Asianet Suvarna News Asianet Suvarna News

ನಟ ದರ್ಶನ್ ಫಾರ್ಮ್ ಹೌಸ್‌ನ ಮತ್ತೊಬ್ಬ ಮ್ಯಾನೇಜರ್ ಶವವಾಗಿ ಪತ್ತೆ

ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Actor Darshan Anekal durga farmhouse Manager Sridhar died in Bagganadoddi Village sat
Author
First Published Jun 18, 2024, 12:13 PM IST

ಬೆಂಗಳೂರು/ಆನೇಕಲ್ (ಜೂ.18): ಬೆಂಗಳೂರಿನ ಹೊರವಲಯದಲ್ಲಿರುವ ನಟ ದರ್ಶನ್ ಅವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಮ್ಯಾನೇಜರ್ ಮಾನಸಿಕ ಖಿನ್ನತೆಗೆ ಒಳಗಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಡೆದಿದ್ದ ಘಟನೆ ನಡೆದಿದೆ. ಮೃತ ಮ್ಯಾನೇಜರ್ ಶ್ರೀಧರ್ ಆಗಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಮ್ಯಾನೇಜರ್ ಶ್ರೀಧರ್  ಆತ್ಮಹತ್ಯೆಗೆ ಶರಣಾಗಿದ್ದರು. ಬಗ್ಗನದೊಡ್ಡಿಯಲ್ಲಿನ ದುರ್ಗ ಫಾರ್ಮ್ ಹೌಸ್‌ನಲ್ಲಿ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದನು. ಆತ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಇನ್ನು ಶ್ರೀಧರ್ ಮೃತ ದೇಹವನ್ನು ನೋಡಿದ್ದ ಆತನ ಶ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದನು.

ದರ್ಶನ್ ಗ್ಯಾಂಗ್ ಮೇಲೆ ಮತ್ತೊಂದು ಡೌಟ್, ಮೋರಿ ಪಾಲಾದ್ರಾ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್?

ಪೊಲೀಸರು ಸ್ಥಳ ಭೇಟಿ ಮಾಡಿ ಪರಿಶೀಲನೆ ಮಾಡಿದಾಗ ಮ್ಯಾನೇಜರ್ ಶ್ರೀಧರ್ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಮೃತಪಟ್ಟಿದ್ದನು. ಒಂದು ವರ್ಷಗಳ ಕಾಲ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ ಶ್ರೀಧರ್, ಫಾರ್ಮ್‌ಹೌಸ್ ಪಕ್ಕದ ಕಲ್ಲು ಬಂಡೆ ಮೇಲೆ ಅನಾಥವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಸುಮಾರು 2 ಎಕರೆ 36ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್ ನಿರ್ಮಾಣವಾಗುತ್ತಿದೆ. ನನ್ನ ಸಾವಿಗೆ ನಾನೇ ಕಾರಣ, ಒಂಟಿತನ ಕಾಡುತ್ತಿದೆ ಎಂದು ಡೆತ್ ಬರೆದಿಟ್ಟು ಸ್ಯೂಸೈಡ್ ಮಾಡಿಕೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲಿ ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ದಾಖಲು ಮಾಡಿಕೊಂಡಿದ್ದಾರೆ.

