ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಚೇತನ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಬೆಂಗಳೂರು (ಮಾ.21): ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಚೇತನ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಿಂದುತ್ವದ ವಿರೋಧಿ ಟ್ವೀಟ್‌ ಮಾಡಿದ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಠಾಣೆಗೆ ದೂರು ದಾಖಲಾಗಿತ್ತು. ಈ ದೂರಿನ ಆಧಾರದಲ್ಲಿ ಇಂದು ಬೆಳಗ್ಗೆ ಚೇತನ್‌ ಅವರನ್ನು ಬಂಧಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣವನ್ನು ವಿಚಾರಣೆ ಮಾಡಿದ 32ನೇ ಎಸಿಎಂಎಂ ನ್ಯಾಯಾಲಯವು ಚೇತನ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶವನ್ನು ಹೊರಡಿಸಿದೆ. 

ನಟ ಅಹಿಂಸಾ ಚೇತನ್‌ ಬಂಧನ: ಹಿಂದುತ್ವದ ವಿರುದ್ಧ ಕೆಟ್ಟದಾಗಿ ಪೋಸ್ಟ್‌

ಪೊಲೀಸರಿಂದ ಸುಳ್ಳು ಕೇಸ್‌ ದಾಖಲಾಗಿದೆ ಎಂದು ವಾದ: ಮತ್ತೊಂದೆಡೆ ನಟ ಚೇತನ್ ಪರ ವಕೀಲರಿಂದ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನು ಹಿಂದುತ್ವ ವಿರೋಧಿ ಪೋಸ್ಟ್ ಅನ್ನು ನಟ ಚೇತನ್ ಅವರೇ ಬರೆದಿದ್ದಾರೆ ಅನ್ನೋದಕ್ಕೆ‌ ಸಾಕ್ಷಿ ಇಲ್ಲ. ಈ ಬಗ್ಗೆ ಪೊಲೀಸರು ಸುಳ್ಳು ಕೇಸ್‌ ಅನ್ನು ದಾಖಲಿಸಿಕೊಂಡಿದ್ದಾರೆ. ಹೀಗಾಗಿ, ಚೇತನ್‌ ಅವರನ್ನು ಬಿಡುಗಡೆ ಮಾಡಬೇಕು ಎಂದು ಎಂದು ವಾದ ಮಂಡಿಸಿದ್ದಾರೆ. ಆದರೆ, ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆ ನಡೆಸುವ ಉದ್ದೇಶದಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಪೋಸ್ಟ್‌ನಲ್ಲಿ ಏನಿದೆ.?: 

  • ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ: ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದುರಿಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು- ಇದೊಂದು ಸುಳ್ಳು.
  • 1992ರಲ್ಲಿ: ಬಾಬರಿ ಮಸೀದಿ ರಾಮನ ಜನ್ಮಭೂಮಿ- ಇದು ಒಂದು ಸುಳ್ಳು.
  • ಈಗ 2023ರಲ್ಲಿ: ಉಡಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು. 
  • ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು- ಸತ್ಯವೇ ಸಮಾನತೆ

ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ ಬಗ್ಗೆ ಶಿವಕುಮಾರ್‌ ಎನ್ನುವವರು ಬಂದು ದೂರು ದಾಖಲಿಸಿದ್ದರು. ಈ ದೂರಿನ ಬೆನ್ನಲ್ಲೇ ಶೇಷಾದ್ರಿಪುರಂ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ನಂತರ ನಟ ಚೇತನ್ ಅವರನ್ನು ಇಂದು ಬೆಳಗ್ಗೆ ಬಂಧನ ಮಾಡಿದ ಪೊಲೀಸರು, ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಅಲ್ಲಿ ನಡೆದ ವಿಚಾರಣೆಯಿಂದ ಚೇತನ್‌ಗೆ 14 ದಿನ ನ್ಯಾಯಾಂಗ ಬಂಧನ ಆದೇಶವಾಗಿದೆ.