ತಹಸೀಲ್ದಾರ್ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ; ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!
ತಿಭಟನೆ ಮಾಡುತ್ತಿದ್ದ ವೇಳೆ ದಲಿತ ಮುಖಂಡನೋರ್ವ ತಹಸೀಲ್ದಾರ್ ಕಚೇರಿ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಹಸೀಲ್ದಾರ್ ಕಚೇರಿ ಎದುರು ನಡೆದಿದೆ. ಅದೃಷ್ಟವಶಾತ್ ಪೊಲೀಸರ ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ.
ಕೋಲಾರ (ಜ.19): ಪ್ರತಿಭಟನೆ ಮಾಡುತ್ತಿದ್ದ ವೇಳೆ ದಲಿತ ಮುಖಂಡನೋರ್ವ ತಹಸೀಲ್ದಾರ್ ಕಚೇರಿ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಹಸೀಲ್ದಾರ್ ಕಚೇರಿ ಎದುರು ನಡೆದಿದೆ. ಅದೃಷ್ಟವಶಾತ್ ಪೊಲೀಸರ ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ.
ದಲಿತರಿಗೆ ಮಂಜೂರಾದ ಭೂಮಿಯಲ್ಲಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಕಳ್ಳತನ ಮಾಡಲಾಗಿದೆ ಎಂಬ ಆರೋಪ. ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಎಚ್. ಬೈಯಪಲ್ಲಿ ಗ್ರಾಮದಲ್ಲಿದ್ದ ಸರ್ವೇ ನಂ.೧೯೧ ರಲ್ಲಿನ ವಿವಾದಿತ ಜಮೀನಿನಲ್ಲಿ ನಿರ್ಮಾಣ ಮಾಡಲಾಗಿದ್ದ ಅಂಬೇಡ್ಕರ್ ಪ್ರತಿಮೆ ಕಳ್ಳತನವಾಗಿದೆ ಎಂದು ಎಸ್ಸಿ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾರ್ಗಿಲ್ ವೆಂಕಟೇಶ್ ಹಾಗೂ ಬೆಂಬಲಿಗರು. ಈ ವೇಳೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಮುಂದಾದ ಪ್ರತಿಭಟನೆಕಾರರು.
ಬ್ಯಾಂಕ್‌ಗೆ ವಂಚನೆ ಪ್ರಕರಣ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ!
ತಕ್ಷಣವೇ ದಾವಿಸಿ ಬಂದ ಪೊಲೀಸರು. ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿಸಿದ ಮುಳಬಾಗಿಲು ಪೊಲೀಸರು. ಬಳಿಕ ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಸುಟ್ಟು ಗಾಯಗೊಂಡಿದ್ದ ವ್ಯಕ್ತಿಯನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.