Acid Attack Case:ಆರೋಪಿ ಪತ್ತೆಗೆ ಪೊಲೀಸರಿಂದ ಹಳೆ ಸ್ಟೈಲ್ನಲ್ಲಿ ಹೊಸ ಪ್ಲಾನ್!
ಸುಂಕದಕಟ್ಟೆಯಲ್ಲಿ ಯುವತಿಯ ಮೇಲೆ ಆ್ಯಸಿಡ್ ದಾಳಿಯಾಗಿ 6 ದಿನಗಳು ಕಳೆದಿವೆ. ಆದರೆ ಆರೋಪಿ ನಾಗೇಶ್ ಮಾತ್ರ ಇನ್ನು ಸಿಕ್ಕಿಲ್ಲ, ಆರೋಪಿಗಾಗಿ ಕಾಮಾಕ್ಷಿಪಾಳ್ಯ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, ಲುಕ್ ಔಟ್ ನೊಟೀಸ್ ಹೊರಡಿಸಿದ್ದಾರೆ.
ಬೆಂಗಳೂರು (ಮೇ.02): ಸುಂಕದಕಟ್ಟೆಯಲ್ಲಿ ಯುವತಿಯ (Girl) ಮೇಲೆ ಆ್ಯಸಿಡ್ ದಾಳಿಯಾಗಿ 6 ದಿನಗಳು ಕಳೆದಿವೆ. ಆದರೆ ಆರೋಪಿ ನಾಗೇಶ್ (Nagesh) ಮಾತ್ರ ಇನ್ನು ಸಿಕ್ಕಿಲ್ಲ, ಆರೋಪಿಗಾಗಿ (Accused) ಕಾಮಾಕ್ಷಿಪಾಳ್ಯ ಪೊಲೀಸರು ಶೋಧ (Search) ಕಾರ್ಯ ಮುಂದುವರಿಸಿದ್ದು, ಲುಕ್ ಔಟ್ ನೊಟೀಸ್ ಹೊರಡಿಸಿದ್ದಾರೆ. ಆರೋಪಿ ನಾಗೇಶ್ ಚಹರೆ ಬದಲಿಸಿಕೊಂಡು ಓಡಾಡುತ್ತಿರುವ ಶಂಕೆ ವ್ಯಕ್ತವಾಗಿದ್ದು, ಹೀಗಾಗಿ ಕೂದಲು ಇರುವ ಹಾಗೂ ಕೂದಲು ಇಲ್ಲದೇ ಇದ್ದರೆ, ಆರೋಪಿ ನಾಗೇಶ್ ಹೇಗೆ ಕಾಣುತ್ತಾನೆ ಎಂದು ಪ್ರಕಟಣೆಯನ್ನು ಪೊಲೀಸರು ಹೊರಡಿಸಿದ್ದಾರೆ.
ತಲೆ ಕೂದಲು,ಗಡ್ಡ ಮೀಸೆ ಇದ್ದಾಗ ಹೇಗೆ ಕಾಣುತ್ತಾನೆ ಎಂಬ ಬಗ್ಗೆ ಒಂದು ಪೋಟೋ, ಗಡ್ಡ ತೆಗಿಸಿ, ಬರೀ ಕೂದಲು ಇದ್ದಾಗ ಹೇಗೆ ಕಾಣುತ್ತಾನೆ. ತಲೆ ಕೂದಲು ತೆಗಿಸಿ, ಗಡ್ಡ ಇದ್ದಾಗ ಹೇಗೆ ಕಾಣುತ್ತಾನೆ. ಗಡ್ಡ ,ಮೀಸೆ, ತಲೆ ಕೂದಲು ತೆಗೆದಾಗ ಹೇಗೆ ನಾಗೇಶ್ ಕಾಣುತ್ತಾನೆ ಎಂದು ಚಿತ್ರೀಸಿರುವ ಪೊಲೀಸರು, ನಾಲ್ಕು ಮಾದರಿಯ ಪೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನು ಎಲ್ಲೇ ಆರೋಪಿ ನಾಗೇಶ್ ಕಂಡು ಬಂದರೆ ಮಾಹಿತಿ ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರ ಮನವಿ ಮಾಡಿಕೊಂಡಿದ್ದಾರೆ.
ಆ್ಯಸಿಡ್ ದಾಳಿಗೆ ಒಳಗಾದ ಯುವತಿಯ ನೆರವಿಗೆ ಧಾವಿಸಿದ ಸಚಿವ ಹಾಲಪ್ಪ ಆಚಾರ್
ಆ್ಯಸಿಡ್ ದಾಳಿ ಮಾಡಿದ ವಿಕೃತ ಪ್ರೇಮಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಪ್ರೀತಿಸಿದ ಹುಡುಗಿಯ ಮೇಲೆ ಆಸಿಡ್ ದಾಳಿ ಮಾಡಿರುವ ದುರಂತ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದೆ. 23 ವರ್ಷದ ಸಂತ್ರಸ್ಥೆಯ ಮೇಲೆ ಸುಂಕದಕಟ್ಟರ ಮುತ್ತೂಟು ಫಿನ್‌ಕಾರ್ಪ್ ಬಳಿ ಹುಚ್ಚು ಪ್ರೇಮಿಯೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ. ಆರೋಪಿಯನ್ನು ನಾಗೇಶ್ ಎಂದಯ ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ ನಾಗೇಶ್ ಯುವತಿಯನ್ನು ಹಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ. ಎಲ್ಲಿ ಹೋದರೂ ಹಿಂದೆ ಹಿಂದೆಯೇ ಸುತ್ತುತ್ತಿದ್ದ. ಹುಡುಗಿ ತನಗೆ ಇಷ್ಟವಿಲ್ಲ ಎಂದು ಎಷ್ಟು ಬಾರಿ ಹೇಳಿದರೂ ಕೇಳಲು ನಾಗೇಶ್ ಸಿದ್ಧನಿರಲಿಲ್ಲ.