ಡೆತ್ ನೋಟ್ ಮೇಲೆ ಅನುಮಾನ: ದರ್ಶನ್ ಫಾರ್ಮ್‌ಹೌಸ್ ಮ್ಯಾನೇಜರ್ ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್‌ನೋಟ್ ಅನುಮಾನ ಹುಟ್ಟು ಹಾಕುತ್ತಿದೆ. ಡೆತ್ ನೋಟ್ ಅನ್ನು ಸ್ವತಃ ತಾನೇ ಬರೆದಿಟ್ಟಿರುವ ಮ್ಯಾನೇಜರ್ ಶ್ರೀಧರ್ ಡೆತ್ ನೋಟ್ ಮೇಲೆ ಸಹಿ ಹಾಕುವುದು ಬಿಟ್ಟು ಹೆಬ್ಬೆಟ್ಟು ಒತ್ತಿದ್ದಾನೆ. ಇದು ಅನುಮಾನಕ್ಕೆ ಕಾರಣವಾಗಿದೆ. ಜೊತೆಗೆ, ಸಾಯುವ ಮುನ್ನ ಸೆಲ್ಫಿ ವಿಡಿಯೋವೊಂದನ್ನು ಕೂಡ ಮಾಡಿದ್ದಾನೆ. ಅದರಲ್ಲಿ ಯಾವುದೋ ಕಾರಣದಿಂದ ನನ್ನ ಪರ್ಸನಲ್ ಒಂಟಿತನ ಕಾಡುತ್ತಿದೆ. ಬದುಕುವ ಆಸೆಯಿಲ್ಲ, ನನ್ನ ಸಾವಿಗೆ ನಾನೇ ಕಾರಣ. ನನ್ನ ಸಾವಿನ ಕಾರಣ ಹಾಗೂ ಹಿನ್ನೆಲೆಯನ್ನು ಇಟ್ಟುಕೊಂಡು ಸ್ನೇಹಿತರು, ಕುಟುಂಬ ಸದಸ್ಯರು ಸೇರಿದಂತೆ ಯಾರೊಬ್ಬರಿಗೂ ತೊಂದರೆ ಕೊಡಬೇಡಿ. ನಾನು ಯಾರಿಗೆ ಫೋನ್ ಮಾಡಿದ್ದೆ, ಅದು ಇದು ಎಂದು ಯಾರಿಗೂ ಪೊಲೀಸರು ತೊಂದರೆ ಕೊಡಬೇಡಿ. ನಮ್ಮ ಮನೆಯಲ್ಲಿ ಅಪ್ಪ, ಅಮ್ಮ, ಸಹೋದರಿಯರು ಸೇರಿ ಎಲ್ಲರಿಗೂ ಹೇಳುತ್ತಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ. ಒಟ್ಟಾರೆ, ಮ್ಯಾನೇಜರ್ ಶ್ರೀಧರ್ ಸಾಯುವ ಮುನ್ನ ಮಾಡಿದ 1 ನಿಮಿಷದ ವಿಡಿಯೋದಲ್ಲಿ ನನ್ನ ಸಾವಿಗೆ ನಾನೇ ಕಾರಣ ಎನ್ನುವುದನ್ನು 10ಕ್ಕೂ ಹೆಚ್ಚು ಮಾಡಿ ಹೇಳಿಕೊಂಡಿದ್ದಾನೆ. ಇದರಿಂದ ಆತನ ಆತ್ಮಹತ್ಯೆ ಮೇಲೆ ಅನುಮಾನ ಕಾಡುತ್ತಿದೆ.

Actor Darshan Anekal durga farmhouse Manager Sridhar died in Bagganadoddi Village sat

ನಿಗೂಢವಾಗಿ ನಾಪತ್ತೆಯಾದ ದರ್ಶನ್​ ಮ್ಯಾನೇಜರ್​ ಮಲ್ಲಿಕಾರ್ಜುನ ಬರೆದ ಪತ್ರ ವೈರಲ್​? ಏನಿದೆ ಇದರಲ್ಲಿ?

ನಟ ದರ್ಶನ್ ಮ್ಯಾನೇಜರ್ ಮಲ್ಲಿಕಾರ್ಜುನ ನಿಗೂಢ ನಾಪತ್ತೆ:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ನಿಂತಿರುವ ದರ್ಶನ್​ ಅವರ ಬಗ್ಗೆ ವಿಚಾರಿಸುವ ವೇಳೆ ಅವರ ಮ್ಯಾನೇಜರ್​ ಆಗಿದ್ದಂಥ ಮಲ್ಲಿಕಾರ್ಜುನ​ ಅವರ ನಿಗೂಢ ಕಣ್ಮರೆಯಾಗಿರುವ ಆಘಾತಕಾರಿ ವಿಷಯವೂ ಹೊರಕ್ಕೆ ಬಂದಿದೆ. 2018ರಿಂದಲೂ ನಾಪತ್ತೆಯಾಗಿರುವ ಈ ಮ್ಯಾನೇಜರ್​ಗೂ ದರ್ಶನ್​ ಮತ್ತು ಅವರ ಗ್ಯಾಂಗ್​ಗೂ ಸಂಬಂಧವಿದೆಯೇ ಎನ್ನುವ ನಿಟ್ಟಿನಲ್ಲಿ ಪೊಲೀಸರು ಇದಾಗಲೇ ತನಿಖೆ ಶುರುವಿಟ್ಟುಕೊಂಡಿದ್ದಾರೆ. ಈ ಮಿಸ್ಸಿಂಗ್​ ಕೇಸ್​ ಬಗ್ಗೆ ಇದಾಗಲೇ ವಿವಿಧ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿರುವ ನಡುವೆಯೇ, ಈ ಹಿಂದೆ ಮಲ್ಲಿಕಾರ್ಜುನ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ಹಲ್​ಚಲ್​ ಸೃಷ್ಟಿಸಿತ್ತಿದೆ. ಇದು ಸೋಷಿಯಲ್​  ಮೀಡಿಯಾದಲ್ಲಿ ವೈರಲ್​ ಆಗಿದ್ದು, ಈ ಪತ್ರದ ಸತ್ಯಾಸತ್ಯತೆ ಇನ್ನಷ್ಟೇ ತಿಳಿಯಬೇಕಿದೆ.

Latest Videos
Follow Us:
Download App:
  • android
  • ios