Asianet Suvarna News Asianet Suvarna News

ಶಿಕ್ಷಕರ ನೇಮಕಾತಿ ಅಕ್ರಮ ಆರೋಪ; ಶಿಕ್ಷಣ ಸಚಿವರ ತವರು ಜಿಲ್ಲೆಯ 10 ಶಿಕ್ಷಕರು ಸಿಐಡಿ ವಶಕ್ಕೆ

  • 2014-15ನೇ ಸಾಲಿನ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ; ಶಿಕ್ಷಣ ಸಚಿವರ ತವರು ಜಿಲ್ಲೆಯ 10 ಶಿಕ್ಷಕರು ಸಿಐಡಿ ವಶಕ್ಕೆ
  • ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದ ಸಿಐಡಿ ಅಧಿಕಾರಿಗಳು

 

Alleged illegal recruitment of teachers Case 10 teachers from tumakuru under CID custody rav
Author
First Published Sep 7, 2022, 10:32 AM IST

ತುಮಕೂರು (ಸೆ.7) : 2014-15 ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದು, ಶಿಕ್ಷಣ ಸಚಿವ‌ರ ತವರು ಜಿಲ್ಲೆಯಲ್ಲೇ 10 ಶಿಕ್ಷಕರನ್ನು ಸಿಐಡಿ ವಶಕ್ಕೆ ಪಡೆದಿದೆ.

ತಿಂಗಳಲ್ಲಿ 15,000 ಶಿಕ್ಷಕರ ಆಯ್ಕೆ ಪಟ್ಟಿ: ಸಚಿವ ನಾಗೇಶ್‌

ಅಕ್ರಮ ನೇಮಕಾತಿ ಪ್ರಕರಣದ ಬೆನ್ನು ಹತ್ತಿರುವ ಸಿಐಡಿ ಅಧಿಕಾರಿಗಳು ಶಿಕ್ಷಣ ಸಚಿವ ಬಿಸಿ ನಾಗೇಶ್ ತವರು ಜಿಲ್ಲೆ ತುಮಕೂರಿನಲ್ಲಿ 10 ಶಿಕ್ಷಕರು ವಶಕ್ಕೆ ಪಡೆದಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ, ಕಮ್ಲಾಪುರದ ಶಾಲೆಯ ಶಿಕ್ಷಕ, ಕುಣಿಗಲ್ ತಾಲ್ಲೂಕಿನ ಕೊಡವತ್ತಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ, ನಾಗಸಂದ್ರ ಪ್ರೌಢ ಶಾಲೆಯ ಶಿಕ್ಷಕಿ, ಅಮೃತೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ, ಹೊಳಗೇರಿಪುರ ಶಾಲೆಯ ಶಿಕ್ಷಕ ಹಾಗೂ ತಿಪಟೂರು ತಾಲೂಕಿನ ಅಲ್ಬೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ. ತುರುವೇಕೆರೆ ತಾಲೂಕಿನ ಹುಲಿಕಲ್ ಸರಕಾರಿ ಪ್ರೌಢಶಾಲೆಯ ಶಿಕ್ಷಕ, ಹುಲಿಕೆರೆ ಶಾಲೆಯ ಶಿಕ್ಷಕ,  ಗುಬ್ಬಿ ತಾಲೂಕಿನ ಕೆ.ಮತ್ತಿಘಟ್ಟ ಶಾಲೆಯ ಶಿಕ್ಷಕ ಸೇರಿದಂತೆ ತಲಾ 10 ಶಾಲೆಗಳಿಂದ ಓರ್ವ ಶಿಕ್ಷಕರನ್ನ ವಶಕ್ಕೆ ಪಡೆದಿದೆ.

Teachers Recruitment: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ: 54,342 ಮಂದಿ ಪಾಸ್‌

ಇತ್ತೀಚೆಗೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯವರು ಅಕ್ರಮ ಶಿಕ್ಷಕರ ನೇಮಕಾತಿ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೆಲ‌ ದಿನಗಳ‌ ಹಿಂದೆ ಈ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಇದೀಗ ತುಮಕೂರು ಜಿಲ್ಲೆಯ ಹತ್ತು ಶಿಕ್ಷಕರನ್ನು ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ. 

Follow Us:
Download App:
  • android
  • ios