Asianet Suvarna News Asianet Suvarna News

ಹಾವೇರಿ: ವಿವಾಹಿತ ಮಹಿಳೆ ಮನೆಗೆ ನುಗ್ಗಿ, ಲೈಂಗಿಕ ದೌರ್ಜನ್ಯಕ್ಕೆ ಯತ್ನ, ಕೊಲೆ ಬೆದರಿಕೆ

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಇರ್ಫಾನ್, ಮೈನು ದೌರ್ಜನ್ಯ ಎಸಗಿದ ಆರೋಪಿಗಳು. ಇವರು ಏಕಾಏಕಿ ವಿವಾಹಿತ ಮಹಿಳೆಯ ಮನೆಗೆ ನುಗ್ಗಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದರು. ಈ ವೇಳೆ, ಬಿಡಿಸಲು ಬಂದ ಮಹಿಳೆಯ ಗಂಡ ಹಾಗೂ ಮಗನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. 

Attempted Sexual Harassment on Married Woman in Haveri grg
Author
First Published May 18, 2024, 12:35 PM IST

ಶಿಗ್ಗಾಂವಿ(ಮೇ.18): ವಿವಾಹಿತ ಮಹಿಳೆಯ ಮನೆಗೆ ನುಗ್ಗಿದ ಯುವಕರಿಬ್ಬರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಇರ್ಫಾನ್, ಮೈನು ದೌರ್ಜನ್ಯ ಎಸಗಿದ ಆರೋಪಿಗಳು. ಇವರು ಏಕಾಏಕಿ ವಿವಾಹಿತ ಮಹಿಳೆಯ ಮನೆಗೆ ನುಗ್ಗಿದ್ದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದರು.  ಈ ವೇಳೆ, ಬಿಡಿಸಲು ಬಂದ ಮಹಿಳೆಯ ಗಂಡ ಹಾಗೂ ಮಗನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. 

ಹಾಸನ: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ತಮ್ಮ ಬಳಿ, ಮಹಿಳೆಯ ಫೋಟೊ, ವಿಡಿಯೋಗಳಿದ್ದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಆಕೆಯ ಮಾನ ಕಳೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆಕೆಯ ಪತಿ ತಡಸ ಠಾಣೆಗೆ ದೂರು ನೀಡಿದ್ದಾರೆ.

Latest Videos
Follow Us:
Download App:
  • android
  • ios