Breaking: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಮತ್ತೆರಡು ಬಲಿ

ಬಿಬಿಎಂಪಿ ಕಸದ ಲಾರಿ  ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವಾಹನ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ನಿನ್ನೆ ಭಾನುವಾರ (ಜು.28) ರಾತ್ರಿ 8.45 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. 

bbmp garbage truck and bike accident two people died at bengaluru gvd

ಬೆಂಗಳೂರು (ಜು.29): ಬಿಬಿಎಂಪಿ ಕಸದ ಲಾರಿ  ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವಾಹನ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ನಿನ್ನೆ ಭಾನುವಾರ (ಜು.28) ರಾತ್ರಿ 8.45 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರನ್ನ ಪ್ರಶಾಂತ್‌ (25), ಬಯ್ಯಣ್ಣ ಗರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯೇ ಆಗಿರುವ ಪ್ರಶಾಂತ್‌, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಮೆಜೆಸ್ಟಿಕ್‌ನಿಂದ ಕೆ.ಆರ್‌ ಸರ್ಕಲ್‌ ಮಾರ್ಗವಾಗಿ ಬೈಕ್‌ನಲ್ಲಿ ಬರುತ್ತಿದ್ದರು. 

ಇದೇ ವೇಳೆ ಸಿಐಡಿ ಸಿಗ್ನಲ್‌ ಮಾರ್ಗದಿಂದ ಕೆ.ಆರ್‌ ವೃತ್ತದ ಮಾರ್ಗವಾಗಿ ಬಿಬಿಎಂಪಿ ಕಸದ ಲಾರಿ ವೇಗವಾಗಿ ಬರುತ್ತಿತ್ತು. ತಿರುವಿನ ಮಾರ್ಗದಲ್ಲೂ ವೇಗವಾಗಿ ಬಂದ ಲಾರಿ ಬೈಕ್‌ಗೆ ಡಿಕ್ಕಿಯೊಡೆದು ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಅಲ್ಲದೇ ಬೈಕ್‌ಗೆ ಡಿಕ್ಕಿ ಹೊಡೆದರೂ ಲಾರಿ ನಿಲ್ಲಿಸದೇ ಸುಮಾರು 10 ಮೀಟರ್‌ನಷ್ಟು ದೂರಕ್ಕೆ ಬೈಕ್‌ ಸವಾರರನ್ನ ಎಳೆದೊಯ್ದಿದೆ. ಇದರಿಂದ ರಕ್ತ ಹೆಚ್ಚಿನ ಪ್ರಮಾಣದಲ್ಲಿ ಹರಿದಿದೆ. ಕೂಡಲೇ ಅಪಘಾತಕ್ಕೀಡಾದವರನ್ನ ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಮೃತದೇಹಗಳನ್ನ ಸೆಂಟ್ ಮಾರ್ಥಸ್ ಶವಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಊಟಕ್ಕೆ ಬಂದಾಗ ಅಪಘಾತ: ಯುವತಿ ಬಯನ್ನ ಗಾರಿ ಶಿಲ್ಪ(27) ಆಂಧ್ರ ಮೂಲದವರು, ಯುವಕ ಪ್ರಶಾಂತ್ ಬಾಣಸವಾಡಿ ಮೂಲದವ್ನು. ಇಬ್ಬರು ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡಿಕೊಂಡು ಪಿಜಿನಲ್ಲಿ ವಾಸ ಮಾಡ್ತಿದ್ದರು. ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದ್ದು, ಕಸದ ಲಾರಿ ಚಾಲಕ ಅಪಘಾತ ಬಳಿಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. 

ವಾಲ್ಮೀಕಿ, ಮುಡಾ ಅಕ್ರಮ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆ.3ರಿಂದ ಬಿಜೆಪಿ-ಜೆಡಿಎಸ್ 7 ದಿನಗಳ ಪಾದಯಾತ್ರೆ

ನಮಗೆ ನ್ಯಾಯ ಬೇಕಾಗಿದೆ: ಬಿಬಿಎಂಪಿ ವಾಹನ ಅಪಘಾತ ಆಗಿದೆ. ನನ್ನ ಮಗ ಹಾಗೂ ಯುವತಿ ಸಾವನ್ನಪ್ಪಿದ್ದಾರೆ. ಮೊದಲು ಪೊಲೀಸರು ಸರಿಯಾಗಿ ರೆಸ್ಪಾನ್ಸ್ ಕೂಡ ಮಾಡಿಲ್ಲ. ನಮಗೆ ನ್ಯಾಯ ಬೇಕಾಗಿದೆ. ಅಪಘಾತ ಮಾಡಿದ ಚಾಲಕನ ಬಂಧನ ಆಗಬೇಕು. ನನ್ನ ಮಗ ಪ್ರಶಾಂತ್ ಟಿಸಿಎಸ್ ನಲ್ಲಿ ಕೆಲಸ ಮಾಡ್ತಿದ್ದ. ಯುವತಿ ಕೂಡ ಅಲ್ಲೇ ಕೆಲಸ ಮಾಡ್ತಿದ್ದರು. ನನಗೆ ನ್ಯಾಯ ಬೇಕು, ನಾನಂತು ಬಿಡಲ್ಲ. ಇಲ್ಲದಿದ್ದರೂ ನಾನು ನನ್ನ ಪತ್ನಿ ಮತ್ತು ಮಗಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ತೇನೆ. ನನ್ನ ಮಗ ಮಾರ್ಥಾಸ್ ಆಸ್ಪತ್ರೆಯಲ್ಲಿಯೇ ಜನಿಸಿದ್ದ. ಇದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಮೃತ ಪ್ರಶಾಂತ್ ತಂದೆ ಲೋಕೇಶ್ ತಿಳಿಸಿದ್ದಾರೆ. ಇನ್ನು ಮಗನನ್ನ ಕಳೆದುಕೊಂಡು ತಂದೆ ತಾಯಿ ಕಣ್ಣೀರು ಹಾಕುತ್ತಿದ್ದು, ಆಸ್ಪತ್ರೆ ಎದುರು ಪ್ರಶಾಂತ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಜೊತೆಗೆ ಆಘಾತಕ್ಕೆ ಒಳಗಾಗಿ ಅಜ್ಜಿ ಕುಸಿದು ಬಿದಿದ್ದು, ರಾತ್ರಿ ಇಡೀ ಆಸ್ಪತ್ರೆ ಮುಂಭಾಗ ಸಂಬಂಧಿಕರು ಕಣ್ಣೀರು ಹಾಕಿದ್ದಾರೆ.

Latest Videos
Follow Us:
Download App:
  • android
  • ios