ಬೆಂಗಳೂರು(ಅ.18): ಮಾದಕ ವಸ್ತು ಮಾರಾಟ ಜಾಲ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ಆಳ್ವ ಸೋದರಿ ಹಾಗೂ ಬಾಲಿವುಡ್‌ ನಟ ವಿವೇಕ್‌ ಒಬೆರಾಯ್‌ ಪತ್ನಿ ಪ್ರಿಯಾಂಕಾ ಆಳ್ವ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಮತ್ತೆ ನೋಟಿಸ್‌ ಜಾರಿಗೊಳಿಸಿದೆ.

ಪ್ರಕರಣದ ವಿಚಾರಣೆಗೆ ಶುಕ್ರವಾರ ಪ್ರಿಯಾಂಕಾ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ನಾಲ್ಕು ದಿನಗಳ ಕಾಲಾವಕಾಶ ನೀಡಿರುವ ಸಿಸಿಬಿ, ಅ.20ರಂದು ಬೆಳಗ್ಗೆ ಸಿಸಿಬಿ ಕಚೇರಿಯಲ್ಲಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು ಎಂದು ಎರಡನೇ ನೋಟಿಸ್‌ನಲ್ಲಿ ಸ್ಪಷ್ಟವಾಗಿ ಸೂಚಿಸಿದೆ. 

ಡ್ರಗ್ಸ್‌ ಕೇಸ್ ಉರುಳು : ಪ್ರಿಯಾಂಕಾ ವಿಚಾರಣೆಗೆ ಗೈರು

ತಮ್ಮ ಸೋದರನಿಗೆ ಆಶ್ರಯ ನೀಡಿದ ಆರೋಪ ಎದುರಿಸುತ್ತಿರುವ ಪ್ರಿಯಾಂಕಾ ಅವರಿಗೆ ಸಿಸಿಬಿ ತನಿಖೆ ತಟ್ಟಿದೆ. ಮುಂಬೈನ ಜುಹು ಪ್ರದೇಶದಲ್ಲಿರುವ ಅವರ ಮನೆ ಮೇಲೆ ಗುರುವಾರ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದರು.