ಮಹಿಳೆ ಸೇರಿ ಮೂವರು ಕಂಠಮಟ ಮದ್ಯ ಸೇವಿಸಿದ್ದರು. ಕುಡಿದ ಮತ್ತಿನಲ್ಲಿ ಹುಸೇನ್, ಗಫರ್ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ. ಇದರಿಂದ ಕೋಪಗೊಂಡ ಗಫಾರ್ ಬಿಯರ್ ಬಾಟಲ್ ಹಾಗೂ ಕಲ್ಲುಗಳಿಂದ ಹುಸೇನ್ ಮೇಲೆ ಹಲ್ಲೆ ನಡೆಸಿದ್ದಾನೆ.
ಬೆಂಗಳೂರು(ಜು.17): ಮದ್ಯದ ಅಮಲಿನಲ್ಲಿ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಂಬಂಧಿಕನಿಗೆ ಬಿಯರ್ ಬಾಟಲಿ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಹುಸೇನ್ ಹಲ್ಲೆಯಿಂದ ಗಾಯಗೊಂಡವ. ಹಲ್ಲೆ ನಡೆಸಿದ ಗಫಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ತಡರಾತ್ರಿ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ತಿಮ್ಮಯ್ಯ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಗಾಯಾಳು ಹುಸೇನ್ ಮತ್ತು ಆರೋಪಿ ಗಫಾರ್ ಸಂಬಂಧಿಕರು. ಹಿಂದೂಪುರದಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಭಿಕ್ಷೆ ಬೇಡುತ್ತಿದ್ದರು.
ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ
ಶನಿವಾರ ಮಹಿಳೆ ಸೇರಿ ಮೂವರು ಕಂಠಮಟ ಮದ್ಯ ಸೇವಿಸಿದ್ದರು. ಕುಡಿದ ಮತ್ತಿನಲ್ಲಿ ಹುಸೇನ್, ಗಫರ್ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ. ಇದರಿಂದ ಕೋಪಗೊಂಡ ಗಫಾರ್ ಬಿಯರ್ ಬಾಟಲ್ ಹಾಗೂ ಕಲ್ಲುಗಳಿಂದ ಹುಸೇನ್ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಪೆಟ್ಟು ಬಿದ್ದ ರಕ್ತಸ್ರಾವವಾಗಿ ಕುಸಿದು ಬಿದ್ದ ಹುಸೇನ್‌ನನ್ನು ಪೊಲೀಸರು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಹುಸೇನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
