ಹುಲಿ ಉಗುರು ಮತ್ತು ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಮಡಿಕೇರಿ ಅರಣ್ಯ ಸಂಚಾರಿ ದಳ ಪತ್ತೆ ಹಚ್ಚಿದ್ದು, ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಡಿಕೇರಿ (ಮಾ.5) : ಹುಲಿ ಉಗುರು ಮತ್ತು ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಮಡಿಕೇರಿ ಅರಣ್ಯ ಸಂಚಾರಿ ದಳ ಪತ್ತೆ ಹಚ್ಚಿದ್ದು, ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶ್ರೀ ಆಂಜನೇಯ ದೇವಸ್ಥಾನದಿಂದ ದೇಚೂರಿಗೆ ತೆರಳುವ ರಸ್ತೆಯಲ್ಲಿ ಪಿ.ಬಿ. ಸೂರ್ಯ ಪ್ರಕಾಶ್‌(PB Suryaprakash) ಎಂಬಾತ ಹುಲಿಯ 4 ಉಗುರು(tiger claw)ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ಅರಿತ ಮಡಿಕೇರಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿ ಹುಲಿ ಉಗುರು ಸಹಿತ ಆರೋಪಿಯನ್ನು ವಶಕ್ಕೆ ಪಡೆದರು.

ನಗರದ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಬಿ. ವೇಣು(B Venu) ಎಂಬಾತ ಅಳಿವಿನಂಚಿನಲ್ಲಿರುವ ಒಂದು ನಕ್ಷತ್ರ ಆಮೆ(star turtle)ಯನ್ನು ಮಾರಾಟ ಮಾಡಲು ಯತ್ನಿಸಿದ್ದಾನೆ ಎನ್ನುವ ಆರೋಪದಡಿ ದಾಳಿ ನಡೆಸಿದ ಮಡಿಕೇರಿ ಅರಣ್ಯ ಸಂಚಾರಿ ದಳ(Madikeri Forest Traffic Division)ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.

 ಗಿಳಿ, ಆನೆ ದಂತ ಮಾರಾಟಕ್ಕೆ ಯತ್ನ; ಆರು ಮಂದಿ ಬಂಧನ

ಒಂದು ಜೀವಂತ ನಕ್ಷತ್ರ ಆಮೆಯನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತ ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸಿಐಡಿ ಪೊಲೀಸ್‌ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಕೆ.ವಿ. ಶರತ್‌ ಚಂದ್ರ, ಸಿಐಡಿ ಪೊಲೀಸ್‌ ಅರಣ್ಯ ಘಟಕದ ಕೊಡಗು ಪೊಲೀಸ್‌ ಅಧೀಕ್ಷಕ ಕೆ.ಬಿ. ವಿಶ್ವನಾಥ್‌ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು. ಸವಿ, ಸಿಬ್ಬಂದಿ ಶೇಖರ್‌, ರಾಘವೇಂದ್ರ, ಯೋಗೇಶ್‌, ಉಮೇಶ್‌, ಮೋಹನ್‌, ಸ್ವಾಮಿ ಮತ್ತು ಮಂಜುನಾಥ್‌ ಅವರು ಕಾರ್ಯಾಚರಣೆ ನಡೆಸಿದರು.