ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು; ಹಸುಗೂಸು ಮಗುವಿನೊಂದಿಗೆ ಕುಟುಂಬಸ್ಥರು ಪ್ರತಿಭಟನೆ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮಹಿಳೆ ದುರ್ಮರಣಕ್ಕೀಡಾ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿದ್ದು ನಡೆದಿದ್ದು, ಮೃತಳ ಕುಟುಂಬಸ್ಥರು ವೈಧ್ಯೆ ಡಾ.ಸರೋಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಾಲೂಕು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.

Baranti dies due to doctor negligence shahapur yadgir district farmers protest rav

ಯಾದಗಿರಿ (ಅ.14): ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮಹಿಳೆ ದುರ್ಮರಣಕ್ಕೀಡಾ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿದ್ದು ನಡೆದಿದ್ದು, ಮೃತಳ ಕುಟುಂಬಸ್ಥರು ವೈಧ್ಯೆ ಡಾ.ಸರೋಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಾಲೂಕು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.

ಮೃತ ಬಾಣಂತಿ ಭವಾನಿ ಹಸುಗುಸಿನ ಸಮೇತ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಈ ವೇಳೆ ವಿವಿಧ ರೈತಪರ ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿದರು. ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಮೇಲೆ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಬಂದ್ ಆಗಿದ್ದರಿಂದ ಟ್ರಾಫಿಕ್ ಉಂಟಾಯಿತು. ಕಿಮೀ ಉದ್ದಕ್ಕೆ ವಾಹನಗಳು ಮುಂದೆ ಚಲಿಸಲಾಗದೆ ನಿಂತಲ್ಲೇ ನಿಲ್ಲಬೇಕಾಯಿತು. ಈ ವೇಳೆ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.

ಯಾದಗಿರಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಬಾಲಕನನ್ನೇ ಕೊಂದ ಕಿರಾತಕ!

ಹೆದ್ದಾರಿ ಮೇಲೆ ಪ್ರತಿಭಟನೆ ನಡೆಸಿದ್ದರಿಂದ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಯಿತು. ಕೊನೆಗೂ ಅಧಿಕಾರಿಗಳು ಕ್ರಮ ಜರುಗಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು. ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಆಗಿರುವ ಬಿಲ್ ಸರ್ಕಾರದಿಂದ ಪಾವತಿ ಮಾಡುವ ಭರವಸೆ ನೀಡಿದರು. ಜೊತೆಗೆ ಈ ಪ್ರಕರಣದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಯಾದಗಿರಿ ಡಿಎಚ್‌ಒ ಎಂಎಎಸ್ ಪಾಟೀಲ್ ಲಿಖಿತವಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟ ಕುಟುಂಬಸ್ಥರು ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Videos
Follow Us:
Download App:
  • android
  • ios