*  ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನಲ್ಲಿ ನಡೆದ ಘಟನೆ*  ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ *  ನಿಂಗಪ್ಪ ಎಸಗಿದ ಕೃತ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ 

ಹಾವೇರಿ(ಜೂ.07): ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ‌ವೊಂದು ಕೇಳಿ ಬಂದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು(ಮಂಗಳವಾರ) ನಡೆದಿದೆ.

ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 

ಒಂದೇ ತಿಂಗಳಲ್ಲಿ ಆರು ಬಾರಿ ಅಪ್ರಾಪ್ತೆಯ ರೇಪ್, ಗೆಳತಿಯರಿಂದಲೇ ಷಡ್ಯಂತ್ರ!

ಒಂದೂವರೆ ವರ್ಷಗಳಿಂದ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ನಿಂಗಪ್ಪ ಕಲಕೋಟಿ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ. 

ಆರೋಪಿ ನಿಂಗಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಂಗಪ್ಪ ಎಸಗಿದ ಕೃತ್ಯದಿಂದ ಕಾಲೇಜು ವಿದ್ಯಾರ್ಥಿನಿ ಇದೀಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. 
ಸದ್ಯ ಸಂತ್ರಸ್ತ ವಿದ್ಯಾರ್ಥಿನಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ನೊಂದ ವಿದ್ಯಾರ್ಥಿನಿ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.