ಕೋಪದ ಕೈಗೆ ಬುದ್ಧಿಕೊಟ್ಟ ಗಂಡ: 8 ತಿಂಗಳ ಗರ್ಭಿಣಿ ಹೆಂಡ್ತಿನ ಕೊಂದೇ ಬಿಟ್ಟ

Synopsis
ವಿಶಾಖಪಟ್ಟಣದಲ್ಲಿ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಗಂಡ ಹೆಂಡತಿ ನಡುವಿನ ಸಣ್ಣ ವಾಗ್ವಾದವೊಂದು ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನ ಕೈಗೆ ಬುದ್ದಿಕೊಟ್ಟ ಗಂಡ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದಿದ್ದಾನೆ.
ವಿಶಾಖಪಟ್ಟಣ: ಕೆಲವೊಮ್ಮ ಕೋಪ ಎಂತಹ ದೊಡ್ಡ ಅನಾಹುತವನ್ನು ತಂದಿಡುತ್ತದೆ ಎಂದು ಊಹಿಸಲೂ ಕೂಡ ಆಗದು. ಅದೇ ರೀತಿ ಇಲ್ಲೊಂದು ಕಡೆ ಗಂಡ ಹೆಂಡ್ತಿ ನಡುವಿನ ಕದನ ಕೊಲೆಯಲ್ಲಿ ಅಂತ್ಯವಾಗಿದೆ. ಇನ್ನೇನು ಒಂದು ತಿಂಗಳು ಕಳೆದರೆ ಅವರ ಪ್ರೀತಿಯ ಸಂಕೇತವಾಗಿ ಮುದ್ದು ಮಗುವೊಂದು ಮಡಿಲಲ್ಲಿರುತ್ತಿತ್ತು. ಆದರೆ ಗಂಡ ಹೆಂಡತಿ ನಡುವಿನ ಸಣ್ಣ ವಾಗ್ವಾದವೊಂದು ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನ ಕೈಗೆ ಬುದ್ದಿಕೊಟ್ಟ ಗಂಡ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದೇ ಬಿಟ್ಟಿದ್ದಾನೆ. ಇದರಿಂದ ಜಗತ್ತು ನೋಡದ ಕಂದನೂ ತಾಯಿ ಹೊಟ್ಟೆಯಲ್ಲೇ ಸಾವನ್ನಪ್ಪಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಈ ದುರಂತ ನಡೆದಿದೆ.
8 ತಿಂಗಳ ಗರ್ಭಿಣಿ ಅನುಷಾ ಹಾಗೂ ಪತಿ ಜ್ಞಾನೇಶ್ವರ್ ಮಧ್ಯೆ ನಿನ್ನೆ ಮುಂಜಾನೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ತಾಳ್ಮೆ ಕಳೆದುಕೊಂಡ ಗಂಡ ಹೆಂಡ್ತಿ ಗರ್ಭಿಣಿ ಎಂಬುದನ್ನೂ ಮರೆತು ಕತ್ತು ಹಿಸುಕಿದ್ದಾನೆ. ಇದರಿಂದ ಕೂಡಲೇ ಆಕೆ ಪ್ರಜ್ಞೆ ಕಳೆದುಕೊಂಡು ಕೆಳಗೆ ಬಿದ್ದಿದ್ದಾಳೆ. ಕೂಡಲೇ ಭಯಬೀತನಾದ ಆತ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಆದರೆ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ನಂತರ ಆರೋಪಿ ಗಂಡ ಸೀದಾ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ಒಂದು ಕ್ಷಣದ ಸಿಟ್ಟಿಗೆ ಆತ ದೊಡ್ಡ ಬೆಲೆಯನ್ನೇ ತೆರಬೇಕಾಗಿ ಬಂದಿದೆ.