ಕಡೆಯಬಾರಿಗೆ ಪ್ರೀತಿಸುತ್ತೀಯಾ ಇಲ್ಲವಾ ಎಂದು ಧಮಕಿ ಹಾಕಿದ್ದಾನೆ, ಹುಡುಗಿ ನಿರಾಕರಿಸಿದಾಗ ಆಸಿಡ್ ಎರಚಿದ್ದಾನೆ ಎಂದು ಸ್ಥಳೀಯ ಮೂಲಗಳು ಮಾಹಿತಿ ನೀಡಿವೆ. ಯುವತಿ ಕಚೇರಿಗೆ ತೆರಳಲು ಮುತ್ತೂಟು ಫಿನ್‌ಕಾರ್ಪ್ ಬಳಿ ಹೋದಾಗ ವಿಕೃತ ಪ್ರೇಮಿ ನಾಗೇಶ್ ಈ ಕೃತ್ಯ ಎಸಗಿದ್ದಾನೆ. ಸದ್ಯ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ನಾಗೇಶ್ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಳು ವರ್ಷಗಳ ಪ್ರೀತಿ: ಇದು ಒಂದೆರಡು ದಿನದ ಪ್ರೇಮ ನಿವೇದನೆಯಲ್ಲ, ಬರೋಬ್ಬರಿ ಏಳು ವರ್ಷಗಳಿಂದ ಪ್ರೀತಿಸುವಂತೆ, ಮದುವೆಯಾಗುವಂತೆ ನಾಗೇಶ್ ಪೀಡಿಸುತ್ತಿದ್ದ ಎನ್ನಲಾಗಿದೆ. ನಿನ್ನೆ ಮತ್ತೆ ಮದುವೆಯಾಗುವಂತೆ ಆತ ಕೇಳಿದಾಗ, ಇಬ್ಬರ ನಡುವೆ ಜಗಳವಾಗಿದೆ. ಹುಡುಗಿ ಸಾಧ್ಯವೇ ಇಲ್ಲವೆಂದು ಹೇಳಿದ್ದಾಳೆ. ಇದಾದ ನಂತರ ಇಂದು ಮುಂಜಾನೆ ನಾಗೇಶ್ ಆಸಿಡ್ ದಾಳಿ ಮಾಡಿದ್ದಾನೆ. ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಏಷಿಯಾನೆಟ್ ಸುವರ್ಣ ನ್ಯೂಸ್ ಜತೆ ಮಾತನಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದರು. "ಯುವತಿ ಮುತ್ತೂಟ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಎಂಟುವರೇ ಸುಮಾರಿಗೆ ಯುವತಿ ತಂದೆ ಬೈಕ್ ನಲ್ಲಿ ಕರೆದುಕೊಂಡು ಬಂದು ಡ್ರಾಪ್ ಮಾಡಿ ಹೋಗಿದ್ದರು.
Bengaluru acid attack ನಮ್ಮ ತಾಯಿ ಮೇಲೂ ಆ್ಯಸಿಡ್ ದಾಳಿ ಆಗಿತ್ತು, ಭಾವನಾತ್ಮಕ ಹೇಳಿಕೆ ನೀಡಿದ ಕುಮಾರಸ್ವಾಮಿ!
ಯುವತಿ ತಂದೆ ಡ್ರಾಪ್ ಮಾಡಿ ಹೋದ ಕೆಲವೇ ಕ್ಷಣದಲ್ಲಿ ಯುವತಿ ಮೇಲೆ ಆರೋಪಿ ನಾಗೇಶ್ ಆಸಿಡ್ ಎರಚಿದ್ದಾನೆ. ಆರೋಪಿ ನಾಗೇಶ್ ಮೊದಲೇ ಆಸಿಡ್ ಹಾಕಲು ಸಿದ್ದತೆ ಮಾಡ್ಕೊಂಡು ಬಂದಿದ್ದ. ಸದ್ಯ ಯುವತಿಯ ಪರಿಸ್ಥಿತಿ ಗಂಭೀರವಾಗಿದೆ. ಒಂದು ವಾರಗಳ ಕಾಲ ತ್ರೀವ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತದೆ," ಎಂದು ಮಾಹಿತಿ ನೀಡಿದರು. ಮೂಲಗಳ ಪ್ರಕಾರ ಶೌಚಾಲಯಕ್ಕೆ ಬಳಸುವ ಆ್ಯಸಿಡ್ ನಿಂದ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಆ್ಯಸಿಡ್ ಯಾವುದು ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದ್ದು, ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದ್ದು ಶೀಘ್ರದಲ್ಲಿ ಬಂಧಿಸುವ ವಿಶ್ವಾಸ ಪೊಲೀಸರಿಗಿದೆ.