ಶ್ರೀ ಕಂಚುಗಲ್ ಬಂಡೇಮಠದ ಬಸವಲಿಂಗ ಸ್ವಾಮೀಜಿ ನೇಣಿಗೆ ಶರಣು

ಸ್ವಾಮೀಜಿಗಳ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸರಣಿ ಇಲ್ಲಿಗೆ ನಿಲ್ಲುವಂತೆ ಕಾಣುತ್ತಿಲ್ಲ. ಕಳೆದ ತಿಂಗಳು ಮನನೊಂದು ಸ್ವಾಮಿಜೀಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರೆಯುವ ಮುನ್ನವೇ ಇದೀಗ ಮತ್ತೊಬ್ಬ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

Basavasiddalinga Swamiji committed suicide by hanging himself

ರಾಮನಗರ (ಅ.24) : ಸ್ವಾಮೀಜಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸರಣಿ ಇಲ್ಲಿಗೆ ನಿಲ್ಲುವಂತೆ ಕಾಣುತ್ತಿಲ್ಲ. ಕಳೆದ ತಿಂಗಳು ಮನನೊಂದು ಸ್ವಾಮಿಜೀಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರೆಯುವ ಮುನ್ನವೇ ಇದೀಗ ಮತ್ತೊಬ್ಬ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದಾರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

ನೇಗಿನಹಾಳ ಸ್ವಾಮೀಜಿಯ ಆತ್ಮಹತ್ಯೆಗೆ ಯಾರು ಹೊಣೆ?: ಬಸವಾನಂದ ಸ್ವಾಮೀಜಿ

ಡೆತ್‌ ನೋಟ್:  ಸಾಯುವ ಮುನ್ನ ಸ್ವಾಮೀಜಿ ಮೂರು ಪುಟಗಳ ಡೆತ್‌ ನೋಟ್ ಬರೆದಿದ್ದು, ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆತಿಳಿದು ಬಂದಿದೆ.   ಮರ್ಯಾದೆಗಂಜಿ ಆತ್ಮಹತ್ಯೆ: ಇತ್ತೀಚೆಗೆ ಇಬ್ಬರು ಸ್ವಾಮೀಜಿಗಳ ಬಗ್ಗೆ ಪ್ರಸ್ತಾಪವಾದ ಆಡಿಯೋ ವೈರಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಸ್ವಾಮೀಜಿಯವರು ಡೆತ್ ನೋಟು ಬರೆದಿಟ್ಟಿರುವುದು, ಮರ್ಯಾದೆಗಂಜಿ ಆತ್ಮಹತ್ಯೆ ಎಂದು ಉಲ್ಲೇಖಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ. 'ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ನನಗೆ ಯಾರ ಸಹಾಯ ಇರಲಿಲ್ಲ.' ಎಂದು ಬರೆದಿರುವ ಸ್ವಾಮೀಜಿ, ಕೆಲವರಿಂದ ಬೆದರಿಕೆ ಬಂದ ಬಗ್ಗೆ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ಮಾಗಡಿ ತಾಲೂಕಿನಲ್ಲಿ  ದೊಡ್ಡ ಮಠ. ಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. ಸುಮಾರು 50 ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಮಠ. 1997 ರಲ್ಲಿ ಮಠಾಧಿಶರಾಗಿ ನೇಮಕರಾಗಿದ್ದ ಬಸವಲಿಂಗ ಸ್ವಾಮೀಜಿ ಅವರ ಮೂಲ ಹೆಸರು ಮೂಲ ಹೆಸರು ಬಸವರಾಜು ಹಲವು ಮಠಗಳ ಉಸ್ತುವಾರಿಯಾಗಿಯೂ ನೋಡಿಕೊಳ್ಳುತ್ತಿದ್ದರು. ಇತ್ತೀಚೆಗೆ ತ್ಯಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸ್ವಾಮೀಜಿಯವರಿಗೆ ಬೆದರಿಕೆ ಬಂದಿರುವ ಸಾಧ್ಯತೆ ಇದೆ. 

ಹಲವು ಮಠಾಧೀಶರು ಭೇಟಿ;

ಇಂದು ಬೆಳಗ್ಗೆ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ  ಹಲವು ಮಠಾಧೀಶರು ಮಠಕ್ಕೆ ಬೇಟಿ ನೀಡಿ, ಅಂತಿಮ ದರ್ಶನ ಪಡೆದಿದ್ದಾರೆ.

Latest Videos
Follow Us:
Download App:
  • android
  • ios