Asianet Suvarna News Asianet Suvarna News

ಅನೈತಿಕ ಸಂಬಂಧದ ಆರೋಪ; ಮರ್ಯಾದೆಗಂಜಿ ನೇಣುಬಿಗಿದು ಯುವಕ ಆತ್ಮಹತ್ಯೆ!

ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಹೊಸಹಳ್ಳಿಯಲ್ಲಿ ನಡೆದಿದೆ. ಚಂದ್ರಶೇಖರ್‌ (25) ಮೃತ ಯುವಕ. ಹೊಸಹಳ್ಳಿಯಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತ ವ್ಯಕ್ತಿ.

Allegation of illicit relationship A young man committed suicide at yadgir rav
Author
First Published Dec 15, 2023, 5:54 AM IST

ಯಾದಗಿರಿ (ಡಿ.15): ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಹೊಸಹಳ್ಳಿಯಲ್ಲಿ ನಡೆದಿದೆ.

ಚಂದ್ರಶೇಖರ್‌ (25) ಮೃತ ಯುವಕ. ಹೊಸಹಳ್ಳಿಯಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತ ವ್ಯಕ್ತಿ. ಚಂದ್ರಶೇಖರ್ ಹೊಸಹಳ್ಳಿ ಗ್ರಾಮದವನಾಗಿದ್ದು, ಅನೈತಿಕ ಸಂಬಂಧದ ಆರೋಪದ ಹೊರಿಸಿ ಕೆಲವರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ, ಅವಮಾನ ಸಹಿಸದೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಯಾದಗಿರಿ: ಅಕ್ಕಿ ಅಕ್ರಮಕ್ಕೆ ತೇಪೆ ಹಚ್ಚಲು ಬಲಿಪಶು ಹುಡುಕಾಟ?

ಮಹಿಳೆಯೊಬ್ಬರ ಜೊತೆ ಈತನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ, ಕೆಲದಿನಗಳ ಹಿಂದೆ ಈತನನ್ನು ಮರಕ್ಕೆ ಹಗ್ಗದಿಂದ ಕಟ್ಟಿ ಕೆಲವರು ಥಳಿಸಿದ್ದಲ್ಲದೆ, ಕುಟುಂಬಸ್ಥರ ಮೇಲೆಯೂ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಈ ಅವಮಾನ ಸಹಿಸದೆ ನೊಂದು, ಹೆದರಿ ಎಂಟು ಜನರ ಹೆಸರಿರುವ ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಯ ಬಳಿಕ, ಆರೋಪಿ ಕುಟುಂಬದವರು ಪರಾರಿಯಾಗಿದ್ದಾರೆ. ಆದರೆ, ಮಹಿಳೆಯ ಕುಟುಂಬಸ್ಥರು ಚಂದ್ರಶೇಖರನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ಸಂಬಂಧ ಯಾದಗಿರಿ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

Follow Us:
Download App:
  • android
  • ios