ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ; ಪ್ಲಾಸ್ಟಿಕ್ ಗೋಡೌನ್ ಹೊತ್ತಿಕೊಂಡ ಬೆಂಕಿ!

 ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಗರದ ನಾಯಂಡಹಳ್ಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿದೆ.

Another fire accident in Bangalore: Plastic godown caught fire at Bengaluru rav

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಗರದ ನಾಯಂಡಹಳ್ಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿದೆ.

ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಕೆನ್ನಾಲಿಗೆ ವ್ಯಾಪಿಸಿ ಗೋಡೌನ್ ಪಕ್ಕ ಇರಿಸಿದ್ದ ಮೂವತ್ತಕ್ಕೂ ಹೆಚ್ಚು ಆಟೋಗಳು, ಸರಕುಗಳನ್ನು ಸಾಗಿಸುವ ವಾಹನಗಳು ಸುಟ್ಟು ಹೋಗಿದೆ. ಸುದ್ದಿ ತಿಳಿದು ಕೂಡಲೇ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾದರು.

ಚಿಕ್ಕಮಗಳೂರು: ಬೆಂಕಿ ಕಿಡಿಗೆ ಹೊತ್ತಿ ಉರಿದ ಕಾಫಿ ತೋಟ, ಲಕ್ಷಾಂತರ ರೂ. ಮೌಲ್ಯದ ಮೆಣಸು, ಅಡಿಕೆ, ಬಾಳೆ ಭಸ್ಮ..!

ರಿಜ್ವಾನ್ ಎಂಬುವವರ ಮಾಲೀಕತ್ವದ ಗೋಡೌನ್‌ನ ಒಂದು ಭಾಗದ ಖಾಲಿ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇದರಿಂದಾಗಿ ವಾಹನಗಳು ಸುಟ್ಟು ಹೋಗಿವೆ. ಅಕ್ಕಪಕ್ಕದಲ್ಲೂ ಹತ್ತಾರು ಪ್ಲಾಸ್ಟಿಕ್ ಗೋಡೌನ್ ಇದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ವೇಗದ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ

ಕೊಡಗು: ಸಂಪರ್ಕವಿಲ್ಲದಿದ್ದರೂ ಬಂತು ಸಾವಿರಾರು ರೂ. ವಿದ್ಯುತ್ ಬಿಲ್‌, ಬೆಳಕು ಯೋಜನೆ ಅಡಿಯಲ್ಲಿ ದೋಖಾ..!

Latest Videos
Follow Us:
Download App:
  • android
  • ios