಾರಿಯಾಗಿದ್ದ, ಆದರೆ ಆತ ಪ್ಯಾಂಟ್ ಮತ್ತು ಚಪ್ಪಲಿ ಬದಲಿಸಿರಲಿಲ್ಲ. ಸಿಸಿಟಿವಿ ಕ್ಯಾಮೆರಾಗಳ ಪರಿಶೀಲಿಸಿದಾಗ ಟೀ ಶರ್ಟ್ ಹಾಗೂ ಶರ್ಟ್ ಧರಿಸಿದ್ದ ವ್ಯಕ್ತಿ ಚಲನವಲನದ ಮೇಲೆ ಶಂಕೆ ಮೂಡಿತ್ತು. ಈ ಸುಳಿವು ಆಧರಿಸಿ ಮತ್ತಷ್ಟು ಸಿಸಿಟಿವಿ ಕ್ಯಾಮೆರಾ ತಪಾಸಣೆ ನಡೆಸಿದಾಗ ಅಂತಿಮವಾಗಿ ಹಂತಕನ ಜಾಡು ಸಿಕ್ಕಿತು ಎಂದು ಮೂಲಗಳು ಹೇಳಿವೆ.

ಕೋಟಿ ಕನಸು ನಿರೀಕ್ಷಿದವನಿಗೆ ಸಿಕ್ಕಿದ್ದು ಪುಡಿಗಾಸು: ಮೂಲತಃ ಉತ್ತರ ಪ್ರದೇಶದ ರಜನೀಶ್ ನಾಲ್ಕು ವರ್ಷಗಳ ಹಿಂದೆ ನಗರಕ್ಕೆ ಕೆಲಸ ಅರಸಿಕೊಂಡು ಬಂದು ನಿರ್ಮಾಣ ಹಂ ತದ ಕಟ್ಟಡಗಳಲ್ಲಿ ವೆಂಟರ್‌ಕೆಲಸ ಮಾಡುತ್ತಿದ್ದ.
ಮೃತ ನೀಲಂ ಕುಟುಂಬದವರು ಸಹ ಉತ್ತರ ಪ್ರದೇಶ ಮೂಲದವರು. ನೀಲಂ ಪತಿ ಪ್ರದ್ಯುಮ್ನ ಪೆಂಟಿಂಗ್ ಗುತ್ತಿಗೆದಾರನಾಗಿದ್ದರೆ, ಪ್ರಭಾಕರ ರೆಡ್ಡಿ ಲೇಔಟ್‌ನಲ್ಲಿ ನೀಲಂ ಸೋದರ ಹಾರ್ಡ್‌ ವೇರ್ ಅಂಗಡಿ ಇಟ್ಟಿದ್ದರು.

ಮನೆಯಿಂದ ಹೊರಹೋಗುವಂತೆ ಪತ್ನಿ ಜೊತೆ ಜಗಳ; ಲೆದರ್ ಬೆಲ್ಟ್‌ನಿಂದ ಹಲ್ಲೆ ನಡೆಸಿದ ದುರುಳ

ವರ್ಷದ  ಹಿಂದೆ ನೀಲಂ ಸೋದರನ ಅಂಗಡಿ ಮುಂದಿನ ಕಟ್ಟಡದಲ್ಲಿ ಪೆಂಟಿಂಗ್ ಕೆಲಸ ಮಾಡುವಾಗ ಅವರಿಗೆ ರಜನೀಶ್ ಪರಿಚಯವಾಗಿತ್ತು. ಬಳಿಕ ಒಂದೇ ರಾಜ್ಯದವರಾಗಿದ್ದರಿಂದ ನೀಲಂ ಸೋದರ ಹಾಗೂ ರಜನೀಶ್ ಮಧ್ಯೆ ಅತ್ಮೀಯ ಸ್ನೇಹ ಬೆಳೆಯಿತು. ಆಗಾಗ್ಗೆ ನೀಲಂ ಸೋದರನ ಅಂಗಡಿ ವ್ಯಾಪಾರ ವಹಿವಾಟಿಗೆ ಆರೋಪಿ ನೆರವಾಗುತ್ತಿದ್ದ. ಗೆಳೆಯನ ಮನೆಗೆ ಕನ್ನ ಹಾಕಿದರೆ ಕೋಟ್ಯ 4, 2.4 ರಂದು ನೀಲಂ ಅವರು ಮನೆಯಲ್ಲೇ ಒಬ್ಬರೇ ಇದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ರಜನೀಶ್ ತೆರಳಿದ್ದ. ಆಗ ತನಗೆ ಹಸಿವಾಗುತ್ತಿದೆ ಎಂದಾಗ ಊಟ ಬಡಿಸಲು ಅಡುಗೆ ಮನೆಗೆ ತೆರಳುತ್ತಿದ್ದ ನೀಲಂ ಅವರನ್ನು ಹಿಂಬಾಲಿಸಿದ ರಜನೀಶ್, ಆಕೆಯ ಕುತ್ತಿಗೆಗೆ ಟವಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ. ಹತ್ಯೆ ಬಳಿಕ ಮನೆಯೊಳಗೆ ಜಾಲಾಡಿದರೂ ಆತನಿಗೆ ಬಿಡಿಗಾಸು ಸಿಕ್ಕಿಲ್ಲ, ಕೊನೆಗೆ ಹುಂಡಿಯನ್ನು ಒಡೆದು ಅದರಲ್ಲಿದ್ದ 8 ಸಾವಿರ ಹಾಗೂ ಮೃತ ನೀಲಂ ಧರಿಸಿದ್ದ ಎರಡು ಚಿನ್ನದ ಒಲೆಗಳನ್ನು ದೋಚಿ ಆರೋಪಿ ಪರಾರಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಪತ್ತೆಗಾಗಿ 850 ಸಿಸಿಟಿವಿ ಪರಿಶೀಲನೆ

ಕೃತ್ಯದ ತನಿಖೆಗಿಳಿದ ಪೊಲೀಸರಿಗೆ ಘಟನಾ ಸ್ಥಳವನ್ನು ಪರಿಶೀಲಿಸಿದಾಗ ಪರಿಚಿತನೇ ಎಸಗಿರುವುದು ಖಚಿತವಾಗಿದೆ. ಈ ಮಾಹಿತಿ ಆಧರಿಸಿ ಪೊಲೀಸರಿಗೆ ಪ್ರಭಾಕರೆಡ್ಡಿ ಲೇಔಟ್ ಸುತ್ತಮುತ್ತ ಸುಮಾರು 850 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆರೋಪಿಯ ಸುಳಿವು ಸಿಕ್ಕಿತು. ಒಂದು ಕ್ಯಾಮೆರಾದಲ್ಲಿ ಆರೋಪಿ ಮುಖಚಹರೆ ಪತ್ತೆಯಾಯಿತು. ಅದರ ಫೋಟೋ ತೆಗೆದು ಪ್ರದ್ಯುಮ್ಮೆ ಅವರಿಗೆ ತೋರಿಸಿದಾಗ ಹಂತಕನ ಗುರುತು ಪತ್ತೆ ಹಚ್ಚಿದ್ದರು. ಕೃತ್ಯ ಎಸಗಿ ತನ್ನೂರು ಸೇರಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

Latest Videos
Follow Us:
Download App:
  • android
  • ios