ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51), ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ

ಬೆಳಗಾವಿ (ಮಾ.17): ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ.

Add Asianetnews Kannada as a Preferred SourcegooglePreferred

ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51), ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಿಕಲಿ. ಕರ್ತವ್ಯ ಮುಗಿಸಿ ಯರಗಟ್ಟಿಯಲ್ಲಿರುವ ಮನೆಗೆ ಬರುವಾಗ ನಡೆದಿರುವ ಭೀಕರ ರಸ್ತೆ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲಾಯಿಸಿ ಹಂಪ್ ಜಿಗಿಸಿದ್ದಕ್ಕೆ ನಡೆದಿರು ಅಪಘಾತ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ,ಪ್ಲೈ ಓವರ್‌ನಿಂದ ಬಿದ್ದು ಚಾಲಕ ಸಾವು!

ಎಲ್ಲ ಪೊಲೀಸರು ಬೈಕ್ ಚಾಲನೆ ವೇಳೆ ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಬೆಳಗಾವಿ ಎಸ್ಪಿ ಆದೇಶ ಹೊರಡಿಸಿದ್ದರೂ ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ವಹಿಸಿರುವ ಆರೋಪ ಹಿನ್ನೆಲೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ್‌ರನ್ನು ಅಮಾನತ್ತು ಮಾಡಿ ಬೆಳಗಾವಿ ಎಸ್‌ಪಿ ಡಾ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.