ಗಂಡನ ರಕ್ಷಣೆಗೆ ಟೊಂಕ ಕಟ್ಟಿ ನಿಂತ ವಿಜಯಲಕ್ಷ್ಮಿ, ದರ್ಶನ್‌ ಪರ ವಾದಕ್ಕೆ ಹಿರಿಯ ವಕೀಲರ ಭೇಟಿ

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುತ್ತಿದೆ ಈ ಹಿನ್ನೆಲೆಯಲ್ಲಿ ಪತಿ ದರ್ಶನ್‌ ನನ್ನು  ಬಿಡಿಸಲು ಪತ್ನಿ ವಿಜಯಲಕ್ಷ್ಮಿ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು, ಹಿರಿಯ ವಕೀಲರನ್ನು ಭೇಟಿ ಮಾಡಿದ್ದಾರೆ.

Actor darshan wife vijayalakshmi meet senior advocate Ravi B Naik over Renukaswamy murder case gow

ಬೆಂಗಳೂರು (ಜೂ.17): ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿ (RenukaSwamy) ಕೊಲೆ ಪ್ರಕರಣ ಆರೋಪದ ಹಿನ್ನೆಲೆ ನಟ ದರ್ಶನ್ (Actor Darshan), ಪವಿತ್ರಾ ಗೌಡ  (  Pavithra Gowda) ಸೇರಿ ಒಟ್ಟು 19    ಮಂದಿಯನ್ನು ಈವರೆಗೆ ಬಂಧಿಸಲಾಗಿದ್ದು,  ಜೂನ್ 21ರವರೆಗೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.  ಆದರೆ ಈಗ  ಈ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ಕಲೆ ಹಾಕುವ ಪ್ರಕ್ರಿಯೆ ನಡೆಯುತ್ತಿದ್ದು ದರ್ಶನ್‌ಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುತ್ತಿದೆ ಈ ಹಿನ್ನೆಲೆಯಲ್ಲಿ ಪತಿ ದರ್ಶನ್‌ ನನ್ನು  ಬಿಡಿಸಲು ಪತ್ನಿ ವಿಜಯಲಕ್ಷ್ಮಿ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದ ಅತ್ಯುತ್ತಮ ಕ್ರಿಮಿನಲ್ ಲಾಯರ್‌ ಗಳಲ್ಲಿ ಒಬ್ಬರಾಗಿರುವ  ರವಿ. ಬಿ ನಾಯಕ್ ಅವರನ್ನು ಭೇಟಿ ಮಾಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆ ಸಿಕ್ಕಿದ್ದು ಪತ್ನಿ ವಿಜಯಲಕ್ಷ್ಮಿ ಫ್ಲಾಟ್ ನಲ್ಲಿ!

ಕೊಲೆ ಕೇಸಿನಲ್ಲಿ ರೇಣುಕಾಸ್ವಾಮಿ ಸಾವಿಗೆ ನ್ಯಾಯ ಒದಗಿಸಲು ಮುಂದಾದ ಸರ್ಕಾರದ ಪರವಾಗಿ ವಾದ ಮಂಡಿಸಲು ಚಾಣಾಕ್ಷ ವಕೀಲ ಪಿ. ಪ್ರಸನ್ನ ಕುಮಾರ್ ಅವರನ್ನು ಸರ್ಕಾರಿ ಅಭಿಯೋಜಕರನ್ನಾಗಿ ನಿಯೋಜನೆ ಮಾಡಲಾಗಿತ್ತು. ಇದರ ಬೆನ್ನಲ್ಲಿಯೇ   ಗಂಡನ ರಕ್ಷಣೆಗೆ ಟೊಂಕ ಕಟ್ಟಿ ನಿಂತ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಿರಿಯ ವಕೀಲ ರವಿ. ಬಿ ನಾಯಕ್ ಅವರನ್ನು ಭೇಟಿ ಮಾಡಿದ್ದಾರೆ. ಖ್ಯಾತ ಹಿರಿಯ ವಕೀಲರಾಗಿರುವ ರವಿ. ಬಿ ನಾಯಕ್ ರಾಜ್ಯದ ಅನೇಕ ರಾಜಕಾರಣಿಗಳ, ಉನ್ನತ ವ್ಯಕ್ತಿಗಳ ಪ್ರಕರಣದಲ್ಲಿ ವಾದಿಸಿದ್ದಾರೆ. ರಾಜ್ಯದ ಅತ್ಯುತ್ತಮ ಕ್ರಿಮಿನಲ್ ಲಾಯರ್‌ಗಳಲ್ಲಿ ಇವರೂ ಒಬ್ಬರು.

