ಚಾಮುಂಡೇಶ್ವರಿ ನಗರದ ನಿವಾಸಿ ಸೌಭಾಗ್ಯ ನವ್ಯಶ್ರೀ ಅಲಿ ಯಾಸ್ ಐಶ್ವರ್ಯಾಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವವರ ವಿರುದ್ದ ರಿಯಲ್‌ಎಸ್ಟೇಟ್ ಹಾಗೂ ಚೀಟಿ ವ್ಯವಹಾರ ಮೋಸದ ಎಫ್‌ಐ ಆರ್ ದಾಖಲಾಗಿದೆ. 

ಮಂಡ್ಯ(ಜ.22): ಹಣ, ಚಿನ್ನಾಭರಣ ಪಡೆದು ವಂಚನೆ ಆರೋಪದ ಮೇಲೆ ಐಶ್ವರ್ಯ ಗೌಡ ವಿರುದ್ಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. 

ಚಾಮುಂಡೇಶ್ವರಿ ನಗರದ ನಿವಾಸಿ ಸೌಭಾಗ್ಯ ನವ್ಯಶ್ರೀ ಅಲಿ ಯಾಸ್ ಐಶ್ವರ್ಯಾಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವವರ ವಿರುದ್ದ ರಿಯಲ್‌ಎಸ್ಟೇಟ್ ಹಾಗೂ ಚೀಟಿ ವ್ಯವಹಾರ ಮೋಸದ ಎಫ್‌ಐ ಆರ್ ದಾಖಲಾಗಿದೆ. 

ವಂಚನೆ ಪ್ರಕರಣ: ಐಶ್ವರ್ಯ ಗೌಡ ನನಗೆ ಕಾರು ಕೊಡಿಸಿಲ್ಲ, ವಿನಯ್ ಕುಲಕರ್ಣಿ

2017ರ ಜನ ವರಿಯಿಂದ ಜೂನ್‌ರ ಅವಧಿಯಲ್ಲಿ ₹33 ಲಕ್ಷ ಹಣ ಹಾಗೂ 366 ಗ್ರಾಂ ಚಿನ್ನದ ಒಡವೆಗಳನ್ನು ಪಡೆದು ವಂಚಿಸಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತ ಗಂಡನ ನಿವೃತ್ತಿ ಹಣ, ಉಳಿತಾಯದ ಹಣವ ನೀಡಿದ್ದೆ. ಒಂದು ಲಕ್ಷಕ್ಕೆ ಶೇ.10 ಬಡ್ಡಿ ಹಣ ನೀಡುವುದಾಗಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ವಂಚನೆ ಕೇಸ್‌ ಆರೋಪಿ ಐಶ್ವರ್ಯ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ, ಬೆದರಿಕೆ ಹಾಕಿರುವ ಆರೋಪದಡಿ ದಾಖಲಾಗಿರುವ ಎಫ್‌ಐಆರ್ ಸಂಬಂಧ ಆರೋಪಿಗಳಾದ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಕೆ.ಎನ್.ಹರೀಶ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ರಾಜೇಶ್ವರಿನಗರ ಪೊಲೀಸರಿಗೆ ಜ.9 ರಂದು ಹೈಕೋರ್ಟ್ ಸೂಚಿಸಿತ್ತು. 

ಡಿ.ಕೆ.ಶಿವಕುಮಾರ್‌ ತಂಗಿ ಹೆಸರನಲ್ಲಿಯೂ ಐಶ್ವರ್ಯ ಭಾರೀ ವಂಚನೆ

ಪ್ರಕರಣ ಸಂಬಂಧ ತಮ್ಮ ವಿರುದ್ಧ ರಾಜ ರಾಜೇಶ್ವರಿ ಠಾಣೆಯಲ್ಲಿ ಎರಡನೇ ದಾಖಲಾ ಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಕೆ.ಎನ್.ಹರೀಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಆರ್.ಕೃಷ್ಣಮೂರ್ತಿ ಅವರ ಪೀಠ ಈ ಆದೇಶ ಮಾಡಿದೆ. ಕೆಲ ಕಾಲ ಅರ್ಜಿದಾರರ ಪರ ವಾದ ಆಲಿ ಸಿದ ನ್ಯಾಯಪೀಠ, ಅರ್ಜಿಯ ಮುಂದಿನ ವಿಚಾರಣೆ ವರೆಗೂ ಪೊಲೀಸರು ಅರ್ಜಿದಾ ರರ ಪರ ಯಾವುದೇ ಬಲವಂತದ ಕ್ರಮ ಕೈ ಗೊಳ್ಳಬಾರದು ಎಂದು ಸೂಚಿಸಿದೆ. ಅಲ್ಲದೆ, ಪ್ರತಿವಾದಿಗಳಾಗಿ ರುವ ಆರ್.ಆರ್.ನಗರ ಠಾಣೆಯ ಪೊಲೀಸರು ಮತ್ತು ದೂರುದಾರೆ ಡಾ| ಮಂಜುಳಾ ಎ.ಪಾಟೀಲ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತ್ತು. 

ಡಾ| ಮಂಜುಳಾ ಎ.ಪಾಟೀಲ್ ಅವರು ದೂರು ನೀಡಿ, ಗೋಲ್ಡ್ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡಿದರೆ ಒಳ್ಳೆಯ ಲಾಭ ಬರಲಿದೆ ಎಂದು ತಿಳಿಸಿ 2022ರ ಮಾರ್ಚ್ ನಿಂದ 2024ರ ಡಿಸೆಂಬರ್ ವರೆಗೆ ವಿವಿಧ ಹಂತಗಳಲ್ಲಿ ನನ್ನಿಂದ ₹2.52 2.2.350 ಗ್ರಾಂ ಚಿನ್ನಾಭರಣ ಪಡೆದ ಐಶ್ವರ್ಯಾ ಗೌಡ ಮತ್ತು ಆಕೆ ಪತಿ ಹರೀಶ್ ನಂತರ ವಾಪಾಸ್ ಹಣ ಹಾಗೂ ಚಿನ್ನ ಹಿಂದಿರು ಗಿಸದೆ ವಂಚಿಸಿದ್ದಾರೆ ಎಂದಿದ್ದರು.