ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ದರ್ಶನ್ ಅಭಿಮಾನಿ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿತ್ತು. ಒಟ್ಟಾರೆ, ಈ ಕೇಸಿನಲ್ಲಿ ಈಗಾಗಲೇ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆದರಿಕೆ ಹಾಕಿದ ಪ್ರಕರಣದಲ್ಲಿ ವಿಜಯಪುರ ಮೂಲದ ಸಂತೋಷ್ ಎಂಬ ದರ್ಶನ್ ಅಭಿಮಾನಿಯನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಗಾರೆ ಕೆಲಸ ಮಾಡಿಕೊಂಡಿರುವ ಬಂಧಿತ ಆರೋಪಿ ಸಂತೋಷ್, 'ನಮ್ ಬಾಸ್ ತಂಟೆಗೆ ಬರಬೇಡ..' ಎಂದು ಕೆಟ್ಟ ಪದಗಳೊಂದಿಗೆ ರಮ್ಯಾ ಅವರಿಗೆ ಸಂದೇಶ ಕಳುಹಿಸಿದ್ದ ಆರೋಪಕ್ಕೆ ಒಳಗಾಗಿದ್ದಾನೆ. ಪ್ರಕರಣದ ಹಿನ್ನೆಲೆಯಲ್ಲಿ, ನಟಿ ರಮ್ಯಾ ಅವರು ಸೋಷಿಯಲ್ ಮೀಡಿಯಾದಲ್ಲಿ ತಮಗೆ ಬಂದ ಕಿರುಕುಳದ ಸಂದೇಶಗಳ ಬಗ್ಗೆ ದೂರು ದಾಖಲಿಸಿದ್ದರು. ಸಿಸಿಬಿ ಸೈಬರ್ ಕ್ರೈಂ ವಿಭಾಗವು ತಾಂತ್ರಿಕ ತನಿಖೆ ನಡೆಸಿ, ಐಪಿ ಅಡ್ರೆಸ್ ಮೂಲಕ ಆರೋಪಿಯನ್ನು ಪತ್ತೆಹಚ್ಚಿತು. ಸಂತೋಷ್ ಎಂಬುವವನು ದರ್ಶನ್ ಅವರ ಅಭಿಮಾನಿಯಾಗಿದ್ದು, ನಟಿಯ ವಿರುದ್ಧ ಆಕ್ರೋಶದಿಂದ ಸಂದೇಶ ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.
