Bengaluru ಅಂಜನಾನಗರದಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವಿವಾಹಿತೆ ತನುಜಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ಜೂ.23): ಅನುಮಾನಾಸ್ಪದ ರೀತಿಯಲ್ಲಿ ವಿವಾಹಿತೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ನಗರದ ಅಂಜನಾನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ತನುಜಾ ಎಂದು ಗುರುತಿಸಲಾಗಿದೆ. ಮಾಗಡಿ ಮುಖ್ಯರಸ್ತೆಯ ಅಂಜನಾನಗರ ಸಮೀಪದ ನಿವಾಸದಲ್ಲಿ ಇಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೇಲ್ನೋಟಕ್ಕೆ ತನುಜಾ ಅವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ತನುಜಾ ಅವರು ನಾಲ್ಕು ವರ್ಷಗಳ ಹಿಂದೆ ನವೀನ್ ಎಂಬಾತನನ್ನು ವಿವಾಹವಾಗಿದ್ದರು. ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಮಗು ಇದ್ದು, ತನುಜಾ ಅವರು ಸದ್ಯ ಮೂರು ತಿಂಗಳ ಗರ್ಭಿಣಿಯಾಗಿದ್ದರು ಎನ್ನಲಾಗಿದೆ.

ವಿವಿಧ ಆಯಾಮಗಳಲ್ಲಿ ತನಿಖೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಹಿಂದೆ ಯಾವುದೇ ಅನುಮಾನಾಸ್ಪದ ಕಾರಣಗಳಿವೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.