Asianet Suvarna News Asianet Suvarna News

Love Failure: ಆಳ್ವಾಸ್ ಕಾಲೇಜಿನ ಕ್ಲಾಸ್‌ ರೂಮ್‌ಗೆ ನುಗ್ಗಿ ಯುವತಿಗೆ ಕತ್ತರಿಯಲ್ಲಿ ಇರಿದ ಪಾಗಲ್ ಪ್ರೇಮಿ!

ಪ್ರೇಮ ಪೈಫಲ್ಯದಿಂದ ವಿದ್ಯಾರ್ಥಿನಿಗೆ ಕತ್ತರಿಯಿಂದ ಯುವಕ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆದಿದೆ. ನಿನ್ನೆ (ಸೋಮವಾರ) ಮುಂಜಾನೆ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ತುಮಕೂರು ಮೂಲದ ಮಂಜುನಾಥ್‌ನನ್ನು ಮೂಡಬಿದಿರೆ ಪೋಲೀಸರು ಬಂಧಿಸಿದ್ದಾರೆ.

accused entered the class and stabbed a young girl with scissors in alvas college mudbidri gvd
Author
First Published Aug 13, 2024, 6:00 PM IST | Last Updated Aug 13, 2024, 7:31 PM IST

ಮಂಗಳೂರು (ಆ.13): ಪ್ರೇಮ ಪೈಫಲ್ಯದಿಂದ ವಿದ್ಯಾರ್ಥಿನಿಗೆ ಕತ್ತರಿಯಿಂದ ಯುವಕ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆದಿದೆ. ನಿನ್ನೆ (ಸೋಮವಾರ) ಮುಂಜಾನೆ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ತುಮಕೂರು ಮೂಲದ ಮಂಜುನಾಥ್‌ನನ್ನು ಮೂಡಬಿದಿರೆ ಪೋಲೀಸರು ಬಂಧಿಸಿದ್ದಾರೆ. 

ಆಳ್ವಾಸ್‌ನಲ್ಲಿ ಪಿಯುಸಿ ಓದುತ್ತಿರುವ ತುಮಕೂರು ಮೂಲದ ಯುವತಿಗೆ ಕತ್ತರಿಯಿಂದ  ಮಂಜುನಾಥ್ ಇರಿದಿದ್ದಾನೆ.  ಮಂಜುನಾಥ್ ಹಾಗು ಯುವತಿ ಪಿಯುಸಿ ತನಕ ಜೊತೆಯಲ್ಲೇ ವಿದ್ಯಾಭ್ಯಾಸ ನಡೆಸಿದ್ದರು.  ಇನ್ನು ಕಾಲೇಜು ತೊರೆದು ಮಂಜುನಾಥ್ ಮನೆಗೆ ತೆರಳಿದ್ದ. ಮೆಸೇಜ್‌ಗೆ ಉತ್ತರಿಸುತ್ತಿಲ್ಲ ಎಂದು ಕುಪಿತಗೊಂಡಿದ್ದ ಯುವಕ ಮಂಜುನಾಥ್, ತುಮಕೂರಿನಿಂದ ಮೂಡಬಿದರೆಗೆ ಬಂದಿದ್ದ. 

ನನಗೆ ಪೂರ್ಣಾವಧಿ ಅಧಿಕಾರ ಸಿಕ್ಕರೆ ರೈತರ ಸಮಸ್ಯೆಗಳಿಗೆ ಪರಿಹಾರ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ಜೊತೆಗೆ ಯುವತಿಯ ಭೇಟಿಗೆ ಹಲವು ಬಾರಿ ಮುಂದಾಗಿದ್ದ. ಭೇಟಿ ಸಾಧ್ಯವಾಗದಕ್ಕೆ ಕುಪಿತಗೊಂಡಿದ್ದ ಮಂಜುನಾಥ್ ನಿನ್ನೆ ತರಗತಿಗೆ ತೆರಳಿ ಯುವತಿಗೆ ಕತ್ತರಿಯಿಂದ ಇರಿದಿದ್ದ. ಘಟನೆಯಲ್ಲಿ ಯುವತಿ ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.  ಸದ್ಯ ಯುವಕನನನ್ನು ಹಿಡಿದು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿದ್ದು, ಆತನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. 

Latest Videos
Follow Us:
Download App:
  • android
  • ios