ಪತ್ನಿ ವಿರುದ್ಧ ದೂರು ನೀಡಿದ ಪತಿ: ಮಸೀದಿ ಮುಂದೆಯೇ ಯುವಕರ ಗುಂಪಿನಿಂದ ಮಹಿಳೆ ಮೇಲೆ ಹಲ್ಲೆ
ವಿಶಾಖಪಟ್ಟಣಂನ ಪಿಎಂ ಪಾಲೇಂ ಬಳಿ ಉಡ ಕಾಲೋನಿಯಲ್ಲಿ ಈ ಅವಘಡ ಸಂಭವಿಸಿದೆ. ಪತ್ನಿ ಕೊಲೆ ಮಾಡಿರುವ ಜ್ಞಾನೇಶ್ವರ್, ನಗರದ ಸಾಗರನಗರ ವೀವ್ ಪಾಯಿಂಟ್ ಬಳಿ ಪಾಸ್ಟ್ ಫುಡ್ ಶಾಪ್ ನಡೆಸುತ್ತಿದ್ದ. ದುರಂತ ಎಂದರೆ ಈ ಜೋಡಿ ಕೇವಲ ಮೂರು ವರ್ಷಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದರು. ಆದರೆ ಹಲವಾರು ವಿಷಯಗಳಲ್ಲಿ ತಮ್ಮ ನಡುವೆ ಭಿನ್ನಭಿಪ್ರಾಯಗಳು ಬರುತ್ತಿದ್ದುದ್ದರಿಂದ ಜಗಳವಾಡಿಕೊಂಡು ಸಮಾಧಾನಿಸಿಕೊಂಡು ಬದುಕುತ್ತಿದ್ದರು. ಆದರೆ ಈ ಬಾರಿಯ ಕಿತ್ತಾಟ ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮದ್ವೆಗೆ ನಿರಾಕರಣೆ: ಬಾಯ್‌ಫ್ರೆಂಡ್‌ಗೆ 13 ಕಡೆ ಫ್ರಾಕ್ಚರ್ 17 ದಿನ ಆಸ್ಪತ್ರೆ ವಾಸ
ದೇವರಿಗೆ ಮೇಕೆ ಬಲಿ ನೀಡಲು ಹೋಗುತ್ತಿದ್ದಾಗ ವಿಚಿತ್ರ ಘಟನೆ
ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮೇಕೆಯನ್ನು ಬಲಿ ನೀಡಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದು ಮೇಕೆ ಮಾತ್ರ ಬದುಕುಳಿದಿದೆ. ಮಧ್ಯಪ್ರದೇಶದ ಜಬಲ್ಪುರದ ಚಾರ್ಗವಾನ್ ಪ್ರದೇಶದಲ್ಲಿ ಗುರುವಾರ ಆರು ಜನರನ್ನು ಹೊತ್ತೊಯ್ಯುತ್ತಿದ್ದ ಸ್ಕಾರ್ಪಿಯೋ ವಾಹನವೊಂದು ಸೇತುವೆಯಿಂದ ಉರುಳಿದ್ದು, ಸಮೀಪದ ಸೋಮಾವತಿ ನದಿಗೆ ಬಿದ್ದಿದೆ. ಈ ದುರಂತದಲ್ಲಿ ಸ್ಕಾರ್ಫಿಯೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಗಂಭೀರ ಗಾಯಗಳಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ ವಿಚಿತ್ರ ಎಂದರೆ ಇವರ ಕಾರಿನಲ್ಲಿದ್ದ ಇವರು ದೇಗುಲದಲ್ಲಿ ಬಲಿ ನೀಡುವುದಕ್ಕಾಗಿ ತೆಗೆದುಕೊಂಡು ಹೋಗುತ್ತಿದ್ದ ಮೇಕೆ ಮಾತ್ರ ಯಾವುದೇ ಗಾಯಗಳಿಲ್ಲದೇ ಪವಾಡ ಸದೃಶವಾಗಿ ಪಾರಾಗಿದ್ದು, ಅಲ್ಲಿನ ಸ್ಥಳೀಯರನ್ನು ಅಚ್ಚರಿಗೊಳ್ಳುವಂತೆ ಮಾಡಿದೆ.
ಈ ದುರಂತದಲ್ಲಿ ಮೃತರಾದವರು ನರಸಿಂಗ್‌ಪುರ ಜಿಲ್ಲೆಯ ದುಲ್ಹಾ ದೇವ್ ಮಹಾರಾಜ್ ದೇವಸ್ಥಾನದಲ್ಲಿ ಸಾಂಕೇತಿಕ ಮೇಕೆ ಬಲಿ ನೀಡಿ ವಾಪಸಾಗುತ್ತಿದ್ದರು. ಅಂದರೆ ಸಂಪೂರ್ಣವಾಗಿ ಮೇಕೆಯ ಬಲಿ ನೀಡುವ ಬದಲು ಅದರ ಕಿವಿಯನ್ನು ಕತ್ತರಿಸಿ ದೇವರಿಗೆ ಸಾಂಕೇತಿಕ ಬಲಿ ನೀಡಿದ್ದರು. ಇದಾದ ನಂತರ ತಮ್ಮ ಸ್ಕಾರ್ಫಿಯೋ ಗಾಡಿಯಲ್ಲಿ ಗೋಟೆಗಾಂವ್‌ನಿಂದ ವಾಪಸ್ ಜಬಲ್‌ಪುರಕ್ಕೆ ಮರಳುತ್ತಿದ್ದಾಗ ಚಾರ್ಗವಾನ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.