Asianet Suvarna News Asianet Suvarna News

ಚಿಕ್ಕಮಗಳೂರು: ಹುಲಿ ಉಗುರು ಧರಿಸಿದ್ದ ಇಬ್ಬರು ಅರ್ಚಕರ ಬಂಧನ

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಅವರನ್ನ ಬಂಧಿಸಲಾಗಿದೆ. 

Arrest of Two Priests who were Wearing Tiger Claws in Chikkamagaluru grg
Author
First Published Oct 26, 2023, 10:36 AM IST

ಚಿಕ್ಕಮಗಳೂರು(ಅ.26): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಲಿ ಉಗುರು ಕಾರ್ಯಾಚರಣೆ ಮುಂದುವರಿದಿದೆ. ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನ ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಅವರನ್ನ ಬಂಧಿಸಲಾಗಿದೆ. ಬಂಧಿತರಿಂದ ಮೂರು ಹುಲಿ ಉಗುರುಗಳನ್ನ ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನ ಬಂಧಿಸಿ ಅರಣ್ಯ ಇಲಾಖೆಯ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ. 

News Hour: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್‌ ಹುಲಿ ಉಗುರು!

ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಇಬ್ಬರು ಅರ್ಚಕರನ್ನ ಬಂಧಿಸಿದ್ದಾರೆ. ಬಂಧಿತ ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. 
 

Follow Us:
Download App:
  • android
  • ios