ಇಂದು ಗಮನಿಸಬೇಕಾದ ಅಂಶವೆಂದರೆ ಡಿ ಗ್ಯಾಂಗ್‌ ಗೆ ಕಾನೂನಿನ ಕಂಟಕ ಬಿಗಿಯಾಗುತ್ತಿದ್ದರೂ, ಈ ಪ್ರಕರಣದಿಂದ ದರ್ಶನ್‌ ಬೆಂಬಲಕ್ಕೆ ಕುಟುಂಬದಲ್ಲಿ ಯಾರೂ ಬಂದಿಲ್ಲ. ಹೆತ್ತ ತಾಯಿ ಮತ್ತು ಒಡಹುಟ್ಟಿದ ತಮ್ಮ ಸೇರಿ ಕುಟುಂಬ ಎಲ್ಲಾ ಸದಸ್ಯರು ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ಇಂದು ಗಂಡನನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂದು ಪರದಾಡುತ್ತಿರುವುದು ಮೊದಲ ಪತ್ನಿ ವಿಜಯಲಕ್ಷ್ಮಿ ಮಾತ್ರ.

ಹುಟ್ಟೂರು ಪೊನ್ನಂಪೇಟೆಯಲ್ಲಿ ನಟ ದರ್ಶನ್ ಕ್ರೌರ್ಯ, ಹೋಂ ಸ್ಟೇಯಲ್ಲಿ ಕೆಲಸದಾಕೆಗೆ ಸಿಗರೇಟ್‌ನಿಂದ ಸುಟ್ಟು ಹಲ್ಲೆ!

ರೇಣುಕಾಸ್ವಾಮಿ ರಕ್ತಸಿಕ್ತ ಬಟ್ಟೆ ಪತ್ತೆ:
ನಟ ದರ್ಶನ್‌ ಮತ್ತು ಅವರ ಗ್ಯಾಂಗ್‌ನಿಂದ ಹತ್ಯೆಯಾದ ವೇಳೆ ಚಿತ್ರದುರ್ಗದ ರೇಣುಕಾಸ್ವಾಮಿ ಧರಿಸಿದ್ದ ಬಟ್ಟೆಗಳನ್ನು ಘಟನೆ ನಡೆದ ಎಂಟು ದಿನಗಳ ನಂತರ ಕೊನೆಗೂ ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಂತ್ರಸ್ತನನ್ನು ಹೊಡೆದು ಸಾಯಿಸಿದ ಪಟ್ಟಣಗೆರೆಯ ಶೆಡ್‌ನಲ್ಲೇ ಬಟ್ಟೆಯನ್ನು ಹಂತಕರು ಬಚ್ಚಿಟ್ಟಿದ್ದರು. ಆರೋಪಿಗಳಾದ ನಾಗರಾಜ್‌, ದೀಪಕ್‌, ನಂದೀಶ್‌ನನ್ನು ಭಾನುವಾರ ಮತ್ತೆ ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ಗೆ ಕರೆತಂದಿದ್ದ ಪೊಲೀಸರು, ಆರೋಪಿಗಳು ಬಚ್ಚಿಟ್ಟಿದ್ದ ರೇಣುಕಾಸ್ವಾಮಿಯ ರಕ್ತಸಿಕ್ತ ಬಟ್ಟೆಗಳನ್ನು ವಶಕ್ಕೆ ಪಡೆದರು. ಆದರೆ, ಮೃತದೇಹದ ಜೊತೆಗೇ ರಾಜಾಕಾಲುವೆಗೆ ಎಸೆದಿದ್ದಾರೆ ಎನ್ನಲಾದ ರೇಣುಕಾಸ್ವಾಮಿಯ ಮೊಬೈಲ್‌ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಇಂದು ಸ್ಥಳದಲ್ಲಿ ಶೋಧ ನಡೆಸಿದರೂ ಸಿಕ್ಕಿಲ್ಲ.

Latest Videos
Follow Us:
Download App:
  • android
  • ios