ಕುಡಿದ ಅಮಲಿನಲ್ಲಿ ಪತಿಯಿಂದ ಹಲ್ಲೆ. ಮನನೊಂದು ಇಬ್ಬರ ಮಕ್ಕಳ ಜತೆ ತಾಯಿ ಚೆಕ್‌ ಡ್ಯಾಂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆ ಮಳಲಿ ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗ (ಅ.31) :ಕುಡಿದ ಅಮಲಿನಲ್ಲಿ ಪತಿಯಿಂದ ಹಲ್ಲೆ. ಮನನೊಂದು ಇಬ್ಬರ ಮಕ್ಕಳ ಜತೆ ತಾಯಿ ಚೆಕ್‌ ಡ್ಯಾಂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆ ಮಳಲಿ ಗ್ರಾಮದಲ್ಲಿ ನಡೆದಿದೆ.

ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಜಾನಕಲ್ ಲಂಬಾಣಿ ಹಟ್ಟಿಯ ಅರ್ಪಿತಾ(28), ಮಗಳು ಮಾನಸ(6), ಮಗ ಮದನ್(4) ಮೃತರು. ಪತಿ ಮಂಜುನಾಯ್ಕ್ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ. ದಿನನಿತ್ಯ ಕುಡಿದ ಅಮಲಿನಲ್ಲಿ ಇದೇ ಕಾರಣಕ್ಕೆ ಜಗಳ. ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ. ಪತಿಯ ಹಲ್ಲೆಯಿಂದ ಮನನೊಂದು ಆತ್ಮಹತ್ಯೆಗೆ ಶರಣು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿರುವ ಅರ್ಪಿತಾ.

8ವರ್ಷದ ಹಿಂದೆ ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆ ಆಗಿದ್ದ ಅರ್ಪಿತಾ. ಮೊದಮೊದಲು ಚೆನ್ನಾಗಿಯೇ ಇದ್ದ ಸಂಸಾರ. ಬಳಿಕ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ ಮಂಜುನಾಯ್ಕ್ ಈ ಹಿನ್ನೆಲೆ ಮನೆಯಲ್ಲಿ ವಿನಾಕಾರಣ ಜಗಳ ತೆಗೆಯುತ್ತಿದ್ದ ಕೆಲವೊಮ್ಮೆ ಹಲ್ಲೆಗೆ ಯತ್ನಿಸಿದ್ದ ಎಂದು ಹೇಳಲಾಗಿದೆ.

ಅರ್ಪಿತಾ ಆತ್ಮಹತ್ಯೆಗೆ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಅರ್ಪಿತಾ. ಈ ವೇಳೆ ಹಿಂದೆ ಕಾಣಿಸಿರುವ ಪುತ್ರ. ಚೆಕ್‌ ಡ್ಯಾಂ ಹಾರುವ ವೇಳೆ ಅಪ್ಪ ಎಂದು ಕೂಗಿರುವ ಪುಟ್ಟ ಬಾಲಕ ಮದನ್. ಸದ್ಯ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಯ ಹಿಂದಿನ ಕಾರಣ ಪತ್ತೆ ಹಚ್ಚಲು ತನಿಖೆ ಮುಂದುವರಿಸಿದ್ದಾರೆ.

ನಟ ದಿ.ಪುನೀತ್‌ ಅಭಿಮಾನಿ ನೇಣಿಗೆ ಶರಣು

ಚಿತ್ರನಟ ದಿ.ಪುನೀತ್‌ರಾಜ…ಕುಮಾರ್‌ ಮೊದಲ ವರ್ಷದ ಪುಣ್ಯಸ್ಮರಣೆಯಲ್ಲಿ ಭಾಗವಹಿಸಿದ್ದ ಅಭಿಮಾನಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುನೀತ್‌ ಅಭಿಮಾನಿ ಕಿರಣ್‌(22) ಮೃತ ಯುವಕ. ಶನಿವಾರ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಆಯೋಜಿಸಿದ್ದ ದಿ.ಪುನೀತ್‌ರಾಜ್‌ಕುಮಾರ್‌ ಮೊದಲ ವರ್ಷದ ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಕಿರಣ್‌ ಕಾರ್ಯಕ್ರಮ ಮುಗಿಯುವರೆಗೂ ಅಲ್ಲಿಯೇ ಇದ್ದು,ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದಾನೆ.

ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ, ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಗೆ ಉಳಿದ ಪ್ರಾಣ!

ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ತೆರಳಿದ ಕಿರಣ್‌ ರಾತ್ರಿ 10 ಗಂಟೆ ಹೊತ್ತಿಗೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಕಿರಣ್‌ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆಆರ್‌ಎಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.