ದರ್ಶನ್ ಬೇಲ್ ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ: ಸರ್ಕಾರದಿಂದ ಕೋರ್ಟ್‌ಗೆ ಅರ್ಜಿ
ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುದೀರ್ಘ ವಿಚಾರಣೆ ನಡೆಸಿ ಜೈಲಿಗಟ್ಟಿದ್ದ ಪೊಲೀಸರು,
ಬೆಂಗಳೂರು(ಜ.07): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಆರೋಪಿಗಳಿಗೆ ಜಾಮೀನು ರದ್ದು ಭೀತಿ ಎದುರಾಗಿದೆ.
ರಾಜ್ಯ ಸರ್ಕಾರದ ಪರವಾಗಿ ನೇಮಕಗೊಂಡಿರುವ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಅನಿಲ್ ಸಿ.ನಿಶಾನಿ ಮತ್ತು ಸಿದ್ದಾರ್ಥ್ ಲೂತ್ರಾ ಅವರು ಈ ಏಳು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂ ಪೂರಕ 7 ಆರೋಪಿಗಳಿಗೆ ಜಾಮೀನು ರದ್ದು ಆತಂಕ ದಾಖಲೆಗಳೊಂದಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಫೋಟೋ ಗುಟ್ಟೇನು? ಕನ್ನಡದ ಈ ಸ್ಟಾರ್ ನಟರು ಯಾಕೆ ಈಗ ವೈರಲ್ ಆಗ್ತಿದಾರೆ?
ಏಕೆ ಆರೋಪಿಗಳ ಜಾಮೀನು ರದ್ದು ಮಾಡಬೇಕು ಎಂಬುದಕ್ಕೆ ಕಾರಣ ಸಹಿತ ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶ ರದ್ದುಗೊಳಿಸಿದರೆ, ಆರೋಪಿಗಳು ಮತ್ತೆ ಜೈಲು ಸೇರಬೇಕಾಗುತ್ತದೆ. ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್.ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್ ಮತ್ತು ಪ್ರದೇಷ್‌ಗೆ ಹೈಕೋರ್ಟ್ ಡಿ.13ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ಬಿಡುಗಡೆಯಾಗಿ ನಿಟ್ಟುಸಿರು ಬಿಟ್ಟಿದ್ದ ಆರೋಪಿಗಳಿಗೆ ಇದೀಗ ಹೈಕೋರ್ಟ್ ಜಾಮೀನು ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದರಿಂದ ಆತಂಕ ಎದುರಾಗಿದೆ.
ಸಂಕ್ರಾಂತಿಗೆ ದರ್ಶನ್‌ಗೆ ಸರ್ಜರಿ, ಸುಬ್ಬ-ಸುಬ್ಬಿ ನ್ಯೂ ಚಾಪ್ಟರ್ ಓಪನ್: ಮಾರ್ಚ್ನಿಂದ ಡೆವಿಲ್ ಶೂಟಿಂಗ್
ಪ್ರಕರಣದ ಹಿನ್ನೆಲೆ:
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಜೂ.8ರ ರಾತ್ರಿ ಪಟ್ಟಣಗೆರೆಯ ಶೆಡ್‌ವೊಂದರಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಜೂನ್.9ರಂದು ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಸುದೀರ್ಘ ವಿಚಾರಣೆ ನಡೆಸಿ ಜೈಲಿಗಟ್ಟಿದ್ದರು.