ನಟ ಅಹಿಂಸಾ ಚೇತನ್‌ ಬಂಧನ: ಹಿಂದುತ್ವದ ವಿರುದ್ಧ ಕೆಟ್ಟದಾಗಿ ಪೋಸ್ಟ್‌

ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರುದ್ಧ ಕೆಟ್ಟದಾಗಿ ಪೋಸ್ಟ್‌ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಅಹಿಂಸಾ ಚೇತನ್‌ ಅವರನ್ನು ಬಂಧಿಸಿದ್ದಾರೆ.

Actor Ahimsa Chetan Arrested Bad Post Against Hindutva sat

ಬೆಂಗಳೂರು (ಮಾ.21): ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವ ಹಾಗೂ ಹಿಂದೂ ಧರ್ಮದ ವಿರುದ್ಧ ಕೆಟ್ಟದಾಗಿ ಪೋಸ್ಟ್‌ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ನಟ ಅಹಿಂಸಾ ಚೇತನ್‌ ಅವರನ್ನು ಬಂಧಿಸಿದ್ದಾರೆ.

ನಟ ಚೇತನ್‌ ಅವರನ್ನು ಬಂಧಿಸಿದ ಶೇಷಾದ್ರಿಪುರ ಠಾಣೆ ಪೊಲೀಸರು ಇಂದು ಬೆಳಗ್ಗೆ ಬಂಧಿಸಿ ಕೋರ್ಟ್ ಕರೆದೊಯ್ದರು. ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್‌ ಮಾಡಿಕೊಂಡು ಅದಕ್ಕೊಮದು ಫೋಟೋವನ್ನು ಕೂಡ ಹಂಚಿಕೊಂಡಿದ್ದರು. ಜೊತೆಗೆ, ಉರಿಗೌಡ ಮತ್ತು ನಂಜೇಗೌಡ ಬಗ್ಗೆ ಟ್ವೀಟ್ ಮಾಡಿಕೊಂಡಿದ್ದರು. ಇನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಬೆನ್ನಲ್ಲೇ ಶಿವಕುಮಾರ್ ಎಂಬುವರು ಶೇಷಾದ್ರಿಪುರ ಠಾಣೆಗೆ ದೂರು ದಾಖಲಿಸಿದ್ದರು. 

ಆದಿಚುಂಚನಗರಿ ಶ್ರೀಗಳಿಂದ ಬಿಜೆಪಿ ಒಕ್ಕಲಿಗ ಸಚಿವರಿಗೆ ತರಾಟೆ: ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚಿಸದಂತೆ ಎಚ್ಚರಿಕೆ

ಹಿಂದುಗಳ ಭಾವನೆಗೆ ಧಕ್ಕೆ ತರುವ ಪೋಸ್ಟ್‌: ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ ದೂರಿನ ಬೆನ್ನಲ್ಲೇ ಈ ಬಗ್ಗೆ ಶೇಷಾದ್ರಿಪುರಂ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಟ ಚೇತನ್ ಅವರನ್ನು ಬೆಳಗ್ಗೆ ಬಂಧನ ಮಾಡಿದ ಪೊಲೀಸರು, ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. 

ಪೋಸ್ಟ್‌ನಲ್ಲಿ ಏನಿದೆ.? : ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ: ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದುರಿಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು- ಇದೊಂದು ಸುಳ್ಳು.  
1992ರಲ್ಲಿ: ಬಾಬರಿ ಮಸೀದಿ ರಾಮನ ಜನ್ಮಭೂಮಿ- ಇದು ಒಂದು ಸುಳ್ಳು.
ಈಗ 2023ರಲ್ಲಿ: ಉಡಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. 
ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು- ಸತ್ಯವೇ ಸಮಾನತೆ ಎಂದು ಬರೆದುಕೊಂಡಿದ್ದಾರೆ.

ಆದಿಚುಂಚನಗಿರಿ ಶ್ರೀಗಳಿಂದ ತರಾಟೆ: ಉರಿಗೌಡ ನಂಜೇಗೌಡ ಸಿನಿಮಾ ಕೈಬಿಟ್ಟ ಮುನಿರತ್ನ

ಆದಿಚುಂಚನಗಿರಿ ಶ್ರೀಗಳ ಬಗ್ಗೆ ಮೆಚ್ಚುಗೆ: ಇನ್ನು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಮಾಡಿಕೊಂಡಿದ್ದ ಇನ್ನೊಂದು ಪೋಸ್ಟ್‌ನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ನಡೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. "ಮೇ 2022 ರಲ್ಲಿ, ನಿರ್ಮಲಾನಂದ ಸ್ವಾಮೀಜಿ ಅವರು 'ನಾಡ ಗೀತೆಗೆ ಅಗೌರವ ತೋರಿದವರ' ವಿರುದ್ಧ ಶಿಕ್ಷಾರ್ಹ ಕ್ರಮವನ್ನು ಕೋರಿದ್ದರು.  ಇದು ಪ್ರಜಾಪ್ರಭುತ್ವದ ಹಕ್ಕುಗಳು ಮತ್ತು ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯ ಪ್ರಯತ್ನವಾಗಿದೆ. ಇಂದು ಅವರು ಕೋಮುವಾದಿ ಊರಿಗೌಡ- ನಂಜೇಗೌಡರ ಕಟ್ಟುಕಥೆಯನ್ನು ಪ್ರಶ್ನಿಸಿದ್ದಾರೆ. ಇದು ಇತಿಹಾಸವಲ್ಲ ಎಂದು ಅವರು ಸೂಚಿಸುವುದು ಒಳ್ಳೆಯ ನಡೆಯಾಗಿದೆ ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ. 

Latest Videos
Follow Us:
Download App:
  • android
  • ios