Asianet Suvarna News Asianet Suvarna News

PSI Recruitment Scam: ಎಸ್‌ಐ ಪರೀಕ್ಷೆ ಅಕ್ರಮ, ಕಿಂಗ್‌ಪಿನ್‌ ಆರ್‌.ಡಿ.ಪಾಟೀಲ್‌ ಸಹಚರ ಅರೆಸ್ಟ್

ಪೊಲೀಸ್‌ ಇಲಾಖೆಯ 545 ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಹಗರಣದ ಕಿಂಗ್‌ಪಿನ್‌ ಆರ್‌.ಡಿ.ಪಾಟೀಲ್‌ ಸಹಚರ, ಸರ್ಕಾರಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿರುವ ವಿಜಯ ಕುಮಾರ್‌ ಎಂಬಾತನನ್ನು ಶನಿವಾರ ವಶಕ್ಕೆ ಪಡೆದಿದೆ.

assistant professor arrested who providing Bluetooth device to a candidate in  PSI recruitment exam gow
Author
First Published Feb 19, 2023, 4:02 PM IST

ಕಲಬುರಗಿ (ಫೆ.19): ಪೊಲೀಸ್‌ ಇಲಾಖೆಯ 545 ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಹಗರಣದ ಕಿಂಗ್‌ಪಿನ್‌ ಆರ್‌.ಡಿ.ಪಾಟೀಲ್‌ ಸಹಚರ, ಸರ್ಕಾರಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿರುವ ವಿಜಯ ಕುಮಾರ್‌ ಎಂಬಾತನನ್ನು ಶನಿವಾರ ವಶಕ್ಕೆ ಪಡೆದಿದೆ. ಕಲಬುರಗಿ ಸರ್ಕಾರಿ ಪದವಿ ಕಾಲೇಜಿನ ಎಕನಾಮಿಕ್ಸ್ ವಿಭಾಗದ ಅಸಿಸ್ಟಂಟ್‌ ಪ್ರೊಫೆಸರ್‌ ಆಗಿರುವ ವಿಜಯ ಕುಮಾರ್‌ ಹೆಬ್ಬಾಳ್ಕರ್‌, ಆರ್‌.ಡಿ.ಪಾಟೀಲ್‌ ಸೂಚನೆ ಮೇರೆಗೆ ಡೀಲ್‌ ಆದಂತಹ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್‌ ನೆರವು ಪಡೆಯಲು ಸಹಕರಿಸುತ್ತಿದ್ದ ಆರೋಪ ಎದುರಿಸುತ್ತಿದ್ದಾನೆ. ಸಿಐಡಿ ಅಧಿಕಾರಿಗಳ ವಿಚಾರಣೆಯಲ್ಲಿ ಈ ಸಂಗತಿ ಬಹಿರಂಗಗೊಂಡಿದ್ದು, ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮದ್ವೆ ಆಗೋದಾಗಿ ಮೋಸ: ಪಿಎಸ್‌ಐ ವಿರುದ್ಧ ಕೇಸ್‌ ದಾಖಲು
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ನಂತರ ಬೇರೆ ಯುವತಿಯನ್ನು ಮದುವೆಯಾಗಿ ಮೋಸ ಮಾಡಿರುವ ಕುರಿತು ಪಿಎಸ್‌ಐ ಮೇಲೆ ಶುಕ್ರವಾರ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ವೈರ್‌ಲೆಸ್‌ ವಿಭಾಗದಲ್ಲಿ ಸಬ್‌-ಇನ್‌ಸ್ಪೆಕ್ಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಲಾಲಸಾಬ್‌ ನಧಾಪ ಮೇಲೆ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಯುವತಿಯೊಬ್ಬಳು ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದಾಳೆ. ಇದಾದ ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ನಂತರ ದಿನಗಳಲ್ಲಿ ಬೆಂಗಳೂರು, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸುತ್ತಾಡಿದ್ದಾರೆ. ಬಳಿಕ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿಯೂ ಬಳಕೆ ಮಾಡಿಕೊಂಡಿದ್ದಾನೆ. ಇಬ್ಬರ ವಿಷಯ ಕುಟುಂಬಸ್ಥರಿಗೆ ತಿಳಿದಿದ್ದರಿಂದ ಹಿರಿಯರ ಸಮ್ಮುಖದಲ್ಲಿ ಪಿಎಸ್‌ಐ ಲಾಲಸಾಬ ನದಾಫ್‌ ಯುವತಿಯನ್ನು ಮದುವೆಯಾಗುವುದಾಗಿ ಬಾಂಡ್‌ ಮೂಲಕ ಒಪ್ಪಂದ ಪತ್ರಕ್ಕೆ ಸಹಿ ಹಾಕಿದ್ದಾನೆ.

PSI Recruitment Scam: ಪಿಎಸ್‌ಐ ಪರೀಕ್ಷೆ ಅಕ್ರಮಕ್ಕೆ 43 ಸಿಮ್‌ ಖರೀದಿಸಿದ್ದ ಭೂಪ..!

ಆದರೂ ಪಿಎಸ್‌ಐ ಲಾಲಸಾಬ ಪ್ರೀತಿಸಿದ ಯುವತಿಯನ್ನು ಒಪ್ಪಂದದಂತೆ ಮದುವೆಯಾಗದೇ ಕಳೆದ ಕೆಲವು ದಿನಗಳ ಹಿಂದಷ್ಟೇ ಬೇರೆ ಯುವತಿಯನ್ನು ಮದುವೆ ಆಗಿದ್ದಾನೆ. ಇದರಿಂದಾಗಿ ಪಿಎಸ್‌ಐನ ಕಾಮಕ್ಕೆ ಬಲಿಯಾದ ಯುವತಿ ನಗರದ ಮಹಿಳಾ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಕುರಿತು ಪ್ರಕರಣ ದಾಖಲಿಸಿದ್ದಾಳೆ. ಇತ್ತ ಕಳೆದ ಒಂದು ತಿಂಗಳಕ್ಕೂ ಹೆಚ್ಚು ಕಾಲದಿಂದ ಆತ ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ತಿಳಿದು ಬಂದಿದೆ.

 

ಪಿಎಸ್‌ಐ ಅಕ್ರಮ ಆರೋಪಿಗಳಿಗೆ ಇನ್ನೆಂದೂ ಪೊಲೀಸ್‌ ಕೆಲಸ ಸಿಗಲ್ಲ!

ಅಲ್ಲದೇ ಕೆಲವು ದಿನಗಳ ಹಿಂದೆ ಈ ಕುರಿತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರಿಗೆ ಈತನ ಕೃತ್ಯದ ಕುರಿತು ದೂರು ಸಲ್ಲಿಸಿದ್ದರೂ, ಅಂದಿನ ಡಿಸಿಪಿ ಕಾಲಹರಣ ಮಾಡಿದ್ದಾರೆ ಎಂದು ಮೊಸಕ್ಕೊಳಗಾದ ಯುವತಿ ಅಸಮಾಧಾನ ವ್ಯಕ್ತಪಡಿಸಿದ್ದಾಳೆ.

Follow Us:
Download App:
  • android
  • ios