ಬಳ್ಳಾರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಕಾಳಿಂಗ ಅವರ ಪತ್ನಿ ಚೈತ್ರಾ (36) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚೈತ್ರಾ, ತವರು ಮನೆಯಿಂದ ಎರಡು ದಿನಗಳ ಹಿಂದೆ ಮರಳಿದ್ದರು.

ಬಳ್ಳಾರಿ (ಆ.15): ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಬಳ್ಳಾರಿಯ ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಕಾಳಿಂಗ ಅವರ ಪತ್ನಿ ಚೈತ್ರಾ (36) ಮನೆಯಲ್ಲಿ ನೇಣುಬಿಗಿದು ಸಾವಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಇಂದು ಬೆಳಗ್ಗೆ ಯಾರೂ ಇಲ್ಲದ ವೇಳೆ ದುಡುಕಿನ ನಿರ್ಧಾರ ತೆಗೆದುಕೊಂಡಿರುವ ಚೈತ್ರಾ. ತಮ್ಮ ಪತಿ ಕಾಳಿಂಗ ಹಾಗೂ ಮಕ್ಕಳನ್ನು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕಳುಹಿಸಿದ ಬಳಿಕ, ಮನೆಯಲ್ಲಿ ನೇಣುಬಿಗಿದುಕೊಂಡಿದ್ದಾರೆ. ಈ ಸಾವಿಗೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಚೈತ್ರಾ ಇತ್ತೀಚಿಗೆ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ತವರು ಮನೆಗೆ ಹೋಗಿದ್ದ ಚೈತ್ರಾ ಎರಡು ದಿನಗಳ ಹಿಂದೆಯಷ್ಟೇ ಮರಳಿದ್ದರು ಎನ್ನಲಾಗಿದೆ.

ಆದರೆ ಇಂದು ಸ್ವಾತಂತ್ರ್ಯೋತ್ಸವ ದಿನದಂದೇ ಗಂಡ-ಮಕ್ಕಳನ್ನು ಕಾರ್ಯಕ್ರಮಕ್ಕೆ ಕಳಿಸಿ ಇತ್ತ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ. ಈ ಘಟನೆಯಿಂದ ಮಕ್ಕಳು, ಕುಟುಂಬಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.